ಗ್ರ್ಯಾಂಡ್‌ಮಾಸ್ಟರ್ ಪ್ರಗ್ನಾನಂದ ಪೋಷಕರಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ

ದೇಶದ ಪ್ರಖ್ಯಾತ ಉದ್ಯಮಿಯಾಗಿರುವ ಆನಂದ್ ಮಹೀಂದ್ರಾ ಅವರು ಚೆಸ್ ವಿಶ್ವಕಪ್ ನಲ್ಲಿ ರನ್ನರ್-ಅಪ್ ಆಗಿರುವ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಪೋಷಕರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಗ್ರ್ಯಾಂಡ್‌ಮಾಸ್ಟರ್ ಪ್ರಗ್ನಾನಂದ ಪೋಷಕರಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ
ಪ್ರಗ್ನಾನಂದ ಪೋಷಕರಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ
Follow us
Praveen Sannamani
|

Updated on:Aug 29, 2023 | 6:40 PM

ಅಜರ್‌ಬೈಜಾನ್‌ನ ಬಾಕುದಲ್ಲಿ ನಡೆದಿದ್ದ ಚೆಸ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಪ್ರತಿಸ್ಪರ್ಧಿ ವಿಶ್ವದ ನಂಬರ್ 1 ಚೆಸ್​ ತಾರೆ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ದ ವಿರೋಚಿತ ಸೋಲು ಕಂಡರೂ ಕೂಡಾ ಕೋಟ್ಯಾಂತರ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಪ್ರಗ್ನಾನಂದ ಪ್ರತಿಭೆಗೆ ಉದ್ಯಮಿಯಾಗಿರುವ ಆನಂದ್ ಮಹೀಂದ್ರಾ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಗ್ನಾನಂದ ಸಾಧನೆಗೆ ಕಾರಣರಾದ ಪೋಷಕರಿಗೆ ವಿಶೇಷ ಉಡುಗೊರೆ ಪ್ರಕಟಿಸಿದ್ದಾರೆ.

ಆರ್ ಪ್ರಗ್ನಾನಂದ ಪೋಷಕರಿಗೆ ಆನಂದ್ ಮಹೀಂದ್ರಾ ಅವರು ಹೊಸ ಎಕ್ಸ್ ಯುವಿ400 ಎಲೆಕ್ಟ್ರಿಕ್ ಎಸ್ ಯುವಿ ಕಾರು ಮಾದರಿಯನ್ನು ಉಡುಗೊರೆ ಪ್ರಕಟಿಸಿದ್ದು, ಪ್ರಗ್ನಾನಂದ ಅವರ ತಾಯಿ ನಾಗಲಕ್ಷ್ಮಿ ಹಾಗೂ ತಂದೆ ರಮೇಶ್ ಬಾಬು ತಮ್ಮ ಮಗನ ಆಸಕ್ತಿಯನ್ನು ಪ್ರೋತ್ಸಾಹ ನೀಡಿದ್ದಕ್ಕಾಗಿ ನಿಜವಾಗಿಯೂ ಅವರಿಗೆ ಕೃತಜ್ಞತೆಗೆ ಸಲ್ಲಿಸಬೇಕಾಗಿದೆ ಎಂದಿದ್ದಾರೆ.

Anand Mahindra

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಆನಂದ್ ಮಹೀಂದ್ರಾ ಅವರು ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದು, ಅಭಿಮಾನಗಳ ಆಗ್ರಹದ ಮೇರೆಗೆ ಆರ್ ಪ್ರಗ್ನಾನಂದ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅಭಿಮಾನಿಗಳ ಆಗ್ರಹಕ್ಕೆ ಪ್ರತಿಕ್ರಿಯೆಸಿರುವ ಆನಂದ್ ಮಹೀಂದ್ರಾ ಅವರು ನೀವೆಲ್ಲರೂ ಪ್ರಗ್ನಾನಂದಗೆ ಥಾರ್ ಕಾರನ್ನು ಉಡುಗೊರೆಯಾಗಿ ನೀಡುವಂತೆ ಹೇಳಿದ್ದಿರಿ, ಆದರೆ ನನ್ನಲ್ಲಿ ಮತ್ತೊಂದು ಆಲೋಚನೆ ಬಂದಿದೆ. ಚೆಸ್ ನತ್ತ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಮಾಡಿದ ಅವರ ಪೋಷಕರನ್ನು ನಾನು ಬೆಂಬಲಿಸಲು ಬಯಸಿದ್ದು, ಕ್ರೀಡಾ ಮನೋಭಾವನೆಯನ್ನು ಬೆಳೆಸುವಲ್ಲಿ ಶ್ರಮಿಸಿರುವ ಪೋಷಕರನ್ನು ಬೆಂಬಲಿಸಲು ನಾನು ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟೊಯೊಟಾ ರೂಮಿಯಾನ್ ಬಿಡುಗಡೆ

ಉಡುಗೊರೆಯಾಗಿ ಸಿಕ್ತು ಎಕ್ಸ್ ಯುವಿ400 ಇವಿ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿ ಮೆಚ್ಚುಗೆಯ ಮಾತುಗಳನ್ನಾಡುವ ಆನಂದ್ ಮಹೀಂದ್ರಾ ಅವರು ಪ್ರತಿ ಬಾರಿಯೂ ಒಂದಿಲ್ಲಾ ಒಂದು ವಿಶೇಷ ಉಡುಗೊರೆಯನ್ನು ಪ್ರಕಟಿಸುತ್ತಿರುತ್ತಾರೆ. ಈ ಹಿಂದೆಯೂ ಹಲವಾರು ಕ್ರೀಡಾಪಟುಗಳಿಗೆ ಕಾರುಗಳನ್ನು ವಿಶೇಷ ಉಡುಗೊರೆಯಾಗಿ ಪ್ರಕಟಿಸಿದ್ದು, ಇದೀಗ ಆರ್ ಪ್ರಗ್ನಾನಂದ ಪೋಷಕರಿಗೆ ಎಕ್ಸ್ ಯುವಿ400 ಇವಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಭಾರತದ ಸದ್ಯ ಅತ್ಯುತ್ತಮ ಇವಿ ಕಾರು ಪಟ್ಟಿಯಲ್ಲಿ ಉತ್ತಮ ಬೇಡಿಕೆ ಹೊಂದಿರುವ ಎಕ್ಸ್ ಯುವಿ400 ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ.15.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.19.39 ಲಕ್ಷ ಬೆಲೆ ಹೊಂದಿದೆ. ಈ ಹೊಸ ಇವಿ ಕಾರು ಗ್ರಾಹಕರ ಬೇಡಿಕೆ ಆಧರಿಸಿ ಇಸಿ ಮತ್ತು ಇಎಲ್ ಎನ್ನುವ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎರಡು ರೀತಿಯ ಬ್ಯಾಟರಿ ಆಯ್ಕೆ ಹೊಂದಿದೆ.

Mahindra XUV400 EV

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ನಾಲ್ಕು ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೊಸ ಎಕ್ಸ್ ಯುವಿ400 ಕಾರಿನಲ್ಲಿ 34.5kWh ಮತ್ತು 39.4kWh ಬ್ಯಾಟರಿ ಪ್ಯಾಕ್ ಆಯ್ಕೆಗಳನ್ನು ನೀಡಲಾಗಿದ್ದು, ಇದರಲ್ಲಿ 34.5kWh ಬ್ಯಾಟರಿ ಪ್ಯಾಕ್ ಹೊಂದಿರುವ ವೆರಿಯೆಂಟ್ ಪ್ರತಿ ಚಾರ್ಜ್ ಗೆ 375 ಕಿ.ಮೀ ಮೈಲೇಜ್ ನೀಡಲಿದ್ದರೆ 39.4kWh ಬ್ಯಾಟರಿ ಪ್ಯಾಕ್ ಹೊಂದಿರುವ ವೆರಿಯೆಂಟ್ ಪ್ರತಿ ಚಾರ್ಜ್ ಗೆ 456 ಕಿ.ಮೀ ಮೈಲೇಜ್ ನೀಡುತ್ತದೆ. ಜೊತೆಗೆ ಹೊಸ ಕಾರಿನಲ್ಲಿ ಫನ್, ಫಾಸ್ಟ್ ಮತ್ತು ಫಿಯರ್‌ಲೆಸ್ ಎಂಬ ಮೂರು ಡ್ರೈವಿಂಗ್ ಮೋಡ್ ನೀಡಲಾಗಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಗಳು ಈ ಕಾರಿನಲ್ಲಿವೆ.

ಆಕರ್ಷಕ ಬೆಲೆ, ಅತ್ಯುತ್ತಮ ಡ್ರೈವಿಂಗ್ ಟೆಕ್ನಾಲಜಿ ಜೊತೆಗೆ ಎಕ್ಸ್ ಯುವಿ400 ಕಾರಿನಲ್ಲಿ ಭರ್ಜರಿ ಸೇಫ್ಟಿ ಫೀಚರ್ಸ್ ನೀಡಲಾಗಿದ್ದು, 6 ಏರ್ ಬ್ಯಾಗ್, ಕಾರ್ನರ್ ಬ್ರೇಕಿಂಗ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕಿಂಗ್ ಸಿಸ್ಟಂ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಹಿಲ್ ಹೋಲ್ಡ್ ಅಸಿಸ್ಟ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

Published On - 6:36 pm, Tue, 29 August 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ