ಜನಪ್ರಿಯ ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರು ಕಂಪನಿಗಳು ಭರ್ಜರಿ ಆಫರ್ ಗಳನ್ನು ಘೋಷಣೆ ಮಾಡಿದ್ದು, ಜನಪ್ರಿಯ ಹ್ಯಾಚ್ ಬ್ಯಾಕ್ ಕಾರುಗಳ ಖರೀದಿ ಮೇಲೆ ಹೆಚ್ಚಿನ ಆಫರ್ ನೀಡುತ್ತಿವೆ. ಹಾಗಾದ್ರೆ ಯಾವ ಕಾರಿನ ಮೇಲೆ ಎಷ್ಟು ಆಫರ್ ಲಭ್ಯವಿವೆ ಎನ್ನುವ ಮಾಹಿತಿ ಇಲ್ಲಿದೆ.
ದೇಶಾದ್ಯಂತ ದೀಪಾವಳಿ (Deepavali) ಹಬ್ಬದ ವಿಶೇಷತೆಗಾಗಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಭರ್ಜರಿ ಆಫರ್ ನೀಡುತ್ತಿದ್ದು, ಕಾರು ಉತ್ಪಾದನಾ ಕಂಪನಿಗಳು ಸಹ ಹೆಚ್ಚಿನ ಆಫರ್ ಘೋಷಣೆ ಮಾಡಿವೆ. ಹೊಸ ಆಫರ್ ಗಳಲ್ಲಿ ಹ್ಯಾಚ್ ಬ್ಯಾಕ್ ಕಾರುಗಳ ಮೇಲಿನ ವಿವಿಧ ಕೊಡುಗೆಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಬರೋಬ್ಬರಿ ರೂ. 1 ಲಕ್ಷದ ತನಕ ಆಫರ್ ಪಡೆದುಕೊಳ್ಳಬಹುದಾಗಿದೆ. ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಬ್ಯಾಕ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.
ಟಾಟಾ ಆಲ್ಟ್ರೊಜ್
ಪ್ರೀಮಿಯಂ ಹ್ಯಾಚ್ ಬ್ಯಾಕ್ ಮಾದರಿಯಾಗಿರುವ ಆಲ್ಟ್ರೊಜ್ ಕಾರು ಖರೀದಿಯ ಮೇಲೆ ಟಾಟಾ ಮೋಟಾರ್ಸ್ ಕಂಪನಿಯು ರೂ. 30 ಸಾವಿರ ತನಕ ಆಫರ್ ನೀಡುತ್ತಿದ್ದು, ಹೊಸ ಆಫರ್ ಗಳಲ್ಲಿ ಕ್ಯಾಶ್ ಬ್ಯಾಕ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಆಲ್ಟ್ರೊಜ್ ಕಾರು ಮಾದರಿಯು ಸದ್ಯ 1.2 ಲೀಟರ್ ಪೆಟ್ರೋಲ್, ಸಿಎನ್ ಜಿ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 6.60 ಲಕ್ಷದಿಂದ ರೂ. 10.74 ಲಕ್ಷ ಬೆಲೆ ಹೊಂದಿದೆ.
ಇದನ್ನೂ ಓದಿ: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!
ರೆನಾಲ್ಟ್ ಕ್ವಿಡ್
ಹ್ಯಾಚ್ ಬ್ಯಾಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಕ್ವಿಡ್ ಕಾರು ಮಾದರಿಯು 2015ರಿಂದಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕ್ವಿಡ್ ಕಾರಿನ ಮೇಲೆ ಕಂಪನಿಯು ಒಟ್ಟಾರೆ ರೂ. 50 ಸಾವಿರ ಮೌಲ್ಯದ ಆಫರ್ ನೀಡುತ್ತಿದೆ. ಹೊಸ ಆಫರ್ ಗಳಲ್ಲಿ ರೂ. 25 ಸಾವಿರ ಮೌಲ್ಯದ ಕ್ಯಾಶ್ ಬ್ಯಾಕ್, ರೂ. 15 ಸಾವಿರ ಮೌಲ್ಯದ ಎಕ್ಸ್ ಚೆಂಜ್ ಆಫರ್ ಮತ್ತು ರೂ. 10 ಸಾವಿರ ಮೌಲ್ಯದ ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದೆ. ಬಿಎಸ್6 ಎರಡನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡ ಪೂರೈಸಿರುವ ಹೊಸ ಕ್ವಿಡ್ ಸದ್ಯ ಎಕ್ಸ್ ಶೋರೂಂ ಪ್ರಕಾರ ರೂ. 4.69 ಲಕ್ಷದಿಂದ ರೂ. 6.45 ಲಕ್ಷ ಬೆಲೆ ಹೊಂದಿದೆ.
ಹ್ಯುಂಡೈ ಐ20 ಎನ್-ಲೈನ್
ಪ್ರೀಮಿಯಂ ಹ್ಯಾಚ್ ಬ್ಯಾಕ್ ಮಾದರಿಗಳಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಐ20 ಕಾರಿನ ಪರ್ಫಾಮೆನ್ಸ್ ಆವೃತ್ತಿ ಎನ್-ಲೈನ್ ಮಾದರಿಯ ಖರೀದಿಯ ಮೇಲೆ ರೂ. 55 ಸಾವಿರ ಮೌಲ್ಯದ ಆಫರ್ ನೀಡಲಾಗುತ್ತಿದೆ. ಐ20 ಎನ್-ಲೈನ್ ಕಾರಿನ ಹಳೆಯ ಆವೃತ್ತಿಯ ಮೇಲೆ ಮಾತ್ರ ಆಫರ್ ಲಭ್ಯವಿದ್ದು, ಇತ್ತೀಚೆಗೆ ಬಿಡುಗಡೆಯಾದ ಫೇಸ್ ಲಿಫ್ಟ್ ಆವೃತ್ತಿಯ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ. ಐ20 ಎನ್ ಲೈನ್ ಆವೃತ್ತಿಯು 1.0 ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. ರೂ. 9.99 ಲಕ್ಷದಿಂದ ರೂ. 12.32 ಲಕ್ಷ ಬೆಲೆ ಹೊಂದಿದೆ.
ಮಾರುತಿ ಸುಜುಕಿ ಬಲೆನೊ
ಹ್ಯಾಚ್ ಬ್ಯಾಕ್ ಕಾರಿನ ಮಾರಾಟದಲ್ಲಿ ಸದ್ಯ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಬಲೆನೊ ಆವೃತ್ತಿಯ ಮೇಲೂ ರೂ. 55 ಸಾವಿರ ಮೌಲ್ಯದ ಆಫರ್ ಲಭ್ಯವಿದ್ದು, ಹೊಸ ಆಫರ್ ಗಳಲ್ಲಿ ಸಿಎನ್ ಜಿ ಮಾದರಿಯನ್ನು ಸಹ ಖರೀದಿಸಬಹುದಾಗಿದೆ. ಪೆಟ್ರೋಲ್ ಮತ್ತು ಸಿಎನ್ ಜಿ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರುವ ಬಲೆನೊ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.61 ಲಕ್ಷದಿಂದ ರೂ. 9.88 ಲಕ್ಷ ಬೆಲೆ ಹೊಂದಿದೆ.
ಇದನ್ನೂ ಓದಿ: ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್
ಸಿಟ್ರನ್ ಸಿ3
ಸಿ3 ಹ್ಯಾಚ್ ಬ್ಯಾಕ್ ಕಾರು ಖರೀದಿಸುವ ಗ್ರಾಹಕರಿಗೆ ಸಿಟ್ರನ್ ಕಂಪನಿಯು ರೂ. 99 ಸಾವಿರ ಆಫರ್ ಲಭ್ಯವಿದ್ದು, ಬಜೆಟ್ ಬೆಲೆಯಲ್ಲಿ ಉತ್ತಮವಾದ ಮೈಕ್ರೊ ಎಸ್ ಯುವಿ ಕಾರು ಖರೀದಿಸುವ ಗ್ರಾಹಕರಿಗೆ ಇದು ಅತ್ಯುತ್ತಮ ಆಯ್ಕೆ ಎನ್ನಬಹುದು. 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 6.16 ಲಕ್ಷದಿಂದ ರೂ. 8.92 ಲಕ್ಷ ಬೆಲೆ ಹೊಂದಿದೆ.