Ather Rizta: ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್

ಎಥರ್ ಎನರ್ಜಿ ಕಂಪನಿ ಶೀಘ್ರದಲ್ಲಿಯೇ ತನ್ನ ಹೊಸ ರಿಜ್ಟಾ ಇವಿ ಸ್ಕೂಟರ್ ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಸ್ಕೂಟರ್ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ.

Ather Rizta: ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್
ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್
Follow us
Praveen Sannamani
|

Updated on: Mar 29, 2024 | 10:40 PM

ವಿನೂತನ ಫೀಚರ್ಸ್ ಗಳೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ (Ather Energy) ಕಂಪನಿ ಮತ್ತೊಂದು ಹೊಸ ಇವಿ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಬಹುನೀರಿಕ್ಷಿತ ರಿಜ್ಟಾ (Rizta) ಇವಿ ಸ್ಕೂಟರ್ ಬಿಡುಗಡೆಗಾಗಿ ಸಿದ್ದವಾಗಿದ್ದು, ಹೊಸ ಇವಿ ಸ್ಕೂಟರ್ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಇದಕ್ಕಾಗಿ ಎಥರ್ ಕಂಪನಿಯು ರೂ. 999 ಮುಂಗಡದೊಂದಿಗೆ ಬುಕಿಂಗ್ ಆರಂಭಿದ್ದು, ಇವಿ ಸ್ಕೂಟರ್ ವಿಭಾಗದಲ್ಲಿ ಹೊಸ ಅಲೆ ಸೃಷ್ಠಿಸುವ ನೀರಿಕ್ಷೆಯಲ್ಲಿದೆ.

ಹೌದು, ಎಥರ್ ಕಂಪನಿ ಪ್ರಸ್ತುತ ಮಾರುಕಟ್ಟೆಯಲ್ಲಿ 450 ಎಕ್ಸ್, 450 ಎಸ್ ಮತ್ತು 450 ಅಪೆಕ್ಸ್ ಇವಿ ಸ್ಕೂಟರ್ ಗಳನ್ನು ಮಾರಾಟ ಮಾಡುತ್ತಿದೆ. ಇದೀಗ ರಿಜ್ಟಾ ಇವಿ ಸ್ಕೂಟರ್ ಮೂಲಕ ಮಧ್ಯಮ ಕ್ರಮಾಂಕದ ಹಲವು ಪೆಟ್ರೋಲ್ ಸ್ಕೂಟರ್ ಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡುತ್ತಿದೆ. ಹೊಸ ರಿಜ್ಟಾ ಸ್ಕೂಟರ್ ಈ ಹಿಂದಿನ 450 ಸರಣಿ ಸ್ಕೂಟರ್ ಗಳಿಂತಲೂ ತುಸು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದ್ದು, ಇದು ಹಲವಾರು ಪ್ರಾಯೋಗಿಕ ವೈಶಿಷ್ಟ್ಯತೆಗಳನ್ನು ಹೊಂದಿರಲಿದೆ.

ಹೊಸ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಎಥರ್ ಕಂಪನಿಯು ಹೆಚ್ಚಿನ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆಗೆ ಹಲವಾರು ಹೊಸ ಫೀಚರ್ಸ್ ನೀಡಿದೆ. ಹಾಗೆಯೇ ಹೊಸ ಇವಿ ಸ್ಕೂಟರ್ ನಲ್ಲಿ ಈ ಬಾರಿ ಆರಾಮದಾಯಕವಾಗಿ ಪ್ರಯಾಣಿಸಲು ದೊಡ್ಡದಾದ ಆಸನ ಸೌಲಭ್ಯ ನೀಡಿದ್ದು, ಇದರೊಂದಿಗೆ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಲೈಟಿಂಗ್ ನಂತಹ ಅತ್ಯಾಧುನಿಕ ವೈಶಿಷ್ಟ್ಯತೆಗಳನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: ಬಿಡುಗಡೆಯಾಗಲಿರುವ ಹೊಸ ಯಮಹಾ ಆರ್‌ಎಕ್ಸ್100 ವಿಶೇಷತೆಗಳೇನು?

ರಿಜ್ಟಾ ಇವಿ ಸ್ಕೂಟರ್ ಅನ್ನು ಎಥರ್ ಕಂಪನಿ ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಮಾರಾಟಗೊಳಿಸಬಹುದಾಗಿದ್ದು, ವಿವಿಧ ಬ್ಯಾಟರಿ ಆಯ್ಕೆ ಪಡೆಯಬಹುದಾಗಿದೆ. ಇವು ಪ್ರತಿ ಚಾರ್ಜ್ ಗೆ 120 ರಿಂದ 140 ಕಿ.ಮೀ ಮೈಲೇಜ್ ನೀಡಬಹುದಾಗಿದ್ದು, ಕಾರ್ಯಕ್ಷಮತೆ ಬಗ್ಗೆ ಇನ್ನು ಯಾವುದೇ ಮಾಹಿತಿ ನೀಡಲಾಗಿಲ್ಲ. ಈ ಮೂಲಕ ಇದು ಟಿವಿಎಸ್ ಐಕ್ಯೂಬ್ ಮತ್ತು ಓಲಾ ಎಸ್ ಸರಣಿ ಸ್ಕೂಟರ್ ಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಏಪ್ರಿಲ್ 6ಕ್ಕೆ ಹೊಸ ಸ್ಕೂಟರಿನ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

ಇನ್ನು ಎಥರ್ ಕಂಪನಿಯು ಕಳೆದ ತಿಂಗಳ ಹಿಂದಷ್ಟೇ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿತ್ತು. ಹೊಸ ಇವಿ ಸ್ಕೂಟರ್ ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 1.89 ಲಕ್ಷ ಬೆಲೆ ಹೊಂದಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿಯೇ ತುಸು ದುಬಾರಿಯಾಗಿದ್ದು, ಹೆಚ್ಚಿನ ಮಟ್ಟದ ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ಓಲಾ ಎಸ್1 ಸರಣಿ ಇವಿ ಸ್ಕೂಟರ್ ಗಳ ಮೇಲೆ ಭರ್ಜರಿ ಆಫರ್ ಘೋಷಣೆ

ಹೊಸ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಎಥರ್ ಎನರ್ಜಿ ಕಂಪನಿ ಸೀಮಿತ ಅವಧಿಗಾಗಿ ಮಾತ್ರ ಮಾರಾಟ ಮಾಡಲಿದೆ. ಹೀಗಾಗಿ ಹೊಸ ಇವಿ ಸ್ಕೂಟರ್ ಖರೀದಿಗಾಗಿ ಈಗಾಗಲೇ ಭಾರೀ ಪ್ರಮಾಣದ ಬುಕಿಂಗ್ ದಾಖಲಾಗಿದ್ದು, ಇದರಲ್ಲಿ ಇಂಡಿಯಮ್ ಬ್ಲೂ ಪೇಂಟ್ ಜೊತೆ ಕಾಂಟ್ರಾಸ್ಟ್ ಆರೆಂಜ್ ಆಕರ್ಷಕವಾಗಿದೆ. ಇದರೊಂದಿಗೆ ಹೊಸ 450 ಅಪೆಕ್ಸ್ ಇವಿ ಸ್ಕೂಟರಿನಲ್ಲಿ ಎಥರ್ ಕಂಪನಿ ಗರಿಷ್ಠ ಸಾಮರ್ಥ್ಯ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಹೊಸ ಸ್ಕೂಟರ್ ನಲ್ಲಿರುವ 3.7kWh ಬ್ಯಾಟರಿ ಪ್ಯಾಕ್ 7kW ಪವರ್ ಮತ್ತು 26 ಎನ್ಎಂ ಉತ್ಪಾದಿಸಲಿದ್ದು, ಉತ್ತಮ ಪರ್ಫಾಮೆನ್ಸ್ ನೀಡುತ್ತದೆ. ಇದರೊಂದಿಗೆ ಹೊಸ ಇವಿ ಸ್ಕೂಟರ್ ರೋಲ್ ಆನ್ ವೇಗವರ್ಧನೆಯು ಈ ಹಿಂದಿನ ಮಾದರಿಗಿಂತ ಶೇ. 30 ರಷ್ಟು ಸುಧಾರಣೆಗೊಂಡಿದ್ದು, ಪ್ರತಿ ಚಾರ್ಜ್ ಗೆ 157 ಕಿ.ಮೀ ಮೈಲೇಜ್ ನೀಡುತ್ತದೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?