ಅಪಘಾತಗಳನ್ನು ತಗ್ಗಿಸಲು ಇನ್ಮುಂದೆ ಈ ಸೇಫ್ಟಿ ಫೀಚರ್ಸ್ ಅಳವಡಿಕೆ ಕಡ್ಡಾಯ!

ಭಾರತದಲ್ಲಿ ದಿನಂಪ್ರತಿ ನೂರಾರು ಭೀಕರ ಅಪಘಾತ ಪ್ರಕರಣಗಳು ದಾಖಲಾಗುತ್ತಿದ್ದು, ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಅಪಘಾತಗಳ ತಡೆಯಾಗಿ ರಸ್ತೆ ಸೌಲಭ್ಯಗಳ ಸುಧಾರಣೆ ಜೊತೆಗೆ ವಾಹನಗಳ ಸುರಕ್ಷತೆಯಲ್ಲೂ ಗಮನಾರ್ಹ ಬದಲಾವಣೆ ತರಲಾಗುತ್ತಿದೆ.

ಅಪಘಾತಗಳನ್ನು ತಗ್ಗಿಸಲು ಇನ್ಮುಂದೆ ಈ ಸೇಫ್ಟಿ ಫೀಚರ್ಸ್ ಅಳವಡಿಕೆ ಕಡ್ಡಾಯ!
ಅಪಘಾತಗಳನ್ನು ತಗ್ಗಿಸಲು ಇನ್ಮುಂದೆ ಈ ಸೇಫ್ಟಿ ಫೀಚರ್ಸ್ ಅಳವಡಿಕೆ ಕಡ್ಡಾಯ!
Follow us
Praveen Sannamani
|

Updated on:Nov 13, 2023 | 4:59 PM

ದೇಶಾದ್ಯಂತ ಹೊಸ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದ್ದು, ವಾಹನಗಳು ಹೆಚ್ಚಿದ್ದಂತೆ ಅಪಘಾತ ಪ್ರಕರಣಗಳ ಸಂಖ್ಯೆ ಕೂಡಾ ಸಾಕಷ್ಟು ಏರಿಕೆಯಾಗಿದೆ. ಸುರಕ್ಷಿತ ವಾಹನ ಚಾಲನೆಗಾಗಿ ಹಲವಾರು ಸಂಚಾರಿ ನಿಯಮಗಳನ್ನು ಜಾರಿಗೆ ತಂದರೂ ಕೂಡಾ ಅಪಘಾತಗಳಲ್ಲಿ ಪ್ರಾಣಕಳೆದುಕೊಳ್ಳುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೆ ಇದೆ. ಇತ್ತೀಚೆಗೆ ಬಿಡುಗಡೆಯಾಗುವ ಹೊಸ ವಾಹನಗಳು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಿದ್ದರೂ ಹಳೆಯ ವಾಹನಗಳಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಅಪಘಾತಗಳ ಸಂಖ್ಯೆ ತಗ್ಗಿಸುವುದಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ವಾಹನಗಳಲ್ಲಿ ಮತ್ತೊಂದು ಸುರಕ್ಷಾ ಸೌಲಭ್ಯ ಅಳವಡಿಕೆಯನ್ನು ಕಡ್ಡಾಯಗೊಳಿಸಲು ಮುಂದಾಗಿದೆ.

ಅಪಘಾತಗಳನ್ನು ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಬಲ್ಲ ಕೂಲಿಷನ್ ವಾರ್ನಿಂಗ್ ಸಿಗ್ನಲ್ ಸೌಲಭ್ಯನ್ನು ಮುಂಬರುವ ಎಲ್ಲಾ ಮಾದರಿಯ ಹೊಸ ವಾಹನಗಳಲ್ಲೂ ಕಡ್ಡಾಯವಾಗಿ ಜೋಡಣೆ ಮಾಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ಫೀಚರ್ಸ್ ಕಡ್ಡಾಯಕ್ಕೆ ಅಂತಿಮ ದಿನದ ಗಡುವು ಪ್ರಕಟಿಸಲು ಸಿದ್ದವಾಗುತ್ತಿದೆ.

ಇದನ್ನೂ ಓದಿ: ನಿಮ್ಮ ಕಾರು ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸುವ ಆಕ್ಸೆಸರಿಸ್ ಗಳಿವು!

ಹೊಸ ಮೂವಿಂಗ್ ಆಫ್ ಇನ್ಫರ್ಮೇಷನ್ ಸಿಸ್ಟಮ್ (MOIS) ಸೌಲಭ್ಯವು ಸಂಭವನೀಯ ಅಪಘಾತ ಪ್ರಕರಣಗಳನ್ನು ತಗ್ಗಿಸಲಿದ್ದು, ಇದು ವಾಹನ ಚಾಲನೆ ವೇಳೆ ಆಕಸ್ಮಿಕವಾಗಿ ವಿರುದ್ದ ದಿಕ್ಕಿನಲ್ಲಿ ನುಗ್ಗುವ ಇತರೆ ವಾಹನಗಳ ಮಾಹಿತಿ ಜೊತೆಗೆ ಪಾದಾಚಾರಿಗಳ ಮಾಹಿತಿಯನ್ನು ಒದಗಿಸುವ ಮೂಲಕ ಅಪಘಾತಗಳನ್ನು ತಡೆಯಬಲ್ಲದು. ಸೆನ್ಸಾರ್ ಮೂಲಕ ಕಾರ್ಯನಿರ್ವಹಿಸುವ ಕೂಲಿಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವು ಅಪಘಾತಕ್ಕೂ ಮುನ್ನ ಚಾಲಕನಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಲಿದ್ದು, ಈ ವೇಳೆ ಚಾಲಕ ಅಪಘಾತದಿಂದ ಪಾರಾಗಲು ಸಹಕಾರಿಯಾಗುವುದರ ಜೊತೆಗೆ ಸಾವು ನೋವಿನ ಪ್ರಮಾಣವನ್ನು ತಗ್ಗಿಸಬಹುದಾಗಿದೆ.

ಹೊಸ ಸುರಕ್ಷಾ ಸೌಲಭ್ಯವು ಇತ್ತೀಚೆಗೆ ಹಲವು ಹೊಸ ಕಾರುಗಳಲ್ಲಿ ಜೋಡಣೆ ಮಾಡಲಾಗಿದ್ದು, ಎಡಿಎಎಸ್ ಸೇಫ್ಟಿ ಸೂಟ್ ಹೊಂದಿರುವ ಕಾರುಗಳಲ್ಲಿ ಈ ಸೌಲಭ್ಯವನ್ನು ನೋಡಬಹುದಾಗಿದೆ. ಆದರೆ ಕೇಂದ್ರ ಸರ್ಕಾರವು ಇದೀಗ ಪ್ರತಿ ಕಾರು ಮಾದರಿಗಳೂ ಮತ್ತು ವಾಣಿಜ್ಯ ವಾಹನಗಳಲ್ಲೂ ಹೊಸ ಫೀಚರ್ಸ್ ಜೋಡಣೆ ಕಡ್ಡಾಯಕ್ಕೆ ಸಿದ್ದವಾಗಿದೆ. ಹೊಸ ನಿಯಮ ಅಳವಡಿಕೆ ಜಾರಿಗಾಗಿ ಈಗಾಗಲೇ ಕರಡು ಚೌಕಟ್ಟನ್ನು ಅಂತಿಮಗೊಳಿಸಲಾಗಿದ್ದು, ಮುಂಬರುವ 2024 ಏಪ್ರಿಲ್ 1ರಿಂದಲೇ ಕಡ್ಡಾಯವಾಗಿ ಜಾರಿಗೆ ಬರುವ ಸಾಧ್ಯತೆಗಳಿವೆ.

ಇನ್ನು ಕಳೆದ ವರ್ಷ 2022ರ ಅವಧಿಯಲ್ಲಿ ದೇಶಾದ್ಯಂತ ಬರೋಬ್ಬರಿ 4,61,312 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ ಬರೋಬ್ಬರಿ 1,68,491 ಜನ ಪ್ರಾಣಕಳೆದುಕೊಂಡಿದ್ದಾರೆ. ಭಾರತದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವೆಂದರೆ ಅತಿವೇಗದ ಚಾಲನೆ ಎಂದು ಗುರುತಿಸಲಾಗಿದ್ದು, ತದನಂತರದಲ್ಲಿ ಅಜಾಗರೂಕ ಚಾಲನೆ, ಕುಡಿದು ವಾಹನ ಚಾಲನೆ, ಸಂಚಾರ ನಿಯಮ ಪಾಲಿಸದಿರುವುದು ಕೂಡಾ ಪ್ರಮುಖ ಕಾರಣಗಳಾಗಿವೆ. ಇದರಲ್ಲಿ ಮತ್ತೊಂದು ಆತಂಕ ಮಾಹಿತಿಯೆಂದರೆ ಕಳೆದ ವರ್ಷದ ಅಪಘಾತದಲ್ಲಿ ಮರಣ ಹೊಂದಿದವರಲ್ಲಿ ಶೇ. 40 ರಷ್ಟು ಜನ 18 ರಿಂದ 35 ವಯಸ್ಸಿನವರು ಎಂದು ಅಪಘಾತಗಳ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ADAS ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

ಹಾಗೆಯೇ ಕಳೆದ ವರ್ಷ ಪ್ರತಿ ಗಂಟೆಗೆ ದೇಶಾದ್ಯಂತ ಬರೋಬ್ಬರಿ 19 ಮಂದಿ ಅಪಘಾತದಲ್ಲಿ ಪ್ರಾಣಕಳೆದುಕೊಂಡಿದ್ದು, ತಮಿಳುನಾಡಿನಲ್ಲಿ ಅತಿ ಹೆಚ್ಚು ಅಪಘಾತಗಳ ಸಂಖ್ಯೆ ದಾಖಲಾಗಿದ್ದರೆ ಉತ್ತರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಜನ ಪ್ರಾಣಕಳೆದುಕೊಂಡಿದ್ದಾರೆ. ಅಪಘಾತಗಳಿಗೆ ಕಾರಣವಾಗುವ ಅಂಶಗಳನ್ನು ಪರಿಹರಿಸಲು ಸಮಗ್ರ ವಿಧಾನದ ಅಗತ್ಯವನ್ನು ಅಪಘಾತಗಳ ವಾರ್ಷಿಕ ವರದಿಯಲ್ಲಿ ಒತ್ತಿ ಹೇಳಲಾಗಿದ್ದು, ಇದಕ್ಕಾಗಿ ಚಾಲಕ ಶಿಕ್ಷಣ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿಸುವುದು, ರಸ್ತೆ ಮತ್ತು ವಾಹನದ ಸುರಕ್ಷತೆಗಳನ್ನು ಸುಧಾರಿಸುವತ್ತ ಗಮನಹರಿಸಲಾಗುತ್ತಿದೆ.

Published On - 4:57 pm, Mon, 13 November 23

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ