Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajaj Pulsar N150: ಸ್ಪೋರ್ಟಿ ಫೀಚರ್ಸ್ ಹೊಂದಿರುವ ಬಜಾಜ್ ಪಲ್ಸರ್ ಎನ್150 ಬೈಕ್ ಬಿಡುಗಡೆ

ಬಜಾಜ್ ಆಟೋ ಕಂಪನಿಯು ತನ್ನ ಹೊಚ್ಚ ಹೊಸ ಪಲ್ಸರ್ ಎನ್150 ಬೈಕ್ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಸ್ಪೋರ್ಟಿ ಫೀಚರ್ಸ್ ಜೊತೆಗೆ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Bajaj Pulsar N150: ಸ್ಪೋರ್ಟಿ ಫೀಚರ್ಸ್ ಹೊಂದಿರುವ ಬಜಾಜ್ ಪಲ್ಸರ್ ಎನ್150 ಬೈಕ್ ಬಿಡುಗಡೆ
ಬಜಾಜ್ ಪಲ್ಸರ್ ಎನ್150 ಬೈಕ್ ಬಿಡುಗಡೆ
Follow us
Praveen Sannamani
|

Updated on:Sep 26, 2023 | 9:14 PM

ಬಜಾಜ್ ಆಟೋ(Bajaj Auto) ಕಂಪನಿಯು ತನ್ನ ಹೊಚ್ಚ ಹೊಸ ಪಲ್ಸರ್ ಎನ್150(Pulsar N150) ಬೈಕ್ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಸ್ಪೋರ್ಟಿ ಫೀಚರ್ಸ್ ಜೊತೆಗೆ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ದೇಶದ ಮುಂಚೂಣಿ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾಗಿರುವ ಬಜಾಜ್ ಆಟೋ ತನ್ನ ಹೊಚ್ಚ ಹೊಸ ಪಲ್ಸರ್ ಎನ್150 ಬೈಕ್ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 1.18 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹೊಸ ಬೈಕ್ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪಲ್ಸರ್ ಎನ್160 ಮತ್ತು ಪಲ್ಸರ್ ಪಿ150 ನಡುವಿನ ಸ್ಥಾನ ಪಡೆದುಕೊಂಡಿದ್ದು, ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಇವಿ ಸ್ಕೂಟರ್ ಗಳಿವು!

ಪ್ರಸ್ತುತ ಮಾರುಕಟ್ಟೆಯಲ್ಲಿನ 150ಸಿಸಿ ಬೈಕ್ ವಿಭಾಗದಲ್ಲಿ ವಿವಿಧ ಮಾದರಿಗಳೊಂದಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಬಜಾಜ್ ಕಂಪನಿಯು ಇದೀಗ ಪಲ್ಸರ್ ಎನ್150 ಬೈಕ್ ಬಿಡುಗಡೆ ಮಾಡಿದ್ದು, ಇದು ಪಲ್ಸರ್ ಎನ್160 ಮಾದರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಆಕರ್ಷಕ ಫೀಚರ್ಸ್ ಹೊಂದಿರಲಿವೆ.

ಹೊಸ ಬೈಕ್ ಮಾದರಿಯು ರೇಸಿಂಗ್ ರೆಡ್, ಎಬೊನಿ ಬ್ಲಾಕ್ ಮತ್ತು ಮೆಟಾಲಿಕ್ ಪರ್ಲ್ ವೈಟ್ ಎನ್ನುವ ಮೂರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಎನ್160 ಮೋಟಾರ್‌ಸೈಕಲ್‌ನಲ್ಲಿರುವಂತೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುತ್ತದೆ. ಹೊಸ ಬೈಕಿನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಸ್ಪೋರ್ಟಿ ಗ್ರಾಫಿಕ್ ಸೇರಿದಂತೆ USB ಚಾರ್ಜಿಂಗ್ ಪೋರ್ಟ್, ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೀಸ್ ಸೀಟ್ ಮತ್ತು ಅಲಾಯ್ ವ್ಹೀಲ್ ಹೊಂದಿದ್ದು, ಸುರಕ್ಷತೆಗಾಗಿ ಸಿಂಗಲ್ ಚಾನೆಲ್ ಎಬಿಎಸ್ ಜೊತೆಗೆ ಫ್ರಂಟ್ ಡಿಸ್ಕ್ ಬ್ರೇಕ್, ರಿಯರ್ ಡ್ರಮ್ ಬ್ರೇಕ್ ಪಡೆದುಕೊಂಡಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ 156 ಕಿ.ಮೀ ಮೈಲೇಜ್ ನೀಡುತ್ತೆ ಎಥರ್ 450ಎಸ್ ಹೈ ರೇಂಜ್ ವರ್ಷನ್

ಎಂಜಿನ್ ಮತ್ತು ಕಾರ್ಯಕ್ಷಮತೆ ಬಜಾಜ್ ಪಲ್ಸರ್ ಎನ್150 ಬೈಕ್ ಮಾದರಿಯಲ್ಲಿ ಪಿ150 ಮಾದರಿಯಲ್ಲಿರುವಂತೆ 149.68ಸಿಸಿ, ಸಿಂಗಲ್-ಸಿಲಿಂಡರ್, ಏರ್ ಕೂಲ್ಡ್ ಎಂಜಿನ್ ಜೋಡಣೆ ಮಾಡಲಾಗಿದ್ದು, 5 ಸ್ಪೀಡ್ ಗೇರ್‌ಬಾಕ್ಸ್ ನೊಂದಿಗೆ 14.3 ಹಾರ್ಸ್ ಪವರ್ ಮತ್ತು 13.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಬೈಕ್ ಉತ್ತಮ ಇಂಧನ ದಕ್ಷತೆ ಹೊಂದಿದ್ದು, 150 ಸಿಸಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

Published On - 9:12 pm, Tue, 26 September 23