BYD eMax 7: ಭರ್ಜರಿ ಮೈಲೇಜ್ ನೀಡುವ ಬಿವೈಡಿ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ

BYD eMax 7: ಬಿವೈಡಿ ಇಂಡಿಯಾ ಕಂಪನಿಯು ತನ್ನ ಹೊಸ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವು ಸುಧಾರಿತ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

BYD eMax 7: ಭರ್ಜರಿ ಮೈಲೇಜ್ ನೀಡುವ ಬಿವೈಡಿ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ
ಬಿವೈಡಿ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ
Follow us
Praveen Sannamani
|

Updated on:Oct 08, 2024 | 10:33 PM

ಬಿವೈಡಿ ಇಂಡಿಯಾ ಕಂಪನಿ ತನ್ನ ಬಹುನೀರಿಕ್ಷಿತ ಹೊಸ ಇಮ್ಯಾಕ್ಸ್ 7 ( eMax 7) ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಇವಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 26.90 ಲಕ್ಷದಿಂದ ರೂ. 29.9 ಲಕ್ಷ ಬೆಲೆ ಹೊಂದಿದ್ದು, ಇದು ಈ ಹಿಂದಿನ ಇ6 ಮಾದರಿಗಿಂತಲೂ ಹೆಚ್ಚು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿದೆ.

ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ ಮಾದರಿಯನ್ನು ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 55.4kWh ಬ್ಯಾಟರಿ ಪ್ಯಾಕ್ ಮತ್ತು 71.8kWh ಬ್ಯಾಟರಿ ಪ್ಯಾಕ್ ಆಯ್ಕೆ ಮಾಡಬಹುದಾಗಿದ್ದು, ಇದರಲ್ಲಿ ಆರಂಭಿಕ ಮಾದರಿಯು ಪ್ರತಿ ಚಾರ್ಜ್ ಗೆ 420 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಟಾಪ್ ಎಂಡ್ ಮಾದರಿಯು 530 ಕಿ.ಮೀ ಮೈಲೇಜ್ ನೀಡುತ್ತದೆ.

BYD eMax 7 (3)

ಹೊಸ ಕಾರಿನಲ್ಲಿ ಈ ಬಾರಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯಗಳನ್ನು ನೀಡಿರುವ ಬಿವೈಡಿ ಕಂಪನಿಯು ಎಂಪಿವಿ ಖರೀದಿದಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವ ನೀರಿಕ್ಷೆಯಲ್ಲಿದ್ದು, ಐಷಾರಾಮಿ ಕಾರುಗಳಲ್ಲಿರುವ ಹಲವು ಫೀಚರ್ಸ್ ಸಹ ನೀಡುತ್ತಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿವೆ 12.8-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್, ಪವರ್ಡ್ ಮತ್ತು ವೆಂಟಿಲೆಟಡ್ ಸೀಟುಗಳೊಂದಿಗೆ ಡ್ಯುಯಲ್ ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್‌ಗಳು, ಹೊಸ ಸ್ವಿಚ್‌ಗಿಯರ್ ಗಳು ಮತ್ತು ಡ್ರೈವ್ ಸೆಲೆಕ್ಟರ್ ಲಿವರ್ ನೀಡಿದೆ.

ಹಾಗೆಯೇ ಪ್ರೀಮಿಯಂ ಸೌಲಭ್ಯಗಳನ್ನು ಇಷ್ಟಪಡುವ ಗ್ರಾಹಕರಿಗಾಗಿ ಪನೊರಮಿಕ್ ಗ್ಲಾಸ್ ಸನ್ ರೂಫ್ ಸೇರಿದಂತೆ ಫ್ರೇಮ್‌ಲೆಸ್ ಫ್ರಂಟ್ ವೈಪರ್ಸ್ ಮತ್ತು ರೂಫ್ ರೈಲ್‌ಗಳನ್ನು ನೀಡಲಾಗಿದ್ದು, ಕ್ವಾರ್ಟ್ಜ್ ಬ್ಲೂ, ಹಾರ್ಬರ್ ಗ್ರೇ, ಕ್ರಿಸ್ಟಲ್ ವೈಟ್ ಮತ್ತು ಕಾಸ್ಮೊಸ್ ಬ್ಲ್ಯಾಕ್ ಎನ್ನುವ ನಾಲ್ಕು ಬಣ್ಣಗಳ ಆಯ್ಕೆ ಹೊಂದಿದೆ.

BYD eMax 7 (2)

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸಹ ನೀಡಲಾಗಿದ್ದು, ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್ ಗಳು, 360 ಡಿಗ್ರಿ ಕ್ಯಾಮೆರಾ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ಸ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ. ಹಾಗೆಯೇ ಹೊಸ ಕಾರು ಖರೀದಿಯ ಮೇಲೆ 8 ವರ್ಷಗಳು ಅಥವಾ 1.60 ಲಕ್ಷ ಕಿ.ಮೀ ಗಳ ಬ್ಯಾಟರಿ ವಾರಂಟಿ ಜೊತೆಗೆ ಎಲೆಕ್ಟ್ರಿಕ್ ಮೋಟಾರ್ ಮೇಲೆ 8 ವರ್ಷ ಅಥವಾ 1.50 ಲಕ್ಷ ಕಿ.ಮೀ ಮೇಲೆ ವಾರಂಟಿ ನೀಡುತ್ತಿದೆ.

Published On - 10:30 pm, Tue, 8 October 24

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ