ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬಜಾಜ್ ಚೇತಕ್ ಇವಿ ಹೊಸ ದಾಖಲೆ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಬಜಾಜ್ ಆಟೋ ಕಂಪನಿ ತನ್ನ ಹೊಸ ಚೇತಕ್ ಇವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬಜಾಜ್ ಚೇತಕ್ ಇವಿ ಹೊಸ ದಾಖಲೆ
ಬಜಾಜ್ ಚೇತಕ್ ಇವಿ
Follow us
Praveen Sannamani
|

Updated on: Dec 13, 2023 | 3:23 PM

ದುಬಾರಿ ಇಂಧನ ಮತ್ತು ಮಾಲಿನ್ಯದ ಪರಿಣಾಮ ಎಲೆಕ್ಟ್ರಿಕ್ ವಾಹನಗಳ (Electric Vehicles) ಮಾರಾಟವು ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಭಾರೀ ಬೇಡಿಕೆ ದಾಖಲಾಗುತ್ತಿದೆ. ಬಜಾಜ್ ಆಟೋ ಕಂಪನಿಯು ಸಹ ಚೇತಕ್ ಇವಿ (Chetak Electric) ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಹೊಸ ದಾಖಲೆ ನಿರ್ಮಿಸುತ್ತಿದ್ದು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹೊಸ ಮಾರಾಟ ಮೈಲಿಗಲ್ಲು ಸಾಧಿಸಿದೆ.

90ರ ದಶಕದಲ್ಲಿ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದ ಚೇತಕ್ ಸ್ಕೂಟರ್ ಮಾದರಿಯನ್ನು ಕಳೆದ 2020ರ ಜನವರಿಯಲ್ಲಿ ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಬಿಡುಗಡೆ ಮಾಡಿದ್ದ ಬಜಾಜ್ ಆಟೋ ಕಂಪನಿಯು ಹೊಸ ಮಾರಾಟ ದಾಖಲೆ ನಿರ್ಮಿಸಿದ್ದು, ಬಿಡುಗಡೆಯಾದ ಕೇವಲ 47 ತಿಂಗಳ ಅವಧಿಯಲ್ಲಿ ಒಟ್ಟು 1 ಲಕ್ಷ ಯುನಿಟ್ ಮಾರಾಟಗೊಂಡಿದೆ.

ಚೇತಕ್ ಇವಿ ಬಿಡುಗಡೆಯ ಆರಂಭದಲ್ಲಿ ಕಡಿಮೆ ಪ್ರಮಾಣದ ಮಾರಾಟ ಹೊಂದಿದ್ದ ಬಜಾಜ್ ಕಂಪನಿಯು ಕಳೆದ ಒಂದು ವರ್ಷದಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ಎಂಟು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 62 ಸಾವಿರ ಯುನಿಟ್ ಮಾರಾಟಗೊಂಡಿವೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿದೆ ಕಡಿಮೆ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಹೊಸ ಇವಿ ಸ್ಕೂಟರ್

ಗುಣಮಟ್ಟದ ಬಿಡಿಭಾಗಗಳು ಮತ್ತು ಉತ್ತಮ ತಾಂತ್ರಿಕ ಅಂಶಗಳನ್ನು ಹೊಂದಿರುವ ಚೇತಕ್ ಇವಿ ಸ್ಕೂಟರ್ ಮಾದರಿಯು ಅರ್ಬೆನ್ ಮತ್ತು ಪ್ರೀಮಿಯಂ ವೆರಿಯೆಂಟ್ ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1.15 ಲಕ್ಷದಿಂದ ರೂ.1.22 ಲಕ್ಷ ಬೆಲೆ ಹೊಂದಿದೆ. ಚೇತಕ್ ಇವಿ ಹೊಸ ಅರ್ಬೆನ್ ವೆರಿಯೆಂಟ್ ನಲ್ಲಿ ಪ್ರೀಮಿಯಂ ವೆರಿಯೆಂಟ್ ಗಿಂತಲೂ ಕಡಿಮೆ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಜೊತೆಗೆ ಕೆಲವು ಫೀಚರ್ಸ್ ತೆಗೆದುಹಾಕಲಾಗಿದ್ದು, ಇದು 2.48 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ನೊಂದಿಗೆ ಪ್ರತಿ ಚಾರ್ಜ್ ಗೆ 113 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಚೇತಕ್ ಇವಿ ಪ್ರೀಮಿಯಂ ವೆರಿಯೆಂಟ್ 2.88 kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಇದು ಪ್ರತಿ ಚಾರ್ಜ್ ಗೆ 108 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೊಸ ವೆರಿಯೆಂಟ್ ಕಡಿಮೆ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದರೂ ಹೆಚ್ಚಿನ ಮೈಲೇಜ್ ಹಿಂದಿರುಗಿಸಲಿದ್ದು, ಇದು ಇಕೋ ರೈಡಿಂಗ್ ಮೋಡ್ ಜೋಡಣೆಯೊಂದಿಗೆ ಪ್ರತಿ ಗಂಟೆಗೆ ಗರಿಷ್ಠ 63 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.

ಹೊಸ ಚೇತಕ್ ಅರ್ಬೆನ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಬೆಲೆ ಇಳಿಕೆಗಾಗಿ ಬಜಾಜ್ ಕಂಪನಿಯು ಕೇವಲ ಬ್ಯಾಟರಿ ಪ್ಯಾಕ್ ಸಾಮರ್ಥ್ಯದಲ್ಲಿ ಇಳಿಕೆ ಮಾತ್ರವಲ್ಲದೆ 800W ಸ್ಟ್ಯಾಂಡರ್ಡ್ ಚಾರ್ಜರ್ ಬದಲಾಗಿ 650W ಹೋಂ ಚಾರ್ಜರ್ ನೀಡಿದೆ. ಜೊತೆಗೆ ಪ್ರೀಮಿಯಂ ಮಾದರಿಯಲ್ಲಿರುವಂತೆ ಡಿಸ್ಕ್ ಬ್ರೇಕ್ ತೆಗೆದುಹಾಕಲಾಗಿದ್ದು, ಎರಡು ಬದಿ ಚಕ್ರಗಳಲ್ಲೂ ಡ್ರಮ್ ಬ್ರೇಕ್ ನೀಡಲಾಗಿದೆ.

ಇದನ್ನೂ ಓದಿ: ಇವಿಎಕ್ಸ್ ಎಲೆಕ್ಟ್ರಿಕ್ ಬಿಡುಗಡೆ ಮಾಹಿತಿ ಹಂಚಿಕೊಂಡ ಮಾರುತಿ ಸುಜುಕಿ

ಇದಲ್ಲದೆ ಬಜಾಜ್ ಕಂಪನಿಯು ಚೇತಕ್ ಇವಿ ಸ್ಕೂಟರಿನ ಪ್ರೀಮಿಯಂ ವೆರಿಯೆಂಟ್ ಅನ್ನು ಉನ್ನತೀಕರಿಸುವ ಯೋಜನೆಯಲ್ಲಿದ್ದು, ಇದು ಹೊಸ ತಾಂತ್ರಿಕ ಅಂಶಗಳೊಂದಿಗೆ ಪ್ರತಿ ಚಾರ್ಜ್ ಗೆ 130ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಜೊತೆಗೆ ಉನ್ನತೀಕರಿಸುತ್ತಿರುವ ಮಾದರಿಯಲ್ಲಿ ಹೊಸ ತಂತ್ರಜ್ಞಾನ ಪ್ರೇರಿತ ಪ್ರೀಮಿಯಂ ಫೀಚರ್ಸ್ ನೀಡಲಾಗುತ್ತಿದ್ದು, ಇದು ಓಲಾ ಮತ್ತು ಎಥರ್ ವಿವಿಧ ಇವಿ ಸ್ಕೂಟರ್ ಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM