AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honda WR-V SUV: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!

ಹೋಂಡಾ ಕಾರ್ಸ್ ಕಂಪನಿಯು ಜಾಗತಿಕ ಮಾರುಕಟ್ಟೆಗಾಗಿ ತನ್ನ ಹೊಸ ಡಬ್ಲ್ಯುಆರ್-ವಿ ಕಂಪ್ಯಾಕ್ಟ್ ಎಸ್ ಯುವಿ ಅನಾವರಣಗೊಳಿಸಿದ್ದು, ಹೊಸ ಕಾರು ಭಾರತದಲ್ಲೂ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Honda WR-V SUV: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!
Honda WR-V
Praveen Sannamani
|

Updated on:Nov 07, 2022 | 4:43 PM

Share

ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳ ಕಾರು ಮಾದರಿಗಳಿಗೆ ಟಕ್ಕರ್ ನೀಡಲು ಈ ಬಾರಿ ಹೊಸ ಪ್ಲ್ಯಾನ್ ರೂಪಿಸಿದೆ. ಹೊಸ ಕಾರು ಮಾದರಿಯ ಯೋಜನೆಯನ್ನು ಈಗಾಗಲೇ ಖಚಿತಪಡಿಸಿರುವ ಹೋಂಡಾ ಕಂಪನಿಯು ಪ್ರಮುಖ ಕಂಪ್ಯಾಕ್ಟ್ ಎಸ್ ಯುವಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳ ಕ್ರೇಜ್ ಹೆಚ್ಚುತ್ತಿದ್ದು, ಇದೀಗ ಹೋಂಡಾ ಕಾರ್ಸ್ ಕಂಪನಿಯು ತನ್ನ ಮತ್ತೊಂದು ನವೀಕೃತ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಜಾಗತಿಕ ಮಾರುಕಟ್ಟೆಗಾಗಿ ತನ್ನ ಡಬ್ಲ್ಯುಆರ್-ವಿ(WR-V) ಕಂಪ್ಯಾಕ್ಟ್ ಎಸ್ ಯುವಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಇತ್ತೀಚೆಗೆ ಕಂಪನಿಯು ಹೊಸ ಕಾರನ್ನು ಇಂಡೋನೇಷ್ಯಾದಲ್ಲಿ ಅನಾವರಣಗೊಳಿಸಿದೆ. ಮುಂಬರುವ ದಿನಗಳಲ್ಲಿ ಭಾರತದಲ್ಲೂ ಹೊಸ ಕಾರು ಬಿಡುಗಡೆಯಾಗಲಿದ್ದು, 2023ರ ಡಬ್ಲ್ಯುಆರ್-ವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Honda WR-V

ವಿನ್ಯಾಸ ಮತ್ತು ಫೀಚರ್ಸ್ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹೋಂಡಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ ಜೊತೆ ವಿನ್ಯಾಸದಲ್ಲೂ ಮಹತ್ವದ ಬದಲಾವಣೆ ತಂದಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರಿಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಥಳಾವಕಾಶ ಒದಗಿಸಲಿದೆ. ಈ ಮೂಲಕ ಹೊಸ ಕಾರು ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸುವುದರ ಜೊತೆ ಹೊಸ ಲುಕ್ ನಲ್ಲಿ ಮಿಂಚಲಿದೆ. ಹೊಸ ಕಾರಿನ ಮುಂಭಾಗದ ವಿನ್ಯಾಸವು ಈ ಬಾರಿ ಸಂಪೂರ್ಣವಾಗಿ ಬದಲಾವಣೆಗೊಂಡಿದ್ದು, ಬಲಿಷ್ಠ ಎಸ್ ಯುವಿ ವಿನ್ಯಾಸವು ಗ್ರಾಹಕರನ್ನು ಸೆಳೆಯಲಿದೆ.

ಇದನ್ನೂ ಓದಿ: ಜನಪ್ರಿಯ ಕಿಯಾ ಕಾರೆನ್ಸ್ ಎಂಪಿವಿ ಇದೀಗ ಮತ್ತಷ್ಟು ದುಬಾರಿ

ಹೊಸ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣ ಹೊಸ ಡಬ್ಲ್ಯುಆರ್-ವಿ ಕಾರು ಹೊಸ ತಲೆಮಾರಿನ ಸಿಟಿ ಸೆಡಾನ್ ಮತ್ತು ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರುಗಳ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದೆ. ಇದರಲ್ಲಿ ಕಂಪನಿಯು ಟ್ಯಾಪರಿಂಗ್ ರೂಫ್ ಲೈನ್, ಆ್ಯಂಗುಲರ್ ಟೈಲ್ ಗೇಟ್, ಸ್ಪೋರ್ಟಿ ಶೋಡ್ಡರ್ ಲೈನ್, ಬಾಡಿ ಕ್ಲ್ಯಾಡಿಂಗ್, ವ್ಹೀಲ್ ಆರ್ಚ್ ಮತ್ತು 16 ಇಂಚಿನ ಅಲಾಯ್ ವ್ಹೀಲ್ ಸೌಲಭ್ಯ ಪಡೆದುಕೊಳ್ಳಲಿದೆ. ಹಾಗೆಯೇ ಕಾರಿನ ಒಳಭಾಗದಲ್ಲೂ ಹಲವು ಹೊಸ ಸೌಲಭ್ಯಗಳಿದ್ದು, ಸ್ಪೋರ್ಟಿ ವರ್ಷನ್ ನಲ್ಲಿ ಆಲ್ ಬ್ಲ್ಯಾಕ್ ಇಂಟಿರಿಯರ್, ಅನಲಾಗ್ ಡಯಲ್, 4.2 ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ ಪ್ಲೇ, ಮಲ್ಟಿ ಜೋನ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಹೊಂದಿರಲಿದೆ.

Honda WR-V

ಎಂಜಿನ್ ಮತ್ತು ಪರ್ಫಾಮೆನ್ಸ್ ಹೊಸ ಕಾರಿನಲ್ಲಿ ಹೋಂಡಾ ಕಂಪನಿಯು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಇದು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಮೂಲಕ ಹೊಸ ಕಾರು 121 ಬಿಎಚ್ ಪಿ ಮತ್ತು 145 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿನ ಗೇರ್ ಬಾಕ್ಸ್ ಆಯ್ಕೆಯನ್ನೇ ಹೊಸ ಕಾರಿನಲ್ಲಿ ಬಳಕೆ ಮಾಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಸಿಎನ್​ಜಿ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು ಹೊಸ ಕಾರು ಅತ್ಯುತ್ತಮ ಪರ್ಫಾಮೆನ್ಸ್ ಹಾಗೂ ಪ್ರೀಮಿಯಂ ಫೀಚರ್ಸ್ ಜೊತೆಗೆ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರಿನಲ್ಲಿ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸ ಸೇಫ್ಟಿ ಫೀಚರ್ಸ್ ನೀಡಿದೆ. ಹೊಸ ಕಾರಿನಲ್ಲಿ ಈ ಬಾರಿಗೆ ಗರಿಷ್ಠ ಸುರಕ್ಷತೆಗಾಗಿ 6 ಏರ್ ಬ್ಯಾಗ್, ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಪ್ರಮುಖ ಫೀಚರ್ಸ್ ಗಳಿವೆ. ಜೊತೆಗೆ ಹೊಸ ಕಾರು ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಹೈರೈಡರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Published On - 4:31 pm, Mon, 7 November 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ