Ather: ಶೀಘ್ರದಲ್ಲಿಯೇ ಬಜೆಟ್ ಬೆಲೆಯ ಹೊಸ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಎಥರ್
ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಇವಿ ಸ್ಕೂಟರ್ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗುತ್ತಿದೆ.
ಪ್ರೀಮಿಯಂ ಇವಿ ಸ್ಕೂಟರ್(Electric Scooter) ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ(Ather Energy) ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಜನವರಿ 7ರಂದು ಹೊಸ ಮಾದರಿಯನ್ನು ಅನಾವರಣಗೊಳಿಸಲು ಸಿದ್ದವಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಕಂಪನಿಯು 450 ಎಕ್ಸ್ ಮತ್ತು 450 ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಎಥರ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಬಜೆಟ್ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದೆ.
ಹೌದು, ದುಬಾರಿ ಬೆಲೆ ನಡುವೆಯೂ ಪ್ರೀಮಿಯಂ ಇವಿ ಸ್ಕೂಟರ್ ವಿಭಾಗದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಎಥರ್ ಕಂಪನಿ, ಜನವರಿ 7ರಂದು ಹೊಸ ಇವಿ ಸ್ಕೂಟರ್ ಮಾದರಿಯನ್ನು ಅನಾವರಣಗೊಳಿಸುತ್ತಿದೆ. ಹೊಸ ಇವಿ ಸ್ಕೂಟರ್ ಮಾದರಿಯು ಸಾಮಾನ್ಯ ಇವಿ ಮಾದರಿಗಳಿಂತಲೂ ತುಸು ವಿಭಿನ್ನವಾದ ವಿನ್ಯಾಸ ಹೊಂದಿರಲಿದೆ. ಇದು ಮ್ಯಾಕ್ಸಿ ಸ್ಕೂಟರ್ ವಿಭಾಗಕ್ಕೆ ಲಗ್ಗೆಯಿಡಲಿದ್ದು, ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ಹೊಂದಿರಲಿದೆ.
ಇದನ್ನೂ ಓದಿ: ಬಜೆಟ್ ಬೆಲೆಯ ಬಜಾಜ್ ಪ್ಲಾಟಿನಾ 110 ಎಬಿಎಸ್ ಆವೃತ್ತಿ ಬಿಡುಗಡೆ
ಪ್ರೀಮಿಯಂ ಬೆಲೆ ನಡುವೆಯೂ ವಿಭಿನ್ನವಾದ ಇವಿ ಸ್ಕೂಟರ್ ಮೂಲಕ ಗಮನಸೆಳೆದಿರುವ ಎಥರ್ ಕಂಪನಿಯು ಈ ಬಾರಿ ಹೆಚ್ಚಿನ ಮೈಲೇಜ್ ಹೊಂದಿರುವ ಇವಿ ಮಾದರಿಯನ್ನು ಅಭಿವೃದ್ದಿಪಡಿಸಿದೆ. ಹೊಸ ಇವಿ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಓಲಾ ಎಸ್ 1 ಪ್ರೊ ಇವಿ ಸ್ಕೂಟರ್ ಗೆ ತ್ರೀವ ಪೈಪೋಟಿ ನೀಡಲಿದೆ. ಇದು ಪ್ರತಿ ಚಾರ್ಜ್ ಗೆ 160 ರಿಂದ 180 ಕಿ.ಮೀ ಮೈಲೇಜ್ ಹೊಂದಿರಲಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಬೆಲೆಯಲ್ಲೂ ಗಮನಸೆಳೆಯಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ 450 ಪ್ಲಸ್ ಮತ್ತು 450 ಎಕ್ಸ್ ಮಾದರಿಗಳು ಬೆಂಗಳೂರು ಎಕ್ಸ್ ಶೋರೂಂ ಪ್ರಕಾರ ರೂ. 1.35 ಲಕ್ಷದಿಂದ ರೂ. 1.56 ಲಕ್ಷದ ತನಕ ಬೆಲೆ ಹೊಂದಿವೆ. ಹೀಗಾಗಿ ಹೊಸ ಇವಿ ಸ್ಕೂಟರ್ ಅನ್ನು ಪ್ರಸ್ತುತ ಮಾದರಿಗಿಂತಲೂ ತುಸು ಕಡಿಮೆ ಬೆಲೆಗೆ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಬೆಲೆ ಇಳಿಕೆಗಾಗಿ ಕೆಲವು ಪ್ರೀಮಿಯಂ ಫೀಚರ್ಸ್ ಕೈಬಿಡಬಹುದಾಗಿದೆ. ಆದರೆ ಸುರಕ್ಷಿತ ಚಾಲನೆ ಬೇಕಾದ ಪ್ರಮುಖ ಫೀಚರ್ಸ್ ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಇದು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.
ಇದನ್ನೂ ಓದಿ: ಭಾರತದಲ್ಲಿ ಬಿಡುಗಡೆಯಾಗಲಿದೆ ಬಿಎಂಡಬ್ಲ್ಯು ಸಿಇ 04 ಇವಿ ಸ್ಕೂಟರ್
ಇನ್ನು 2022ರ ಇವಿ ಸ್ಕೂಟರ್ ಮಾದರಿಗಳೊಂದಿಗೆ ಎಥರ್ ಕಂಪನಿಯ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೊಸ ಮಾರಾಟ ದಾಖಲೆಯೊಂದಿಗೆ ಕಂಪನಿಯು ಹೊಸೂರಿನಲ್ಲಿರುವ ತನ್ನ ಇವಿ ಸ್ಕೂಟರ್ ಉತ್ಪಾದನಾ ಘಟಕವನ್ನು ವಿಸ್ತರಿಸುತ್ತಿದ್ದು, ಮಾರಾಟ ಮಳಿಗೆಗಳನ್ನು ಕೂಡಾ ಹೆಚ್ಚಿಸಿದೆ. ಸದ್ಯ ಕರ್ನಾಟಕದಲ್ಲಿ ನಮ್ಮ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಮಾರಾಟ ಮಳಿಗೆ ಹೊಂದಿದ್ದು, ಹೊಸ ಇವಿ ಸ್ಕೂಟರ್ ಬಿಡುಗಡೆ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಮಾರಾಟ ಮಳಿಗೆಗಳನ್ನು ಆರಂಭಿಸಲಿದೆ.
Published On - 7:55 pm, Fri, 30 December 22