ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ

ಬಿವೈಡಿ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಅಟ್ಟೊ3 ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸ ಆರಂಭಿಕ ವೆರಿಯೆಂಟ್ ಬಿಡುಗಡೆ ಮಾಡಿದೆ.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ
ಬಿವೈಡಿ ಅಟ್ಟೊ 3 ಇವಿ
Follow us
Praveen Sannamani
|

Updated on: Jul 13, 2024 | 10:37 PM

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ ಇಂಡಿಯಾ ತನ್ನ ಜನಪ್ರಿಯ ಅಟ್ಟೊ 3 (Atto 3) ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸದಾಗಿ ಡೈನಾಮಿಕ್ ವೆರಿಯೆಂಟ್ ಪರಿಚಯಿಸಿದೆ. ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಿಂತಲೂ ರೂ. 9 ಲಕ್ಷ ಕಡಿಮೆ ಬೆಲೆಗೆ ಲಭ್ಯವಿದೆ.

ಅಟ್ಟೊ3 ಕಾರು ಮಾದರಿಯಲ್ಲಿ ಹೊಸ ಡೈನಾಮಿಕ್ ವೆರಿಯೆಂಟ್ ನೊಂದಿಗೆ ಈಗಾಗಲೇ ಪ್ರೀಮಿಯಂ ಮತ್ತು ಸುಪೀರಿಯೋ ಎನ್ನುವ ಎರಡು ಟಾಪ್ ಎಂಡ್ ವೆರಿಯೆಂಟ್ ಹೊಂದಿದೆ. ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 29.85 ಲಕ್ಷ ಮತ್ತು ರೂ.33.99 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಿರುವ ಡೈನಾಮಿಕ್ ವೆರಿಯೆಂಟ್ ಉಳಿದೆರಡು ವೆರಿಯೆಂಟ್ ಗಳಿಂತಲೂ ಕಡಿಮೆ ಬೆಲೆಯೊಂದಿಗೆ ಕೆಲವು ಐಷಾರಾಮಿ ಫೀಚರ್ಸ್ ಗಳನ್ನು ಕಳೆದುಕೊಂಡಿರಲಿದೆ. ಆದರೆ ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಸ್ಮಾರ್ಟ್ ಫೀಚರ್ಸ್ ಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಬಿವೈಡಿ ಕಂಪನಿಯು ಹೊಸ ಡೈನಾಮಿಕ್ ವೆರಿಯೆಂಟ್ ನಲ್ಲಿದೆ 49.92kWh ಬ್ಯಾಟರಿ ಆಯ್ಕೆ ನೀಡಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 468 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೈ ಎಂಡ್ ಮಾದರಿಗಳನ್ನು ಖರೀದಿಸುವ ಗ್ರಾಹಕರಿಗೆ 60.48kWh ಬ್ಯಾಟರಿ ಪ್ಯಾಕ್ ಆಯ್ಕೆ ದೊರಲಿದ್ದು, ಇದು ಪ್ರತಿ ಚಾರ್ಜ್ ಗೆ 521 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಗಳಿದ್ದು, ಆರಂಭಿಕ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಕೆಲವು ಪ್ರೀಮಿಯಂ ಫೀಚರ್ಸ್ ಸಿಗುವುದಿಲ್ಲ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಬಯಸುವ ಗ್ರಾಹಕರಿಗಾಗಿ ಹೊಸ ವೆರಿಯೆಂಟ್ ಅತ್ಯುತ್ತಮ ಆಯ್ಕೆಯಾಗಿದ್ದು, ಕಾಸ್ಮೊ ಬ್ಲ್ಯಾಕ್ ಬಣ್ಣದೊಂದಿಗೆ ಹಲವಾರು ಫೀಚರ್ಸ್ ಗಳನ್ನು ಜೋಡಣೆ ಮಾಡಲಾಗಿದೆ. ಈ ಮೂಲಕ ಇದು ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಮುಂಬರುವ ಹ್ಯುಂಡೈ ಕ್ರೆಟಾ ಇವಿ ಮತ್ತು ಮಾರುತಿ ಇವಿಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ