AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 11 ಲಕ್ಷ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಂದ ದಾಖಲೆ ಮೊತ್ತದ ದಂಡ ವಸೂಲಿ

ನಮ್ಮ ಬೆಂಗಳೂರು ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ದ ತೀವ್ರ ಕಾರ್ಯಾಚರಣೆ ಆರಂಭಿಸಿದ್ದು, ದಾಖಲೆ ಮೊತ್ತದ ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ 11 ಲಕ್ಷ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಂದ ದಾಖಲೆ ಮೊತ್ತದ ದಂಡ ವಸೂಲಿ
ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಂದ ದಾಖಲೆ ಮೊತ್ತದ ದಂಡ ವಸೂಲಿ
Praveen Sannamani
|

Updated on: Jul 16, 2024 | 7:26 PM

Share

ಹಳೆಯ ವಾಹನಗಳೊಂದಿಗೆ ಹೊಸ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದ್ದು, ವಾಹನಗಳ ಸಂಖ್ಯೆ ಹೆಚ್ಚಳದೊಂದಿಗೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಕೂಡಾ ಗಣನೀಯವಾಗಿ ಏರಿಕೆಯಾಗಿದೆ. ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿರುವ ನಮ್ಮ ಬೆಂಗಳೂರು ಪೊಲೀಸರು ದಾಖಲೆ ಮೊತ್ತದ ದಂಡ ಸಂಗ್ರಹಿಸಿದ್ದು, ದುಬಾರಿ ದಂಡದ ಹೊರತಾಗಿ ಸಂಚಾರಿ ನಿಯಮ ಉಲ್ಲಂಘನೆಗಳ ಪ್ರಕರಣಗಳು ಹೆಚ್ಚುತ್ತಿರುವ ಕಳವಳಕಾರಿಯಾಗಿದೆ.

ವಿಧಾನಸಭೆ ಅವಧಿವೇಶದಲ್ಲಿ ಬೆಂಗಳೂರು ನಗರದಲ್ಲಿನ ಟ್ರಾಫಿಕ್ ನಿರ್ವಹಣೆ ಮತ್ತು ಸಂಚಾರಿ ನಿಯಮಗಳ ಪಾಲನೆ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅಘಾತಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಂಚಾರಿ ನಿಯಮಗಳ ಪಾಲನೆ ಹಲವಾರು ಕ್ರಮಗಳ ಹೊರತಾಗಿ ದಾಖಲೆ ಪ್ರಮಾಣದ ಪ್ರಕರಣಗಳು ದಾಖಲಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ಪ್ರಕಾರ, ನಮ್ಮ ಬೆಂಗಳೂರು ಒಂದರಲ್ಲೇ ದಿನಂಪ್ರತಿ ಸಾವಿರಾರು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದು, 2022ರಲ್ಲಿ 12 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದಾರೆ. 12 ಲಕ್ಷ ಪ್ರಕರಣಗಳಿಂದ ರೂ. 20.84 ಕೋಟಿ ದಂಡ ವಸೂಲಿ ಮಾಡಲಾಗಿದೆ. ಹಾಗೆಯೇ 2023ರಲ್ಲಿ 11.30 ಲಕ್ಷ ಪ್ರಕರಣಗಳನ್ನು ದಾಖಲಿಸುವ ಮೂಲಕ ಬರೋಬ್ಬರಿ ರೂ. 37.30 ಕೋಟಿ ದಂಡ ಸಂಗ್ರಹ ಮಾಡಲಾಗಿದೆ.

ಪ್ರಸ್ತುತ 2024ರ ಅವಧಿಯಲ್ಲಿ ಇದುವರೆಗೆ 55.21 ಲಕ್ಷ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಿಸಲಾಗಿದ್ದು, ಇದರಲ್ಲಿ ಇದುವರೆಗೆ ರೂ. 5.97 ಕೋಟಿ ದಂಡ ವಸೂಲಿ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಮತ್ತು ದಂಡ ವಸೂಲಿ ಮೊತ್ತವು ಮತ್ತಷ್ಟು ಹೆಚ್ಚಳವಾಗಲಿದ್ದು, ಅತ್ಯಾಧುನಿಕ ಎಐ ಕ್ಯಾಮೆರಾಗಳ ಮೂಲಕ ಹೆಚ್ಚಿನ ಮಟ್ಟದ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಾಗುತ್ತಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಎಐ ಕ್ಯಾಮೆರಾಗಳ ಅಳವಡಿಕೆಯಿಂದಾಗಿ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಬಿಳುತ್ತಿದ್ದು, ಈ ವರ್ಷಾಂತ್ಯಕ್ಕೆ ದಂಡದ ಮೊತ್ತವೇ ರೂ. 100 ಕೋಟಿ ದಾಟುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೀಗಾಗಿ ಸಂಚಾರಿ ನಿಯಮಗಳನ್ನು ಬೆಂಗಳೂರಿನ ಯಾವುದೇ ಪ್ರದೇಶದಲ್ಲಿದ್ದರೂ ಕಟ್ಟುನಿಟ್ಟಾಗಿ ಪಾಲನೆ ಪಾಡುವ ಅವಶ್ಯಕತೆಯಿದ್ದು, ಪೊಲೀಸರಿಂದ ತಪ್ಪಿಸಿಕೊಂಡರು ಎಐ ಕ್ಯಾಮೆರಾ ತಪ್ಪಿಸಿಕೊಳ್ಳುವ ಸಾಧ್ಯವೇ ಇಲ್ಲ ಎನ್ನಬಹುದು.