BYD Atto 3: ಪ್ರತಿ ಚಾರ್ಜ್‌ಗೆ 521 ಕಿ.ಮೀ ಮೈಲೇಜ್ ನೀಡುವ ಬಿವೈಡಿ ಅಟ್ಟೊ 3 ಎಲೆಕ್ಟ್ರಿಕ್ ಕಾರು ಬಿಡುಗಡೆ

ಚೀನಾ ಮೂಲದ ಬಿವೈಡಿ(ಬಿಲ್ಡ್ ಯುವರ್ ಡ್ರೀಮ್ಸ್) ಕಂಪನಿಯು ಭಾರತದಲ್ಲಿ ತನ್ನ ಎರಡನೇ ಎಲೆಕ್ಟ್ರಿಕ್ ಕಾರು ಉತ್ಪನ್ನವಾದ ಅಟ್ಟೊ 3 ಎಲೆಕ್ಟ್ರಿಕ್ ಎಸ್ ಯುವಿ ಬಿಡುಗಡೆ ಮಾಡಿದೆ.

BYD Atto 3: ಪ್ರತಿ ಚಾರ್ಜ್‌ಗೆ 521 ಕಿ.ಮೀ ಮೈಲೇಜ್ ನೀಡುವ ಬಿವೈಡಿ ಅಟ್ಟೊ 3 ಎಲೆಕ್ಟ್ರಿಕ್ ಕಾರು ಬಿಡುಗಡೆ
Follow us
Praveen Sannamani
|

Updated on:Nov 16, 2022 | 1:11 PM

ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ(BYD) ಕಂಪನಿಯು ಹೊಸ ಅಟ್ಟೊ 3(Atto 3) ಎಲೆಕ್ಟ್ರಿಕ್ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಎಲೆಕ್ಟ್ರಿಕ್ ಕಾರು(Electric Car) ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 33.99 ಲಕ್ಷ ಬೆಲೆ ಹೊಂದಿದೆ. ಭಾರತದಲ್ಲಿ ಇ6(E6) ಎಂಪಿವಿ ಬಿಡುಗಡೆಯ ನಂತರ ಅಟ್ಟೊ 3 ಬಿಡುಗಡೆ ಮಾಡಿರುವ ಬಿವೈಡಿ ಕಂಪನಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಹಲವಾರು ಹೊಸ ತಂತ್ರಜ್ಞಾನಗಳ ಪ್ರೇರಣೆ ಹೊಂದಿದೆ.

ಬ್ಯಾಟರಿ ಮತ್ತು ಮೈಲೇಜ್

ಹೊಸ ಅಟ್ಟೊ 3 ಎಲೆಕ್ಟ್ರಿಕ್ ಎಸ್ ಯುವಿಯಲ್ಲಿ ಬಿವೈಡಿ ಕಂಪನಿಯು 60.48kWh ಬ್ಲೇಡ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 521 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹೊಸ ಕಾರಿನಲ್ಲಿರುವ ಬ್ಲೇಡ್ ಬ್ಯಾಟರಿ ಪ್ಯಾಕ್ ಕಂಪನಿಯ ಎಲ್ಎಫ್ ಪಿ ಕೆಮೆಸ್ಟ್ರಿ ತಂತ್ರಜ್ಞಾನ ಹೊಂದಿದ್ದು, ಇದು ಮುಂಭಾಗದ ಚಕ್ರಗಳಿಗೆ ಶಕ್ತಿ ಪೂರೈಸುತ್ತದೆ.

BYD Atto 3 Electric SUV

BYD Atto 3 Electric SUV

ಅಟ್ಟೊ 3 ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟಾರ್ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, ಇದು 201 ಹಾರ್ಸ್ ಪವರ್, 310 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಈ ಮೂಲಕ ಹೊಸ ಕಾರು 7.3 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳಲಿದ್ದು, ಇದರಲ್ಲಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಹೊಸ ಕಾರಿನ ಬ್ಯಾಟರಿ ಪ್ಯಾಕ್ ಕೇವಲ 50 ನಿಮಿಷಗಳಲ್ಲಿ 80kW ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಸೊನ್ನೆಯಿಂದ ಶೇ. 80 ರಷ್ಟು ಚಾರ್ಜ್ ಆಗಲಿದ್ದು, ಎಸಿ ಚಾರ್ಜರ್ ನಲ್ಲಿ ಪೂರ್ತಿ ಚಾರ್ಜ್ ಆಗಲು ಗರಿಷ್ಠ 10 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!

ಡಿಸೈನ್ ಮತ್ತು ಫೀಚರ್ಸ್

ಕ್ರಾಸ್ ಓವರ್ ಎಸ್ ಯುವಿ ವಿನ್ಯಾಸದೊಂದಿಗೆ ಅತ್ಯುತ್ತಮ ಏರೋಡೈನಾಮಿಕ್ ಪಡೆದುಕೊಂಡಿರುವ ಹೊಸ ಕಾರು ಮಾದರಿಯು 0.29 ಸಿಡಿ ಡ್ರ್ಯಾಗ್‌ ಗುಣಾಂಕ ಹೊಂದಿದೆ. ಇದರಲ್ಲಿ ಕಂಪನಿಯು ಎಲ್ಇಡಿ ಹೆಡ್ ಲೈಟ್ಸ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್ ಎಲ್ಎಸ್, ಬಾರ್ ಕ್ರೊಮ್ ನೊಂದಿಗೆ ಬಿವೈಡಿ ಲೋಗೊ ಜೊತೆಗೆ ಎಲ್ಲಾ ಮಾದರಿಯು ಲೈಟಿಂಗ್ ಸೌಲಭ್ಯಗಳು ಎಲ್ಇಡಿ ವೈಶಿಷ್ಟ್ಯತೆ ಹೊಂದಿವೆ. ಹಾಗೆಯೇ ಹೊಸ ಕಾರಿನಲ್ಲಿ ಎಸ್ ಯುವಿ ವಿನ್ಯಾಸಕ್ಕೆ ಪೂರಕವಾದ ಸ್ಪೋರ್ಟಿ ಸ್ಟೈಲ್ ಹೊಂದಿರುವ 18 ಇಂಚಿನ ಅಲಾಯ್ ವ್ಹೀಲ್, ಇಂಟ್ರಾಗ್ರೆಟೆಡ್ ರೂಫ್ ಸ್ಪಾಯ್ಲರ್, ಸಿಂಗಲ್ ಪೀಸ್ ಟೈಲ್ ಗೇಟ್ ಸೌಲಭ್ಯಗಳಿವೆ. ಹೊಸ ಕಾರು ಒಟ್ಟು ನಾಲ್ಕು ಬಣ್ಣಗಳ ಆಯ್ಕೆ ಹೊಂದಿದ್ದು, ಗ್ರಾಹಕರು ಬಂಡ್ಲರ್ ಗ್ರೇ, ಪಾರ್ಕೌರ್ ರೆಡ್, ಸ್ಕಿ ವೈಟ್ ಮತ್ತು ಸರ್ಫ್ ಬ್ಲ್ಯೂ ಬಣ್ಣಗಳ ಆಯ್ಕೆ ಹೊಂದಿದೆ.

ಇಂಟಿರಿಯರ್ ಫೀಚರ್ಸ್

ಹೊಸ ಕಾರು ಹೊರಭಾಗದಲ್ಲಿರುವಂತೆ ಒಳಭಾಗದಲ್ಲೂ ಹಲವಾರು ಫೀಚರ್ಸ್ ಹೊಂದಿದೆ. ಹೊಸ ಕಾರಿನಲ್ಲಿ ಗ್ರೇ ಬ್ಲ್ಯೂ ಜೊತೆ ರೆಡ್ ಹೈಲೈಟ್ಸ್ ನೀಡಲಾಗಿದ್ದು, ಡೆಬಲ್ ಶೇಫ್ ಹೊಂದಿರುವ ಎಸಿ ವೆಂಟ್ಸ್, ಗ್ರಿಲ್ ಸ್ಟೈಲ್ ಹೊಂದಿರುವ ಡೋರ್ ಹ್ಯಾಂಡಲ್ ಗಳು, ಚಾಲನೆಗೆ ಸಹಕಾರಿಯಾಗುವಂತೆ ಹೊಂದಾಣಿಕೆ ಮಾಡಿಕೊಳ್ಳಬಹುದಾದ 12.8 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, ಡಿಜಿಟಲ್ ಡ್ರೈವರ್ ಡಿಸ್ ಪ್ಲೇ, ಒನ್ ಟಚ್ ಎಲೆಕ್ಟ್ರಿಕ್ ಕಂಟ್ರೋಲ್ ಟೈಲ್ ಗೇಟ್, 8 ಸ್ಪೀಕರ್ಸ್ ಆಡಿಯೋ ಸಿಸ್ಟಂ, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಆಸನಗಳು, ವಾಯ್ಸ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ಸ್, ಪಿಎಂ 2.5 ಏರ್ ಫಿಲ್ಟರ್ ಸೇರಿದಂತೆ ಪನೋರಮಿಕ್ ಸನ್ ರೂಫ್ ಮತ್ತು ವೈರ್ ಲೈಸ್ ಸ್ಮಾರ್ಟ್ ಫೋನ್ ಚಾರ್ಜಿಂಗ್ ಸೌಲಭ್ಯಗಳಿವೆ.

ಹೊಸ ಕಾರಿನ ಅರಾಮದಾಯಕ ಪ್ರಯಾಣಕ್ಕಾಗಿ ಉತ್ತಮ ಉದ್ದಳತೆ ನೀಡಲಾಗಿದ್ದು, ಇದು 4,455 ಎಂಎಂ ಉದ್ದ, 1,875 ಎಂಎಂ ಅಗಲ, 1,615 ಎತ್ತರ, 2,720 ಎಂಎಂ ವ್ಹೀಲ್ ಬೆಸ್, 175 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇದರೊಂದಿಗೆ ಹೊಸ ಕಾರಿನಲ್ಲಿ 440 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಹೊಂದಿದ್ದು, ಇದು ಒಟ್ಟು 1,750 ಕೆ.ಜಿ ತೂಕ ಪಡೆದುಕೊಂಡಿದೆ.

ಇದನ್ನೂ ಓದಿ: ಹೀಗಿರಲಿದೆ ಹೊಸ ಟೊಯೊಟಾ ಇನೋವಾ ಹೈಕ್ರಾಸ್ ಎಂಪಿವಿ!

BYD Atto 3 Electric SUV

ಸುರಕ್ಷಾ ಸೌಲಭ್ಯಗಳು

ಬಿವೈಡಿ ಕಂಪನಿಯು ಹೊಸ ಅಟ್ಟೊ 3 ಕಾರಿನಲ್ಲಿ ಸುರುಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಕಾರಿನಲ್ಲಿ ಹಲವಾರು ಫೀಚರ್ಸ್ ಹೊಂದಿರುವ ಎಡಿಎಎಸ್( ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯ ಸೇರಿದಂತೆ 6 ಏರ್ ಬ್ಯಾಗ್ ಗಳು, 360 ಡಿಗ್ರಿ ಕ್ಯಾಮೆರಾ, ಇಎಸ್ಪಿ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಲೇನ್ ಡಿಪಾರ್ಚರ್ ವಾರ್ನಿಂಗ್ ಮತ್ತು ಲೇನ್ ಕೀಪಿಂಗ್ ಅಸಿಸ್ಟ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

Published On - 1:02 pm, Wed, 16 November 22

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ