ಎಲೆಕ್ಟ್ರಿಕ್ ಸ್ಕೂಟರ್ ಖರೀದಿದಾರರಿಗೆ ಹೊಸ ಆಫರ್ ಘೋಷಿಸಿದ ಎಥರ್ ಎನರ್ಜಿ..

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವಿ ವಾಹನ ಖರೀದಿಗೆ ಉತ್ತೇಜಿಸಲು ಎಥರ್ ಎನರ್ಜಿ ಹೊಸ ಆಫರ್ ಘೋಷಣೆ ಮಾಡಿದೆ.

Follow us
Praveen Sannamani
|

Updated on: Jul 17, 2023 | 9:33 PM

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರಿಗೆ ಹೊಸ ಆಫರ್ ಘೋಷಣೆ ಮಾಡಿದ್ದು, ವಿವಿಧ ಹಣಕಾಸು ಸಂಸ್ಥೆಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಸೌಲಭ್ಯ ಪರಿಚಯಿಸಿದೆ. ಹೊಸ ಯೋಜನೆಯಿಂದ ಗ್ರಾಹಕರು ಸುಲಭವಾಗಿ ಮಾಲೀಕತ್ವ ಹೊಂದಬಹುದಾಗಿದ್ದು, ಹೊಸ ಸಾಲ ಸೌಲಭ್ಯಗಳ ಮೇಲೆ ಆಕರ್ಷಕ ಇಎಂಐ ವಿಧಿಸಲಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ 450ಎಕ್ಸ್ ಮತ್ತು 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದೊಂದಿಗೆ ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಎಥರ್ ಎನರ್ಜಿ ಕಂಪನಿಯು ಪ್ರಮುಖ ಬ್ಯಾಂಕ್ ಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಆಫರ್ ನೀಡುತ್ತಿದೆ. ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಹೆಚ್ ಡಿಎಫ್ ಸಿ, ಐಸಿಐಸಿ ಬ್ಯಾಂಕ್, ಬಜಾಜ್ ಫೈನಾನ್ಸ್, ಆಕ್ಸಿಸ್ ಬ್ಯಾಂಕ್, ಹೀರೋ ಫಿನ್ ಕಾರ್ಪ್, ಚೋಳಮಂಡಲಂ ಫೈನಾನ್ಸ್ ಮೂಲಕ ಶೇ.100 ಆನ್ ರೋಡ್ ಲೋನ್ ನೀಡಲಾಗುತ್ತಿದೆ.

ಹೊಸ ಇವಿ ಸ್ಕೂಟರ್ ಖರೀದಿದಾರರು ಗರಿಷ್ಠ 60 ತಿಂಗಳಿಗೆ ಅನ್ವಯಿಸುವಂತೆ ಹೊಸ ಲೋನ್ ಆಯ್ಕೆ ಮಾಡಬಹುದಾಗಿದ್ದು, ಪ್ರತಿ ತಿಂಗಳಿಗೆ ಕನಿಷ್ಠ ರೂ. 2,999 ಇಎಂಐ ದರ ನಿಗದಿ ಮಾಡಲಾಗಿದೆ. ಹೀಗಾಗಿ ಎಥರ್ ಕಂಪನಿಯ ಇವಿ ಸ್ಕೂಟರ್ ಮಾರಾಟವು ಮುಂಬರುವ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್