Electric Cars: ಭಾರತದಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಇವಿ ಕಾರುಗಳಿವು!

ಕಳೆದ ಕೆಲ ವರ್ಷಗಳಲ್ಲಿ ಹಲವು ಹೊಸ ಇವಿ ಕಾರುಗಳು ಬಿಡುಗಡೆಗೊಂಡಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೆಚ್ಚಿನ ಬೇಡಿಕೆ ಹಿನ್ನಲೆಯಲ್ಲಿ ಇದೀಗ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಹೊಸ ತಲೆಮಾರಿನ ಇವಿ ಕಾರುಗಳ ಮಾರಾಟಕ್ಕೆ ಚಾಲನೆ ನೀಡುತ್ತಿದ್ದು, ಇವು ಹೆಚ್ಚಿನ ಮಟ್ಟದ ಮೈಲೇಜ್ ನೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Follow us
Praveen Sannamani
|

Updated on: Mar 10, 2023 | 9:05 PM

ಭಾರತದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಹಲವಾರು ಹೊಸ ಕಾರು(New Cars) ಮಾದರಿಗಳು ಮಾರುಕಟ್ಟೆ ಪ್ರವೇಶಿಸಿವೆ. ಇದರಲ್ಲಿ ಎಲೆಕ್ಟ್ರಿಕ್ ಕಾರುಗಳು(Electric Cars) ಸಹ ಗಮನಸೆಳೆಯುತ್ತಿದ್ದು, ಸಾಮಾನ್ಯ ಕಾರುಗಳನ್ನೇ ಹಿಂದಿಕ್ಕಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೊಸ ಇವಿ ಕಾರುಗಳಲ್ಲಿ ಬಜೆಟ್ ಇವಿ ಮಾದರಿಗಳ ಜೊತೆ ಐಷಾರಾಮಿ ಇವಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ದುಬಾರಿ ಇಂಧನ ಪರಿಣಾಮ ಗ್ರಾಹಕರು ಇವಿ ಕಾರುಗಳತ್ತ ಹೆಚ್ಚಿನ ಗಮನಹರಿಸುತ್ತಿದ್ದು, ಹಲವು ಹೊಸ ಇವಿ ಕಾರು ಮಾದರಿಗಳು ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ.

ಟಿಯಾಗೋ ಎಲೆಕ್ಟ್ರಿಕ್

ಅತ್ಯುತ್ತಮ ಇವಿ ಕಾರುಗಳ ಪಟ್ಟಿಯಲ್ಲಿ ಸದ್ಯ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಟಿಯಾಗೋ ಎಲೆಕ್ಟ್ರಿಕ್ ಮುಂಚೂಣಿಯಲ್ಲಿದೆ. ಈ ಕಾರು ಅತ್ಯುತ್ತಮ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಯುನಿಟ್ ಬುಕಿಂಗ್ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ 19.2 ಕೆವಿಹೆಚ್ ಮತ್ತು 24 ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಾಗಿದ್ದು, ಇದು ಪ್ರತಿ ಚಾರ್ಜ್ ಗೆ 250 ರಿಂದ 315 ಕಿ.ಮೀ ಮೈಲೇಜ್ ನೀಡುತ್ತದೆ. ಬ್ಯಾಟರಿ ಆಯ್ಕೆಗೆ ಅನುಗುಣವಾಗಿ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8.69 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ

ಟಿಯಾಗೋ ಇವಿ ನಂತರ ಹೆಚ್ಚಿನ ಬೇಡಿಕೆಯಲ್ಲಿರುವ ಇವಿ ಕಾರುಗಳೆಂದರೆ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು. ಇವು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷ ಮತ್ತು 14.49 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಸುಧಾರಿತ ಬ್ಯಾಟರಿ ಆಯ್ಕೆ ಪಡೆದುಕೊಂಡಿವೆ. ಟಿಗೋರ್ ಇವಿ ಮಾದರಿಯು ಪ್ರತಿ ಚಾರ್ಜ್ ಗೆ 306 ಕಿ.ಮೀ ಮೈಲೇಜ್ ನೀಡಿದ್ದಲ್ಲಿ, ನೆಕ್ಸಾನ್ ಇವಿ ಕಾರು 312 ರಿಂದ 453 ಕಿ.ಮೀ ಮೈಲೇಜ್ ನೀಡುತ್ತದೆ. ಇದರೊಂದಿಗೆ ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಆವೃತ್ತಿಯು ಹೆಚ್ಚಿನ ಮೈಲೇಜ್ ನೀಡುತ್ತದೆ.

ಸಿಟ್ರನ್ ಇಸಿ3

ಇನ್ನು ಟಾಟಾ ಇವಿ ಕಾರುಗಳ ನಂತರ ಇದೀಗ ಹೊಸ ಇವಿ ಕಾರುಗಳ ಪೈಕಿ ಗಮನಸೆಳೆಯುತ್ತಿರುವ ಕಾರು ಮಾದರಿಯೆಂದರೆ ಅದು ಸಿಟ್ರನ್ ಇಸಿ3 ಆವೃತ್ತಿ. ಈ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ.11.50 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಇದು 29.2 ಕೆವಿಹೆಚ್ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್ ಗೆ 320 ಕಿ.ಮೀ ಮೈಲೇಜ್ ನೀಡುತ್ತದೆ. ಇದರೊಂದಿಗೆ ಹೊಸ ಕಾರು ಮಾದರಿಯು 56.2 ಹಾರ್ಸ್ ಪವರ್ ಮತ್ತು 143 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಪರ್ಫಾಮೆನ್ಸ್ ಹೊಂದಿದ್ದು, ಇದು ಪ್ರತಿ ಗಂಟೆಗೆ 107 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.

ಮಹೀಂದ್ರಾ ಎಕ್ಸ್ ಯುವಿ400

ಹೊಸ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮತ್ತೊಂದು ಪ್ರಮುಖ ಮಾದರಿಯೆಂದರೆ ಮಹೀಂದ್ರಾ ನಿರ್ಮಾಣದ ಹೊಸ ಎಕ್ಸ್ ಯುವಿ400. ಈ ಹೊಸ ಇವಿ ಕಾರು ಮಾದರಿಯು ಕಳೆದ ಜನವರಿಯಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 15.99 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಇದು ಪ್ರತಿ ಚಾರ್ಜ್ ಗೆ 456 ಕಿ.ಮೀ ಮೈಲೇಜ್ ನೀಡಲಿದ್ದು, ನೆಕ್ಸಾನ್ ಇವಿ ಕಾರಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಬಿವೈಡಿ ಅಟ್ಟೊ 3

ಇದರೊಂದಿಗೆ ಹೊಸ ಇವಿ ಕಾರುಗಳಲ್ಲಿ ಬಿವೈಡಿ ನಿರ್ಮಾಣದ ಅಟ್ಟೊ 3 ಎಲೆಕ್ಟ್ರಿಕ್ ಎಸ್ ಯುವಿ ಕೂಡಾ ಪ್ರಮುಖವಾಗಿದೆ. ಈ ಹೊಸ ಎಲೆಕ್ಟ್ರಿಕ್ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 33.99 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಹಲವಾರು ಹೊಸ ತಂತ್ರಜ್ಞಾನಗಳ ಪ್ರೇರಣೆ ಹೊಂದಿದ್ದು, 60.48 ಕಿಲೋ ವ್ಯಾಟ್ ಬ್ಲೇಡ್ ಬ್ಯಾಟರಿ ಪ್ಯಾಕ್ ಜೋಡಣೆ ಪಡೆದುಕೊಂಡಿದೆ. ಈ ಮೂಲಕ ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 521 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಇದರಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಕಾರಿನಲ್ಲಿ ಹಲವಾರು ಫೀಚರ್ಸ್ ಹೊಂದಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಫೀಚರ್ಸ್ ಜೋಡಿಸಲಾಗಿದೆ.

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್