AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

Misfortune and Car Vastu: ಕಾರಿಗೆ ವಾಸ್ತು ಸಲಹೆಗಳು - ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ಆದರೆ ಕಾರು ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ..

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ
ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 21, 2023 | 4:50 PM

Share

ಕಾರಿಗೆ ವಾಸ್ತು ಸಲಹೆಗಳು: ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುತ್ತಾರೆ. ಆದರೆ ಕಾರು (Car) ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ (Spiritual)..

ವಾಸ್ತು ತಜ್ಞರ ಪ್ರಕಾರ ಕಾರಿನಲ್ಲಿ ಗಣೇಶ ಅಥವಾ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ವಿಘ್ನೇಶ್ವರನು ಪ್ರಯಾಣದ ಸಮಯದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ. ಆಂಜನೇಯ ಇರುವ ಕಡೆ ಭೂತ ಪ್ರೇತಗಳಂತಹ ಅಲೌಕಿಕ ಭೀತಿ ಇರುವುದಿಲ್ಲ ಎಂಬ ನಂಬಿಕೆಯೇ ಇದಕ್ಕೆ ಕಾರಣ ಎಂದು ವಾಸ್ತು ತಜ್ಞರು ವಿವರಿಸುತ್ತಾರೆ.

ಕಾರಿನಲ್ಲಿ ಕಪ್ಪು ಆಮೆಯ ಪ್ರತಿಮೆ ಇದ್ದರೆ ವಾಹನ ಮಾಲೀಕರ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕಾರಿನ ಡ್ಯಾಶ್ ಬೋರ್ಡ್ ಮೇಲೆ ಹರಳುಗಳನ್ನು (ಕ್ರಿಸ್ಟಲ್ಸ್​) ಹಾಕುವುದು ಮಂಗಳಕರ. ಇದು ಭೂಮಿಗೆ ಸಂಬಂಧಪಟ್ಟದ್ದಾಗಿರುವುದರಿಂದ ವಾಹನ ತುಂಬಾ ಸೇಫ್ ಆಗಿರುತ್ತದೆ ಎನ್ನುತ್ತಾರೆ.

ಜಲತತ್ತ್ವ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುವಂತೆ ಕಾರಿನಲ್ಲಿ ನೀರಿನ ಬಾಟಲಿಯನ್ನು ಇಡಬೇಕು.

ಅಲ್ಲದೆ, ಅಪಘಾತಗಳು ಮತ್ತು ದುರಾದೃಷ್ಟವನ್ನು ಆಕರ್ಷಿಸುವ ಕಾರಣ ಮುರಿದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಾರಿನಲ್ಲಿ ಬಿಡಬಾರದು.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್