Bundelkhand Expressway: ಸೌರ ಶಕ್ತಿ ಉತ್ಪಾದನೆಯಲ್ಲಿ ಹೊಸ ದಾಖಲೆ ನಿರ್ಮಿಸಿಲಿದೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ

ದೆಹಲಿ ಮತ್ತು ಲಕ್ನೋಗೆ ಸಂಪರ್ಕ ಕಲ್ಪಿಸುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಹಲವಾರು ವಿಶೇಷತೆಗಳನ್ನು ಒಳಗೊಂಡಿದ್ದು, ಇದೀಗ ಹೊಸ ಹೆದ್ದಾರಿಯಲ್ಲಿ ಉತ್ತರಪ್ರದೇಶ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ.

Bundelkhand Expressway: ಸೌರ ಶಕ್ತಿ ಉತ್ಪಾದನೆಯಲ್ಲಿ ಹೊಸ ದಾಖಲೆ ನಿರ್ಮಿಸಿಲಿದೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ
ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ
Follow us
Praveen Sannamani
|

Updated on: Nov 26, 2023 | 4:37 PM

ಕೇಂದ್ರ ಸರ್ಕಾರವು ಆರ್ಥಿಕ ಅಭಿವೃದ್ದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳ ನಡುವಿನ ಸಾರಿಗೆ ಸಂಪರ್ಕವನ್ನು ವಿಶ್ವದರ್ಜೆಗೆ ಪರಿವರ್ತನೆಗೊಳಿಸುತ್ತಿದ್ದು, ಸುಸ್ಥಿರ ಮತ್ತು ಮರುಬಳಕೆ ಮಾಡಬಹುದಾದ ತಂತ್ರಜ್ಞಾನಗಳೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ (Bundelkhand Expressway) ಸಹ ಹಲವಾರು ವಿಶೇಷತೆಗಳೊಂದಿಗೆ ಸಾರಿಗೆ ಸಂಪರ್ಕದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದು ದೇಶದಲ್ಲಿಯೇ ಮೊದಲ ಸೌರ ಶಕ್ತಿ ಪ್ರೇರಿತ ಹೆದ್ದಾರಿ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಲ್ಲಿ ಉತ್ತರ ಪ್ರದೇಶ ಸರ್ಕಾರವು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಯೋಜನೆ ಅಡಿ ಡಿವೈಡರ್ ಮದ್ಯದಲ್ಲಿ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಲಾಗುತ್ತಿದ್ದು, ಈ ಮೂಲಕ ಹೆದ್ದಾರಿಯಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳಿಗೂ ವಿದ್ಯುತ್ ಪೂರೈಕೆ ಮಾಡುವ ಯೋಜನೆ ಸಿದ್ದಪಡಿಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಸುರಕ್ಷಿತ ಕಾರುಗಳಿವು!

ಹೊಸ ಯೋಜನೆಯೊಂದಿಗೆ 550 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿಹೊಂದಲಾಗಿದ್ದು, ಇದು ಹೆದ್ದಾರಿಯಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಭವಿಷ್ಯದಲ್ಲಿ ಹೆಚ್ಚಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ವಿದ್ಯುತ್ ಪೂರೈಕೆ ಮಾಡಲು ಸಹಕಾರಿಯಾಗಲಿದೆ. ಎಲೆಕ್ಟ್ರಿಕ್ ವಾಹನಗಳು ಹೆಚ್ಚುತ್ತಿರುವುದರಿಂದ ಈಗಾಗಲೇ ವಿದ್ಯುತ್ ಉತ್ಪಾದನೆಗೆ ಬೇಡಿಕೆ ಹೆಚ್ಚುತ್ತಿದ್ದು, ಭವಿಷ್ಯದಲ್ಲಿನ ಇವಿ ವಾಹನಗಳ ಬೇಡಿಕೆ ಪೂರೈಸಲು ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಳ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಮಹತ್ವದ ಯೋಜನೆಗೆ ಚಾಲನೆ ನೀಡಿದ್ದು, ಶೀಘ್ರದಲ್ಲಿಯೇ ಹೊಸ ಎಕ್ಸ್‌ಪ್ರೆಸ್‌ವೇ ಗಳಲ್ಲಿ ಸೌರ ಶಕ್ತಿ ಉತ್ಪಾದನೆ ಹೆಚ್ಚಳವಾಗುವ ನೀರಿಕ್ಷೆಗಳಿವೆ.

ಇನ್ನು ದೆಹಲಿ ಮತ್ತು ಲಕ್ನೋಗೆ ಸೇರ ಸಂಪರ್ಕ ಕಲ್ಪಿಸುವ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕಳೆದ ವರ್ಷವಷ್ಟೇ ರೂ. 14,850 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದು ಡಿಎನ್‌ಡಿ ಫ್ಲೈವೇಯಲ್ಲಿ 9 ಕಿಮೀ, ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ 24 ಕಿಮೀ, ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 165 ಕಿಮೀ ಮತ್ತು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ 135 ಕಿಮೀ ಕ್ರಮಿಸುತ್ತದೆ.

ಹೊಸ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ದೆಹಲಿ ಸೇರಿದಂತೆ ಇತರೆ ರಾಜ್ಯಗಳಿಗೆ ಜನರನ್ನು ಸುಲಭ ಸಂಪರ್ಕಿಸಲು ಸಹಕಾರಿಯಾಗಿದ್ದು, ಇದು ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ, ಜಲೌನ್, ಔರೈಯಾ ಮತ್ತು ಇಟಾವಾ ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಿದೆ. ಜೊತೆಗೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕೈಗಾರಿಕೆಗಳ ಅಭಿವೃದ್ದಿಗೂ ಸಹಕಾರಿಯಾಗಲಿದ್ದು, ಹೊಸ ಹೆದ್ದಾರಿಯನ್ನು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ ನಿರ್ಮಾಣ ಮಾಡಿದೆ.

ಇದನ್ನೂ ಓದಿ: ಪೆಟ್ರೋಲ್ ಕಾರುಗಳು Vs ಪೆಟ್ರೋಲ್ ಸಿಎನ್‌ಜಿ ಕಾರುಗಳು.. ಖರೀದಿಗೆ ಯಾವುದು ಬೆಸ್ಟ್?

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಅನ್ನು ಕೇವಲ 28 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಹಲವಾರು ವಿಶೇಷತೆಗಳೊಂದಿಗೆ ನಿರ್ಮಾಣವಾಗಿದೆ. ಸುಸ್ಥಿರ ಮತ್ತು ಮರುಬಳಕೆ ಮಾಡಬಹುದಾದ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಎಕ್ಸ್‌ಪ್ರೆಸ್‌ವೇ ಮಾರ್ಗವು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಪ್ರಯೋಗಗಳಿಗೆ ಸಾಕ್ಷಿಯಾಗಲಿದೆ.

ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್
ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್