Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಮೈಲೇಜ್ ನೀಡುವ ಬಜಾಜ್ ಚೇತಕ್ ಅರ್ಬೆನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಬಜಾಜ್ ಆಟೋ ಕಂಪನಿಯು ತನ್ನ ಜನಪ್ರಿಯ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ ಅರ್ಬೆನ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪ್ರೀಮಿಯಂ ವೆರಿಯೆಂಟ್ ಗಿಂತಲೂ ಕಡಿಮೆ ಬೆಲೆಯೊಂದಿಗೆ ಹೆಚ್ಚಿನ ಮೈಲೇಜ್ ಪ್ರೇರಣೆ ಹೊಂದಿದೆ.

ಭರ್ಜರಿ ಮೈಲೇಜ್ ನೀಡುವ ಬಜಾಜ್ ಚೇತಕ್ ಅರ್ಬೆನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಬಜಾಜ್ ಚೇತಕ್ ಅರ್ಬೆನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
Follow us
Praveen Sannamani
|

Updated on:Dec 01, 2023 | 10:06 PM

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಬಜಾಜ್ ಆಟೋ (Bajaj Auto) ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ ಹೊಸ ಅರ್ಬೆನ್ (chetak-urbane  ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1.15 ಲಕ್ಷ ಬೆಲೆ ಹೊಂದಿದೆ.

ಚೇತಕ್ ಇವಿ ಹೊಸ ಅರ್ಬೆನ್ ವೆರಿಯೆಂಟ್ ನಲ್ಲಿ ಪ್ರೀಮಿಯಂ ವೆರಿಯೆಂಟ್ ಗಿಂತಲೂ ಕಡಿಮೆ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಜೊತೆಗೆ ಕೆಲವು ಫೀಚರ್ಸ್ ತೆಗೆದುಹಾಕಲಾಗಿದ್ದು, ಇದು 2.48 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ನೊಂದಿಗೆ ಪ್ರತಿ ಚಾರ್ಜ್ ಗೆ 113 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಚೇತಕ್ ಇವಿ ಪ್ರೀಮಿಯಂ ವೆರಿಯೆಂಟ್ 2.88 kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಇದು ಪ್ರತಿ ಚಾರ್ಜ್ ಗೆ 108 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೊಸ ವೆರಿಯೆಂಟ್ ಕಡಿಮೆ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದರೂ ಹೆಚ್ಚಿನ ಮೈಲೇಜ್ ಹಿಂದಿರುಗಿಸಲಿದ್ದು, ಇದು ಇಕೋ ರೈಡಿಂಗ್ ಮೋಡ್ ಜೋಡಣೆಯೊಂದಿಗೆ ಪ್ರತಿ ಗಂಟೆಗೆ ಗರಿಷ್ಠ 63 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿದೆ ಕಡಿಮೆ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಹೊಸ ಇವಿ ಸ್ಕೂಟರ್

ಹೊಸ ಚೇತಕ್ ಅರ್ಬೆನ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಬೆಲೆ ಇಳಿಕೆಗಾಗಿ ಬಜಾಜ್ ಕಂಪನಿಯು ಕೇವಲ ಬ್ಯಾಟರಿ ಪ್ಯಾಕ್ ಸಾಮರ್ಥ್ಯ ಇಳಿಕೆ ಮಾತ್ರವಲ್ಲದೆ 800W ಸ್ಟ್ಯಾಂಡರ್ಡ್ ಚಾರ್ಜರ್ ಬದಲಾವಣೆ 650W ಹೋಂ ಚಾರ್ಜರ್ ನೀಡಿದೆ. ಜೊತೆಗೆ ಪ್ರೀಮಿಯಂ ಮಾದರಿಯಲ್ಲಿರುವಂತೆ ಡಿಸ್ಕ್ ಬ್ರೇಕ್ ತೆಗೆದುಹಾಕಲಾಗಿದ್ದು, ಎರಡು ಬದಿ ಚಕ್ರಗಳಲ್ಲೂ ಡ್ರಮ್ ಬ್ರೇಕ್ ನೀಡಲಾಗಿದೆ.

ಇನ್ನು ಹೊಸ ಇವಿ ಸ್ಕೂಟರ್ ವೆರಿಯೆಂಟ್ ನಲ್ಲಿ ಪ್ರೀಮಿಯಂ ಮಾದರಿಯಲ್ಲಿರುವಂತೆ ಎಲ್ಇಡಿ ಡಿಸ್ ಪ್ಲೇ, ವಿವಿಧ ಬಣ್ಣದ ಆಯ್ಕೆಗಳು ಮತ್ತು ಪ್ರಮುಖ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಕಡಿಮೆ ಬೆಲೆಯ ಇವಿ ಸ್ಕೂಟರ್ ಖರೀದಿಗೆ ಎದುರು ನೋಡುತ್ತಿರುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಲಿದೆ.

ಇದನ್ನೂ ಓದಿ: ಪವರ್‌ಫುಲ್‌ ಎಂಜಿನ್ ಪ್ರೇರಿತ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ 450 ಬೈಕ್ ಬಿಡುಗಡೆ

ಇದಲ್ಲದೆ ಬಜಾಜ್ ಕಂಪನಿಯು ಚೇತಕ್ ಇವಿ ಸ್ಕೂಟರಿನ ಪ್ರೀಮಿಯಂ ವೆರಿಯೆಂಟ್ ಅನ್ನು ಉನ್ನತೀಕರಿಸುವ ಯೋಜನೆಯಲ್ಲಿದ್ದು, ಇದು ಹೊಸ ತಾಂತ್ರಿಕ ಅಂಶಗಳೊಂದಿಗೆ ಪ್ರತಿ ಚಾರ್ಜ್ ಗೆ 130ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಜೊತೆಗೆ ಉನ್ನತೀಕರಿಸುತ್ತಿರುವ ಮಾದರಿಯಲ್ಲಿ ಹೊಸ ತಂತ್ರಜ್ಞಾನ ಪ್ರೇರಿತ ಪ್ರೀಮಿಯಂ ಫೀಚರ್ಸ್ ನೀಡಲಾಗುತ್ತಿದ್ದು, ಇದು ಓಲಾ ಮತ್ತು ಎಥರ್ ವಿವಿಧ ಇವಿ ಸ್ಕೂಟರ್ ಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

Published On - 8:51 pm, Fri, 1 December 23

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ