ದುಬಾರಿ ಬೆಲೆ ನಡುವೆಯೂ ಭರ್ಜರಿ ಬೇಡಿಕೆ ಪಡೆದುಕೊಂಡ ಬಿವೈಡಿ ಸೀಲ್ ಇವಿ

ಸಿಟ್ರನ್ ಇಂಡಿಯಾ ಕಂಪನಿಯು ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸೀಲ್ ಇವಿ ಸೆಡಾನ್ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ದುಬಾರಿ ಬೆಲೆ ನಡುವೆಯೂ ಭರ್ಜರಿ ಬೇಡಿಕೆ ಪಡೆದುಕೊಂಡ ಬಿವೈಡಿ ಸೀಲ್ ಇವಿ
ಬಿವೈಡಿ ಸೀಲ್ ಇವಿ
Follow us
Praveen Sannamani
|

Updated on:May 21, 2024 | 9:04 PM

ಮಧ್ಯಮ ಕ್ರಮಾಂಕದ ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ (Electric Cars) ಮೂಲಕ ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಬಿವೈಡಿ ಕಂಪನಿಯು ಸೀಲ್ ಇವಿ ಸೆಡಾನ್ ಮಾರಾಟದಲ್ಲೂ ಹೊಸ ಮೈಲಿಗಲ್ಲು ಸಾಧಿಸಿದೆ. ದುಬಾರಿ ಬೆಲೆ ನಡುವೆಯೂ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ ಎರಡು ತಿಂಗಳ ಅವಧಿಯಲ್ಲಿ ಬರೋಬ್ಬರಿ 1 ಸಾವಿರ ಯುನಿಟ್ ಗಳಿಗೆ ಬುಕಿಂಗ್ ದಾಖಲಾಗಿದೆ.

ಭಾರತದಲ್ಲಿ ಸದ್ಯ ಇ6, ಅಟ್ಟೊ 3 ಮತ್ತು ಸೀಲ್ ಎಲೆಕ್ಟ್ರಿಕ್ ಕಾರುಗಳ ಮಾರಾಟ ಮಾಡುತ್ತಿರುವ ಬಿವೈಡಿ ಕಂಪನಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಸೀಲ್ ಇವಿ ಕಾರು ಡೈನಾಮಿಕ್, ಪ್ರೀಮಿಯಂ ಮತ್ತು ಪರ್ಫಾಮೆನ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 41 ಲಕ್ಷದಿಂದ ರೂ. 53 ಲಕ್ಷ ಬೆಲೆ ಹೊಂದಿದ್ದು, ರಿಯರ್ ವ್ಹೀಲ್ ಡ್ರೈವ್ ಮತ್ತು ಆಲ್ ವ್ಹೀಲ್ ಡ್ರೈವ್ ಆಯ್ಕೆಗಳನ್ನು ಹೊಂದಿದೆ.

ಹೊಸ ಸೀಲ್ ಇವಿ ಕಾರಿನಲ್ಲಿ 61.44 ಕೆವಿಹೆಚ್ ಮತ್ತು 82.56 ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಾಗಿದ್ದು, ಪ್ರತಿ ಚಾರ್ಜ್ ಗೆ ಇದು 510 ಕಿ.ಮೀ ಮತ್ತು 650 ಕಿ.ಮೀ ಮೈಲೇಜ್ ನೀಡುತ್ತದೆ. ಈ ಮೂಲಕ ಇದು ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯುತ್ತಿದ್ದು, ಟಾಪ್ ಎಂಡ್ ಮಾದರಿಯು 530 ಹಾರ್ಸ್ ಪವರ್ ಉತ್ಪಾದಿಸಬಲ್ಲದು. ಇದರೊಂದಿಗೆ ಹೊಸ ಸೀಲ್ ಕಾರು 150ಕೆವಿ ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಹೊಂದಿದ್ದು, ಕೇವಲ 37 ನಿಮಿಷಗಳಲ್ಲಿ ಶೇ. 10 ರಿಂದ ಶೇ. 80ರಷ್ಟು ಚಾರ್ಜ್ ಆಗಬಲ್ಲದು.

ಇದನ್ನೂ ಓದಿ: ಭಾರತದಲ್ಲಿ ಮಾರುತಿ ಸುಜುಕಿ ಮೊದಲ ಇವಿ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಹೊಸ ಸೀಲ್ ಕಾರಿನಲ್ಲಿ ಹಲವಾರು ಐಷಾರಾಮಿ ಸೌಲಭ್ಯಗಳನ್ನು ನೀಡಲಾಗಿದ್ದು, ಇದು 4,800 ಎಂಎಂ ಉದ್ದಳತೆಯೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯವನ್ನು ಹೊಂದಿದೆ. ಕೂಪೆ ಸ್ಟೈಲ್ ಹೊಂದಿರುವ ಹೊಸ ಕಾರಿನಲ್ಲಿ ಆಲ್ ಎಲ್ಇಡಿ ಲೈಟಿಂಗ್ಸ್, ಗ್ಲಾಸ್ ರೂಫ್, 19 ಇಂಚಿನ ಅಲಾಯ್ ವ್ಹೀಲ್ಸ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ. ಒಳಭಾಗದಲ್ಲಿ 15.6 ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ, 10.25 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಹೆಡ್ಸ್ ಅಪ್ ಡಿಸ್ ಪ್ಲೇ ಸೌಲಭ್ಯಗಳಿವೆ.

ಇದರೊಂದಿಗೆ ಹೊಸ ಇವಿ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಡಿಎಎಸ್ ಸೇರಿದಂತೆ 10 ಏರ್ ಬ್ಯಾಗ್ ಗಳನ್ನು ನೀಡಲಾಗಿದೆ. ಈ ಮೂಲಕ ಇದು ಗ್ಲೋಬಲ್ ಕ್ರ್ಯಾಶ್ ಟೆಸ್ಟ್ ನಲ್ಲಿ ಈಗಾಗಲೇ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಹಲವಾರು ಎಂಟ್ರಿ ಲೆವಲ್ ಐಷಾರಾಮಿ ಕಾರುಗಳಿಗೆ ಇದು ಉತ್ತಮ ಪೈಪೋಟಿ ನೀಡುತ್ತಿದೆ.

Published On - 8:57 pm, Tue, 21 May 24

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ