Best CNG Cars: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!

ಭಾರತದಲ್ಲಿ ಸಿಎನ್ ಜಿ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಕಾರು ಮಾದರಿಗಳಲ್ಲಿ ಇದೀಗ ಸಿಎನ್ ಜಿ ಆವೃತ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ.

Best CNG Cars: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!
ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!
Follow us
Praveen Sannamani
|

Updated on: Nov 02, 2023 | 3:28 PM

ಹೆಚ್ಚುತ್ತಿರುವ ಇಂಧನಗಳ ದರ ಮತ್ತು ದುಬಾರಿ ನಿರ್ವಹಣೆ ಪರಿಣಾಮ ಹೊಸ ಕಾರುಗಳ (New Cars) ಖರೀದಿದಾರರು ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ಮತ್ತು ಸಿಎನ್ ಜಿ ಕಾರುಗಳ ಖರೀದಿಗೆ ಮುಂದಾಗುತ್ತಿದ್ದಾರೆ. ಪರಿಸರ ಸ್ನೇಹಿ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳಿಗೆ ಸದ್ಯ ಉತ್ತಮ ಬೇಡಿಕೆಯಿದ್ದರೂ ಬೆಲೆ ತುಸು ದುಬಾರಿಯಾಗಿರುವುದರಿಂದ ಹಲವು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಎನ್ ಜಿ ಮಾದರಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಸಿಎನ್ ಜಿ ಕಾರುಗಳು ಸದ್ಯ ಎಂಟ್ರಿ ಲೆವಲ್ ಕಾರುಗಳಲ್ಲಿ ಮಾತ್ರವಲ್ಲದೆ ಮಧ್ಯಮ ಗಾತ್ರದ ಎಸ್ ಯುವಿ ಮತ್ತು ಎಂಪಿವಿ ಕಾರುಗಳಲ್ಲೂ ಮಾರಾಟಗೊಳ್ಳುತ್ತಿದ್ದು, ಅತ್ಯುತ್ತಮ ಸಿಎನ್ ಜಿ ಮಾದರಿಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಹ್ಯುಂಡೈ ಎಕ್ಸ್ಟರ್

ಮೈಕ್ರೊ ಎಸ್ ಯುವಿ ವೈಶಿಷ್ಟ್ಯತೆಯ ಹ್ಯುಂಡೈ ಎಕ್ಸ್ ಟರ್ ಕಾರು ಮಾದರಿಯು ಸಿಎನ್ ಜಿ ಆಯ್ಕೆ ಹೊಂದಿರುವ ಪ್ರಮುಖ ಕಾರು ಮಾದರಿಗಳಲ್ಲಿ ಒಂದಾಗಿದ್ದು, ಎಕ್ಸ್ ಟರ್ ಸಿಎನ್ ಜಿ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಹೊಂದಿದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ 27 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 8.34 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿವೆ ಟಾಪ್ 5 ಬಹುನೀರಿಕ್ಷಿತ ಹೊಸ ಕಾರುಗಳು!

ಟೊಯೊಟಾ ರೂಮಿಯಾನ್

ಹೊಸ ಟೊಯೊಟಾ ರೂಮಿಯಾನ್ ಎಂಪಿವಿ ಕಾರಿನ ಸಿಎನ್ ಜಿ ಮಾದರಿಯು ಮಧ್ಯಮ ಕ್ರಮಾಂಕದ ಪೆಟ್ರೋಲ್ ವೆರಿಯೆಂಟ್ ಆಧರಿಸಿದ್ದು, ಇದು 1.5 ಲೀಟರ್ ಪೆಟ್ರೋಲ್ ಎಂಜಿನ್ ಪ್ರೇರಿತ 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 26.11 ಕಿ.ಮೀ ಮೈಲೇಜ್ ನೀಡುತ್ತದೆ. ಎಸ್ ವೆರಿಯೆಂಟ್ ಆಧರಿಸಿರುವ ಸಿಎನ್ ಜಿ ಮಾದರಿಯು ರೂ. 11.24 ಲಕ್ಷ ಬೆಲೆ ಹೊಂದಿದ್ದು, ಇದು ಮೂಲತಃ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ರೀಬ್ಯಾಡ್ಜ್ ಆವೃತ್ತಿಯಾಗಿದೆ.

ಮಾರುತಿ ಸುಜುಕಿ ಎಕ್ಸ್6

ಮಾರುತಿ ಸುಜುಕಿ ನಿರ್ಮಾಣದ ಪ್ರೀಮಿಯಂ ಕಾರು ಮಾದರಿಯಾಗಿರುವ ಎಕ್ಸ್6 ಎಂಪಿವಿಯಲ್ಲೂ ಸಿಎನ್ ಜಿ ಆಯ್ಕೆ ಲಭ್ಯವಿದ್ದು, ಇದು 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಪಡೆದುಕೊಂಡಿದೆ. ಇದು ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 26.32 ಕಿ.ಮೀ ಮೈಲೇಜ್ ನೀಡಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 12.51 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ

ಮಾರುತಿ ಸುಜುಕಿ ಪ್ರೀಮಿಯಂ ಎಸ್ ಯುವಿ ಆವೃತ್ತಿಯಾಗಿರುವ ಗ್ರ್ಯಾಂಡ್ ವಿಟಾರಾದಲ್ಲೂ ಸಿಎನ್ ಜಿ ಆಯ್ಕೆ ನೀಡಲಾಗಿದ್ದು, ಇದು 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಹೊಂದಿದೆ. ಎಕ್ಸ್ಎಲ್6 ಮಾದರಿಯಲ್ಲಿಯೇ ಇದು ಕೂಡಾ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿ ಗೆ 26.6 ಕಿ.ಮೀ ಮೈಲೇಜ್ ನೀಡಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 13.05 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ನ್ಯೂ ಜನರೇಷನ್ ಸುಜುಕಿ ಸ್ವಿಫ್ಟ್ ಅನಾವರಣ

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್ ಯುವಿಯು ಮೂಲತಃ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾದಲ್ಲೂ ಆಧರಿಸಿದ್ದು, ಇದರಲ್ಲೂ ಕೂಡಾ 1.5 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಜೋಡಿಸಲಾಗಿದೆ. ಈ ಮೂಲಕ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 26 ಕಿ.ಮೀ ಮೈಲೇಜ್ ನೀಡಲಿದ್ದು, ಹಲವಾರು ಫೀಚರ್ಸ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 13.56 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ