ಸಖತ್ ಮೈಲೇಜ್ ನೊಂದಿಗೆ ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್ ಬಿಡುಗಡೆ

ಬಿಗಾಸ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯು ತನ್ನ ಹೊಸ ಆರ್‌ಯುವಿ350 ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಸಖತ್ ಮೈಲೇಜ್ ನೊಂದಿಗೆ ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್ ಬಿಡುಗಡೆ
ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್
Follow us
Praveen Sannamani
|

Updated on: Jun 30, 2024 | 10:20 PM

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯಾಗಿರುವ ಬಿಗಾಸ್ (BGauss) ತನ್ನ ಹೊಸ ಆರ್‌ಯುವಿ350 ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಆರ್‌ಯುವಿ350ಐ ಇಎಕ್ಸ್ , ಆರ್‌ಯುವಿ350 ಇಎಕ್ಸ್ ಮತ್ತು ಆರ್‌ಯುವಿ350 ಮ್ಯಾಕ್ಸ್ ಎನ್ನುವ ಮೂರು ವೆರಿಯೆಂಟ್ ಗಳೊಂದಿಗೆ ಖರೀದಿಗೆ ಲಭ್ಯವಿದೆ. ಇದರಲ್ಲಿ ಆರಂಭಿಕ ಮಾದರಿಯು ರೂ.1,09,999 ಬೆಲೆ ಹೊಂದಿದ್ದರೆ ಮಧ್ಯಮ ಕ್ರಮಾಂಕದ ಮಾದರಿಯು ರೂ.1,24,999 ಮತ್ತು ಟಾಪ್ ಎಂಡ್ ಮಾದರಿಯು ರೂ.1,34,999 ಬೆಲೆ ಹೊಂದಿದೆ.

ಸದ್ಯ ಮಾರುಕಟ್ಟೆಯಲ್ಲಿ ಡಿ15 ಹಾಗೂ ಸಿ12ಐ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿರುವ ಬಿಗಾಸ್ ಕಂಪನಿಯು ಇದೀಗ ಹೊಸ ಫೀಚರ್ಸ್ ಹೊಂದಿರುವ ಆರ್‌ಯುವಿ350 ಇವಿ ಸ್ಕೂಟರ್ ಪರಿಚಯಿಸಿದ್ದು, ಇದು ಪ್ರಮುಖ 5 ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ರೂ.10,000 ದಿಂದ ರೂ.20,000 ಮೌಲ್ಯದ ಉಚಿತ ವಿಮೆ ಮತ್ತು ಬ್ಯಾಟರಿ ವಾರಂಟಿ ಸೌಲಭ್ಯಗಳನ್ನು ನೀಡುತ್ತಿದ್ದು, ಇವಿ ಸ್ಕೂಟರ್ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಹೊಸ ಆರ್‌ಯುವಿ350 ಇವಿ ಸ್ಕೂಟರ್ ನಲ್ಲಿ ಬಿಗಾಸ್ ಕಂಪನಿಯು ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ 2.3 ಕೆವಿಹೆಚ್ ಮತ್ತು 3 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇವು ಪ್ರತಿ ಚಾರ್ಜ್ ಗೆ 90 ರಿಂದ 120 ಕಿ.ಮೀ ಮೈಲೇಜ್ ನೀಡುತ್ತವೆ. ಆರ್‌ಯುವಿ350 ಮ್ಯಾಕ್ಸ್ ಮಾದರಿಯು ದುಬಾರಿ ಬೆಲೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದ್ದು, ಇದು ಮೈಲೇಜ್ ನಲ್ಲೂ ಗಮನಸೆಳೆಯುತ್ತದೆ.

ಇದನ್ನೂ ಓದಿ: ಕೇವಲ ರೂ. 15 ಸಾವಿರಕ್ಕೆ ಸಿಎನ್‌ಜಿ ಆವೃತ್ತಿಯಾಗಲಿವೆ ನಿಮ್ಮ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನಗಳು..

ಹಾಗೆಯೇ ಹೊಸ ಇವಿ ಸ್ಕೂಟರ್ ನಲ್ಲಿ ಅತ್ಯಾಧುನಿಕ ವಿನ್ಯಾಸದೊಂದಿಗೆ ಸಖತ್ ಫೀಚರ್ಸ್ ಜೋಡಣೆ ಮಾಡಲಾಗಿದ್ದು, ಅರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗುವ ಬ್ಲೂಟೂಥ್, ಕ್ರೂಸ್ ಕಂಟ್ರೋಲ್ ಮತ್ತು ಹಿಲ್ ಹೋಲ್ಡ್ ಫೀಚರ್ಸ್ ನೀಡಲಾಗಿದೆ. ಜೊತೆಗೆ 16 ಇಂಚಿನ ವೀಲ್ಹ್ ಜೊತೆಗೆ 130 ಎಂಎಂ ಡ್ರಮ್ ಬ್ರೇಕ್ಸ್ ಜೋಡಣೆ ಮಾಡಲಾಗಿದ್ದು, ಬೆಲೆ ವಿಚಾರದಲ್ಲಿ ಇದು ಟಿವಿಎಸ್ ಐಕ್ಯೂಬ್, ಎಥರ್ ರಿಜ್ಟಾಗೆ ಇವಿ ಸ್ಕೂಟರ್ ಗಳಿಗೆ ಉತ್ತಮ ಪೈಪೋಟಿ ನೀರಿಕ್ಷೆಯಿದೆ.

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ