Best CNG Cars: ಬಜೆಟ್ ಬೆಲೆಯ ಬೆಸ್ಟ್ ಸಿಎನ್ ಜಿ ಕಾರುಗಳಿವು!

ಭಾರತದಲ್ಲಿ ಹೆಚ್ಚುತ್ತಿರುವ ಇಂಧನಗಳ ದರ ಪರಿಣಾಮ ಹೊಸ ಕಾರು ಖರೀದಿದಾರರು ಸಿಎನ್ ಜಿ ಕಾರುಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಸಿಎನ್ ಜಿ ಕಾರುಗಳ ಮಾಹಿತಿ ಇಲ್ಲಿದೆ.

Follow us
Praveen Sannamani
|

Updated on:Apr 05, 2023 | 9:19 PM

ಭಾರತದಲ್ಲಿ ಹೊಸ ತಂತ್ರಜ್ಞಾನ ಪ್ರೇರಿತ ಕಾರುಗಳ ಕ್ರೇಜ್ ಹೆಚ್ಚುತ್ತಿದೆ. ಸಾಂಪ್ರದಾಯಿಕ ಕಾರುಗಳ ಜೊತೆಗೆ ಪರಿಸರ ಸ್ನೇಹಿ ಕಾರುಗಳ ಮಾರಾಟವು ನಿಧಾನವಾಗಿ ಏರಿಕೆಯಾಗುತ್ತಿದೆ. ಪರಿಸರ ಸ್ನೇಹಿ ಕಾರುಗಳಲ್ಲಿ ಸಿಎನ್ ಜಿ(CNG Cars) ಮಾದರಿಗಳು ಕೂಡಾ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವು ಬಜೆಟ್ ಬೆಲೆಯೊಂದಿಗೆ ಗಮನಸೆಳೆಯುತ್ತಿವೆ. ಡೀಸೆಲ್ ಕಾರುಗಳಿಗೆ ಪರ್ಯಾಯವಾಗಿರುವ ಸಿಎನ್ ಜಿ ಕಾರುಗಳು ಬಜೆಟ್ ಬೆಲೆಯೊಂದಿಗೆ ಇಂಧನ ದಕ್ಷತೆ ಹೊಂದಿವೆ.

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಕೇಂದ್ರ ಸರ್ಕಾರವು ಹೊಸದಾಗಿ ರಿಯಲ್ ಡ್ರೈವಿಂಗ್ ಎಮಿಷನ್ ಮಾನದಂಡ ಜಾರಿಗೆ ತಂದಿದೆ. ಹೀಗಾಗಿ ಹೆಚ್ಚು ಮಾಲಿನ್ಯ ಹೊರಸೂಸುವ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಬಳಕೆಯು ನಿಧಾನವಾಗಿ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹಲವು ಕಾರು ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರುಗಳಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡುತ್ತಿದ್ದು, ರೂ. 6 ಲಕ್ಷದಿಂದ ರೂ. 8 ಲಕ್ಷ ಬೆಲೆಯಲ್ಲಿ ಹಲವು ಸಿಎನ್ ಜಿ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ಇದನ್ನೂ ಓದಿ: ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಕಳಪೆ ಪ್ರದರ್ಶನ ನೀಡಿದ ಮಾರುತಿ ವ್ಯಾಗನ್ಆರ್ ಮತ್ತು ಆಲ್ಟೊ ಕೆ10

ಬಜೆಟ್ ಬೆಲೆಯ ಸಿಎನ್ ಜಿ ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ನಿರ್ಮಾಣದ ಔರಾ ಕಾರು ಮಾದರಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 6.32 ಲಕ್ಷದಿಂದ ರೂ. 8.90 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿ ಕೆಜಿ ಸಿಎನ್ ಜಿ ಗೆ ಗರಿಷ್ಠ 28 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಫೀಚರ್ಸ್ ಗಳಿದ್ದು, ಬೆಲೆಯಲ್ಲೂ ಗಮನಸೆಳೆಯುತ್ತದೆ. ಔರಾ ನಂತರ ಹ್ಯುಂಡೈ ನಿರ್ಮಾಣದ ಮತ್ತೊಂದು ಕಾರು ಗ್ರ್ಯಾಂಡ್ ಐ10 ನಿಯೋಸ್ ಕೂಡಾ ಸಿಎನ್ ಜಿ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 5.73 ಲಕ್ಷದಿಂದ ರೂ. 8.51 ಲಕ್ಷ ಬೆಲೆ ಹೊಂದಿದೆ. ಈ ಮೂಲಕ ಇದು ಪ್ರತಿ ಕೆ.ಜಿ ಸಿಎನ್ ಜಿಗೆ ಗರಿಷ್ಠ 28 ಕಿ.ಮೀ ಮೈಲೇಜ್ ನೀಡುತ್ತದೆ.

ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಸುಮಾರು 13 ಕಾರು ಮಾದರಿಗಳಲ್ಲಿ ಸಿಎನ್ ಜಿ ಆವೃತ್ತಿಗಳನ್ನ ಮಾರಾಟ ಮಾಡುತ್ತಿದೆ. ಇದರಲ್ಲಿ ಬಜೆಟ್ ಬೆಲೆಯೊಂದಿಗೆ ಉತ್ತಮ ಫೀಚರ್ಸ್ ಹೊಂದಿರುವ ಕಾರುಗಳ ಪಟ್ಟಿಯಲ್ಲಿ ಬಲೆನೊ ಮತ್ತು ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರುಗಳು ಅಗ್ರಸ್ಥಾನದಲ್ಲಿದ್ದು, ಇದರಲ್ಲಿ ಸ್ವಿಫ್ಟ್ ಸಿಎನ್ ಜಿ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 5.99 ಲಕ್ಷದಿಂದ ರೂ. 8.96 ಲಕ್ಷ ಬೆಲೆ ಹೊಂದಿದ್ದರೆ ಬಲೆನೊ ಸಿಎನ್ ಜಿ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 6.45 ಲಕ್ಷದಿಂದ ರೂ.9.66 ಲಕ್ಷ ಬೆಲೆ ಹೊಂದಿವೆ. ಹೊಸ ಸಿಎನ್ ಜಿ ಕಾರುಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಎಸ್-ಸಿಎನ್ ಜಿ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಈ ಎರಡು ಹ್ಯಾಚ್ ಬ್ಯಾಕ್ ಗಳು ಪ್ರತಿ ಕೆಜಿ ಸಿಎನ್ ಜಿ ಗೆ ಗರಿಷ್ಠ 31 ಕಿ.ಮೀ ಮೈಲೇಜ್ ನೀಡುತ್ತವೆ.

ಇದನ್ನೂ ಓದಿ: ರೂ.10 ಲಕ್ಷಕ್ಕೆ ಖರೀದಿಗೆ ಲಭ್ಯವಿರುವ ಬೆಸ್ಟ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಇನ್ನು ಉತ್ತಮ ಫೀಚರ್ಸ್ ಹೊಂದಿರುವ ಬಜೆಟ್ ಸಿಎನ್ ಜಿ ಕಾರುಗಳ ಪಟ್ಟಿಯಲ್ಲಿ ಟಾಟಾ ಟಿಯಾಗೋ ಮತ್ತು ಟಿಗೋರ್ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಟಾಟಾ ಕಂಪನಿಯು ಹೊಸ ಸಿಎನ್ ಜಿ ಕಾರುಗಳಲ್ಲಿ ಐ-ಸಿಎನ್ ಜಿ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇವು ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಹೆಚ್ಚಿನ ಮೈಲೇಜ್ ನೀಡುತ್ತಿವೆ. ಟಿಗೋರ್ ಮತ್ತು ಟಿಯಾಗೋ ಕಾರು ಮಾದರಿಗಳು ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 26 ರಿಂದ 27 ಕಿ.ಮೀ ಮೈಲೇಜ್ ಹೊಂದಿವೆ. ಜೊತೆಗೆ ಇವು ಬೆಲೆಯಲ್ಲೂ ಗಮನಸೆಳೆಯಲಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 5.33 ಲಕ್ಷದಿಂದ ರೂ. 8.90 ಲಕ್ಷ ಬೆಲೆ ಹೊಂದಿವೆ.

Published On - 9:19 pm, Wed, 5 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ