AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಮೈಲೇಜ್ ಜೊತೆಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳಿವು..

ಹೊಸ ಕಾರುಗಳ ಮಾರಾಟದಲ್ಲಿ ಇದೀಗ ಸಿಎನ್ ಜಿ ಮಾದರಿಗಳಿಗೂ ಭರ್ಜರಿ ಬೇಡಿಕೆ ಹರಿದುಬರುತ್ತಿದೆ. ಪೆಟ್ರೋಲ್ ನಂತರ ಸಿಎನ್ ಜಿ ಕಾರುಗಳ ಮಾರಾಟವು ಇದೀಗ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ರೂ. 6 ಲಕ್ಷದಿಂದ ರೂ. 8 ಲಕ್ಷ ಬೆಲೆ ಅಂತರದಲ್ಲಿನ ಸಿಎನ್ ಜಿ ಕಾರುಗಳಿಗೆ ಹೆಚ್ಚಿನ ಬೇಡಿಕೆಯಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಬಜೆಟ್ ಸಿಎನ್ ಜಿ ಕಾರುಗಳು ಯಾವುವು? ಅವುಗಳ ವಿಶೇಷತೆ ಏನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಹೆಚ್ಚು ಮೈಲೇಜ್ ಜೊತೆಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳಿವು..
ಅತ್ಯುತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳಿವು..
Praveen Sannamani
Praveen Sannamani|

Updated on:Apr 17, 2023 | 9:28 PM

Share

ಭಾರತದಲ್ಲಿ ಹೆಚ್ಚುತ್ತಿರುವ ಇಂಧನಗಳ ದರ ಪರಿಣಾಮ ಹೊಸ ಕಾರುಗಳ(New Cars) ಖರೀದಿದಾರರು ಸಿಎನ್ ಜಿ(CNG) ಕಾರುಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಸಾಂಪ್ರದಾಯಿಕ ಕಾರುಗಳ ಜೊತೆಗೆ ಪರಿಸರ ಸ್ನೇಹಿ ಕಾರುಗಳ ಮಾರಾಟವು ನಿಧಾನವಾಗಿ ಏರಿಕೆಯಾಗುತ್ತಿದ್ದು, ಇದರಲ್ಲಿ ಸಿಎನ್ ಜಿ ಮಾದರಿಗಳು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿವೆ. ಇವು ಬಜೆಟ್ ಬೆಲೆಯೊಂದಿಗೆ ಭರ್ಜರಿ ಮೈಲೇಜ್ ವೈಶಿಷ್ಟ್ಯತೆ ಹೊಂದಿದ್ದು, ಡೀಸೆಲ್ ಕಾರುಗಳಿಗೂ ಇವು ಉತ್ತಮ ಪೈಪೋಟಿಯಾಗಿವೆ.

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಕೇಂದ್ರ ಸರ್ಕಾರವು ಹೊಸದಾಗಿ ರಿಯಲ್ ಡ್ರೈವಿಂಗ್ ಎಮಿಷನ್ ಮಾನದಂಡ ಜಾರಿಗೆ ತಂದಿದೆ. ಹೀಗಾಗಿ ಹೆಚ್ಚು ಮಾಲಿನ್ಯ ಹೊರಸೂಸುವ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಬಳಕೆಯು ನಿಧಾನವಾಗಿ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹಲವು ಕಾರು ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರುಗಳಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡುತ್ತಿದ್ದು, ರೂ. 6 ಲಕ್ಷದಿಂದ ರೂ. 8 ಲಕ್ಷ ಬೆಲೆಯಲ್ಲಿ ಹಲವು ಸಿಎನ್ ಜಿ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ಹ್ಯುಂಡೈ ಔರಾ

ಬಜೆಟ್ ಬೆಲೆಯ ಸಿಎನ್ ಜಿ ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ನಿರ್ಮಾಣದ ಔರಾ ಕಾರು ಮಾದರಿಯು ಸದ್ಯ ಉತ್ತಮ ಬೇಡಿಕೆಯಲ್ಲಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 6.32 ಲಕ್ಷದಿಂದ ರೂ. 8.90 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿ ಕೆಜಿ ಸಿಎನ್ ಜಿ ಗೆ ಗರಿಷ್ಠ 28 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಗಳಿದ್ದು, ಬೆಲೆಯಲ್ಲೂ ಗಮನಸೆಳೆಯುತ್ತದೆ. ಔರಾ ನಂತರ ಹ್ಯುಂಡೈ ನಿರ್ಮಾಣದ ಮತ್ತೊಂದು ಕಾರು ಗ್ರ್ಯಾಂಡ್ ಐ10 ನಿಯೋಸ್ ಕೂಡಾ ಸಿಎನ್ ಜಿ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 5.73 ಲಕ್ಷದಿಂದ ರೂ. 8.51 ಲಕ್ಷ ಬೆಲೆ ಹೊಂದಿದೆ. ಈ ಮೂಲಕ ಇದು ಪ್ರತಿ ಕೆ.ಜಿ ಸಿಎನ್ ಜಿಗೆ ಗರಿಷ್ಠ 28 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ರೂ.10 ಲಕ್ಷಕ್ಕೆ ಖರೀದಿಗೆ ಲಭ್ಯವಿರುವ ಬೆಸ್ಟ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಮಾರುತಿ ಸುಜುಕಿ ಕಾರುಗಳು

ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಸುಮಾರು 13 ಕಾರು ಮಾದರಿಗಳಲ್ಲಿ ಸಿಎನ್ ಜಿ ಆವೃತ್ತಿಗಳನ್ನ ಮಾರಾಟ ಮಾಡುತ್ತಿದೆ. ಇದರಲ್ಲಿ ಬಜೆಟ್ ಬೆಲೆಯೊಂದಿಗೆ ಉತ್ತಮ ಫೀಚರ್ಸ್ ಹೊಂದಿರುವ ಕಾರುಗಳ ಪಟ್ಟಿಯಲ್ಲಿ ಬಲೆನೊ ಮತ್ತು ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರುಗಳು ಅಗ್ರಸ್ಥಾನದಲ್ಲಿವೆ. ಇದರಲ್ಲಿ ಸ್ವಿಫ್ಟ್ ಸಿಎನ್ ಜಿ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 5.99 ಲಕ್ಷದಿಂದ ರೂ. 8.96 ಲಕ್ಷ ಬೆಲೆ ಹೊಂದಿದ್ದರೆ ಬಲೆನೊ ಸಿಎನ್ ಜಿ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 6.45 ಲಕ್ಷದಿಂದ ರೂ. 9.66 ಲಕ್ಷ ಬೆಲೆ ಹೊಂದಿವೆ.

ಹೊಸ ಸಿಎನ್ ಜಿ ಕಾರುಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಸದ್ಯ ಎಸ್-ಸಿಎನ್ ಜಿ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಈ ಎರಡು ಹ್ಯಾಚ್ ಬ್ಯಾಕ್ ಗಳು ಪ್ರತಿ ಕೆ.ಜಿ ಸಿಎನ್ ಜಿ ಗೆ ಗರಿಷ್ಠ 31 ಕಿ.ಮೀ ಮೈಲೇಜ್ ನೀಡುತ್ತವೆ. ಹಾಗೆಯೇ ಮಾರುತಿ ಸುಜುಕಿ ಅತ್ಯುತ್ತಮ ಮೈಲೇಜ್ ಪ್ರೇರಿತ ಸಿಎನ್ ಜಿ ಕಾರುಗಳ ಪಟ್ಟಿಯಲ್ಲಿ ಆಲ್ಟೊ, ಎಸ್-ಪ್ರೆಸ್ಸೊ ಮತ್ತು ವ್ಯಾಗನ್ಆರ್ ಕಾರುಗಳು ಗರಿಷ್ಠ ಬೇಡಿಕೆಯಲ್ಲಿವೆ.

ಇದನ್ನೂ ಓದಿ: ಹೊಸ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾದ ಸಿಟ್ರನ್ ಇಂಡಿಯಾ

ಟಾಟಾ ಕಾರುಗಳು

ಉತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳ ಪಟ್ಟಿಯಲ್ಲಿ ಟಾಟಾ ಟಿಯಾಗೋ ಮತ್ತು ಟಿಗೋರ್ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಟಾಟಾ ಕಂಪನಿಯು ಹೊಸ ಸಿಎನ್ ಜಿ ಕಾರುಗಳಲ್ಲಿ ಐ-ಸಿಎನ್ ಜಿ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇವು ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಹೆಚ್ಚಿನ ಮೈಲೇಜ್ ನೀಡುತ್ತಿವೆ. ಟಿಗೋರ್ ಮತ್ತು ಟಿಯಾಗೋ ಕಾರು ಮಾದರಿಗಳು ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 26 ರಿಂದ 27 ಕಿ.ಮೀ ಮೈಲೇಜ್ ಹೊಂದಿವೆ. ಜೊತೆಗೆ ಇವು ಬೆಲೆಯಲ್ಲೂ ಗಮನಸೆಳೆಯುತ್ತಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 5.33 ಲಕ್ಷದಿಂದ ರೂ. 8.90 ಲಕ್ಷ ಬೆಲೆ ಹೊಂದಿವೆ.

Published On - 9:28 pm, Mon, 17 April 23

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು