AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat NCAP: ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಮಿಂಚಲು ಸಜ್ಜಾಗಿವೆ ಡಜನ್ ಕಾರುಗಳು..

ಹೊಸ ಕಾರುಗಳಲ್ಲಿನ ಸುರಕ್ಷತೆಯ ಖಾತ್ರಿಗಾಗಿ ಭಾರತ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ ಆರಂಭವಾಗುತ್ತಿದ್ದು, ಡಿಸೆಂಬರ್ 15ರಿಂದ ಆರಂಭವಾಗುವ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ಜನಪ್ರಿಯ ಕಾರುಗಳು ಸ್ವಯಂಪ್ರೇರಿತವಾಗಿ ಪರೀಕ್ಷೆಗೆ ಒಳಪಡಲಿವೆ.

Bharat NCAP: ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಮಿಂಚಲು ಸಜ್ಜಾಗಿವೆ ಡಜನ್ ಕಾರುಗಳು..
ಭಾರತ್ ಕ್ರ್ಯಾಶ್ ಟೆಸ್ಟಿಂಗ್
Praveen Sannamani
|

Updated on: Nov 03, 2023 | 7:52 PM

Share

ಕೇಂದ್ರ ಸರ್ಕಾರವು ಭಾರತದಲ್ಲಿ ಮಾರಾಟಗೊಳ್ಳುವ ಹೊಸ ಕಾರುಗಳಲ್ಲಿನ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಭಾರತ್ ಎನ್‌ಸಿಎಪಿ (Bharat NCAP) ಕ್ರ್ಯಾಶ್ ಟೆಸ್ಟ್ ಜಾರಿ ಮಾಡಿದ್ದು, ಹೊಸ ಸುರಕ್ಷಾ ಮಾನದಂಡವು ದೇಶಿಯ ಮಾರುಕಟ್ಟೆಯಲ್ಲಿನ ವಾಹನ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಸಹಕಾರಿಯಾಗಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಜಾಗತಿಕವಾಗಿ ಹೊಸ ಕಾರುಗಳ ಗುಣಮಟ್ಟ ಪರೀಕ್ಷಿಸಲು ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ ಮಾನದಂಡಗಳನ್ನು ಅನುಸರಿಸಲಾಗುತ್ತಿದ್ದು, ಇದೀಗ ಕೇಂದ್ರ ಸಾರಿಗೆ ಇಲಾಖೆಯು ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗಾಗಿ ಪ್ರತ್ಯೇಕವಾದ ಸುರಕ್ಷಾ ಮಾನದಂಡಗಳೊಂದಿಗೆ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಪರಿಚಯಿಸಿದೆ. ಅಕ್ಟೋಬರ್‌ 1 ರಿಂದಲೇ ಕ್ಯಾಶ್ ಟೆಸ್ಟಿಂಗ್ ಪ್ರಕ್ರಿಯೆ ಅಧಿಕೃತವಾಗಿ ಜಾರಿಗೆ ಬಂದಿದ್ದರೂ ಕಾರಣಾಂತರಗಳಿಂದ ಡಿಸೆಂಬರ್ 15ರಿಂದ ಕಾರುಗಳ ಸುರಕ್ಷಾ ಪರೀಕ್ಷಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿಯೇ ಸುಮಾರು 30ಕ್ಕೂ ಹೆಚ್ಚು ಕಾರುಗಳು ಕ್ಯಾಶ್ ಟೆಸ್ಟಿಂಗ್ ನಲ್ಲಿ ಭಾಗಿಯಾಗಲು ಸಿದ್ದಗೊಂಡಿವೆ ಎನ್ನಲಾಗಿದೆ.

Bharat-NCAP-2

ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಕಾರುಗಳಲ್ಲಿನ ವಯಸ್ಕ ಪ್ರಯಾಣಿಕರ ಸುರಕ್ಷತೆ, ಮಕ್ಕಳ ಸುರಕ್ಷತೆ ಮತ್ತು ಸುರಕ್ಷಾ ತಂತ್ರಜ್ಞಾನಗಳ ಕಾರ್ಯನಿರ್ವಹಣೆ ಕಾರ್ಯಕ್ಷಮತೆಯನ್ನು ಪರೀಕ್ಷಿಸಲಿದ್ದು, ಇವು ಅಪಘಾತದ ವೇಳೆ ಪ್ರಯಾಣಿಕರಿಗೆ ಸುರಕ್ಷತೆ ಒದಿಗಸುವುದರ ಆಧಾರದ ಮೇಲೆ ಸೊನ್ನೆಯಿಂದ 5 ಸ್ಟಾರ್ ಟೆಸ್ಟಿಂಗ್ ನೀಡಲಾಗುತ್ತದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಸುರಕ್ಷಿತ ಕಾರು ಎಂದು ಗುರುತಿಸಿಕೊಳ್ಳಲು ಕನಿಷ್ಠ ಮೂರು ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಮೂರಕ್ಕಿಂತ ಕಡಿಮೆ ರೇಟಿಂಗ್ಸ್ ಪಡೆದುಕೊಳ್ಳುವ ಕಾರುಗಳನ್ನು ಕಳಪೆ ಎಂದು ಘೋಷಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

Bharat-NCAP-1

ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭಾಗಿಯಾಗಲು ಈಗಾಗಲೇ ಹಲವಾರು ಕಾರು ಉತ್ಪಾದನಾ ಕಂಪನಿಗಳು ಕೇಂದ್ರದಿಂದ ಗೊತ್ತುಪಡಿಸಿದ ಅಧಿಕಾರಿಗಳಿಗೆ ಫಾರ್ಮ್ 70-A ಮೂಲಕ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಕೆಯಲ್ಲಿ ಟಾಟಾ ಮೋಟಾರ್ಸ್, ಮಹೀಂದ್ರಾ ಮತ್ತು ಹ್ಯುಂಡೈ ಕಂಪನಿಯು ಮುಂಚೂಣಿಯಲ್ಲಿವೆ ಎನ್ನಲಾಗಿದೆ.

ಭಾರತ್‌ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ ಪ್ರೋಟೋಕಾಲ್ ಅಂತಾರಾಷ್ಟ್ರೀಯ ಮಟ್ಟದ ಎನ್‌ಸಿಎಪಿ ರೇಟಿಂಗ್ ಏಜೆನ್ಸಿಗಳಿಗೆ ಅನುಗುಣವಾಗಿರಲಿದ್ದು, ಪರೀಕ್ಷಾ ವೇಗವನ್ನು ಪ್ರತಿ ಗಂಟೆಗೆ ಗರಿಷ್ಠ 64 ಕಿಮೀ ಗಳಿಗೆ ನಿಗದಿಪಡಿಸಲಾಗಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಸೀಟ್ ಬೆಲ್ಟ್ ರಿಮೈಂಡರ್‌ ಮತ್ತು ಪಾದಚಾರಿ ರಕ್ಷಣೆಯ ಫೀಚರ್ಸ್ ಗಳು ಹೊಸ ಕಾರುಗಳಿಗೆ ಹೆಚ್ಚಿನ ಸ್ಕೋರ್ ನೀಡಲಿವೆ.

ಇದನ್ನೂ ಓದಿ: ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್

ಸದ್ಯಕ್ಕೆ ಹೊಸ ಸುರಕ್ಷಾ ಅಭಿಯಾನದಡಿ ಸಾಮಾನ್ಯ ಕಾರುಗಳಿಗೆ ಮಾತ್ರ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ಸ್ ನೀಡಲಾಗುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಇವಿ ಕಾರುಗಳಿಗೂ ಹೊಸ ಸುರಕ್ಷಾ ಮಾನದಂಡ ಪರಿಚಯಿಸುವ ಸಿದ್ದತೆ ನಡೆಯುತ್ತಿದೆ. ಇದರೊಂದಿಗೆ ಹೊಸ ಕಾರುಗಳಲ್ಲಿ ಇನ್ಮುಂದೆ ಹೆಚ್ಚಿನ ಸಂಖ್ಯೆಯ ಏರ್‌ಬ್ಯಾಗ್ ಗಳು ಸೇರಿದಂತೆ ಇತರೆ ಸುರಕ್ಷತಾ ವೈಶಿಷ್ಟ್ಯತೆಗಳು ವ್ಯಾಪಕವಾಗಿ ನೀಡುವ ನಿರೀಕ್ಷೆಯಿದ್ದು, ಇವು ಅಪಘಾತಗಳಲ್ಲಿನ ಪ್ರಾಣಹಾನಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲಿದೆ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..