700 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೀಲ್ ಇವಿ ಬಿಡುಗಡೆಗೆ ಸಿದ್ದವಾದ ಬಿವೈಡಿ ಇಂಡಿಯಾ
ಬಿವೈಡಿ ಕಂಪನಿಯು ಭಾರತದಲ್ಲಿ ಶೀಘ್ರದಲ್ಲಿಯೇ ಮತ್ತೆರಡು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಸೀಲ್ ಎಲೆಕ್ಟ್ರಿಕ್ ಸೆಡಾನ್ ಮೂಲಕ ಐಷಾರಾಮಿ ಕಾರು ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪ್ರೀಮಿಯಂ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಬಿವೈಡಿ (BYD) ತನ್ನ ಹೊಸ ಸೀಲ್ ಎಲೆಕ್ಟ್ರಿಕ್ ಸೆಡಾನ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಭಾರತದಲ್ಲಿ ಸದ್ಯ ಇ6 ಎಲೆಕ್ಟ್ರಿಕ್ ಎಂಪಿವಿ ಮತ್ತು ಅಟ್ಟೊ 3 ಎಲೆಕ್ಟ್ರಿಕ್ ಎಸ್ ಯುವಿ ಮಾರಾಟ ಮಾಡುತ್ತಿರುವ ಬಿವೈಡಿ ಕಂಪನಿಯು ಇದೀಗ ಸೀಲ್ ಇವಿ ಸೆಡಾನ್ ಬಿಡುಗಡೆಯ ಸಿದ್ದತೆಯಲ್ಲಿದ್ದು, ಇದು ಹಲವಾರು ಮಧ್ಯಮ ಕ್ರಮಾಂಕದ ಐಷಾರಾಮಿ ಕಾರುಗಳ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.
ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್
ಹೊಸ ಸೀಲ್ ಇವಿ ಕಾರಿನಲ್ಲಿ ಬಿವೈಡಿ ಕಂಪನಿಯು 61.4kWh ಮತ್ತು 82.5kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಇದರಲ್ಲಿ 61.4kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ಪ್ರತಿ ಚಾರ್ಜ್ ಗೆ 500 ಕಿ.ಮೀ ಮೈಲೇಜ್ ನೀಡಲಿದ್ದರೆ 82.5kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ಗರಿಷ್ಠ 700 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ ಎನ್ನಲಾಗಿದೆ.
ಇದನ್ನೂ ಓದಿ: ಮೊದಲ ಬಾರಿ ಹೊಸ ಕಾರು ಖರೀದಿಸುತ್ತಿದ್ದೀರಾ? ಈ ವಿಚಾರಗಳು ತಪ್ಪದೇ ತಿಳಿದಿರಲಿ..
ಇದರೊಂದಿಗೆ ಹೊಸ ಇವಿ ಕಾರು ಗರಿಷ್ಠ 150kW ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕೂ ಸರ್ಪೊಟ್ ಮಾಡಲಿದ್ದು, ಇದರಲ್ಲಿ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಆಯ್ಕೆಗಳನ್ನು ಹೊಂದಿದೆ. ಇದರೊಂದಿಗೆ ಇದು ಹ್ಯುಂಡೈ ಐಯಾನಿಕ್ 5 ಮತ್ತು ಕಿಯಾ ಇವಿ6 ಮಾದರಿಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಉತ್ಪಾದಿಸಲಿದ್ದು, ಇದು 530 ಹಾರ್ಸ್ ಪವರ್ ಉತ್ಪಾದಿಸುತ್ತದೆ.
ಹಾಗೆಯೇ ಹೊಸ ಇವಿ ಕಾರು 4,800 ಎಂಎಂ ಉದ್ದಳತೆ ಮತ್ತು 1,460 ಎಂಎಂ ಎತ್ತರದೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿದೆ. ಇದರಲ್ಲಿ ಪ್ರೀಮಿಯಂ ಪ್ರಯಾಣಕ್ಕೆ ಅನುಕೂಲಕವಾಗುವ ಹಲವಾರು ಅಂಶಗಳಿದ್ದು, 15.6 ಇಂಚಿನ ಇನ್ಪೋಟೈನ್ಮೆಂಟ್ ಡಿಸ್ ಪ್ಲೇ ಯೊಂದಿಗೆ 10.25 ಇಂಚಿನ ಡಿಜಿಟಲ್ ಇನ್ಸ್ಟುಮೆಂಟ್ ಕ್ಲಸ್ಟರ್, ಹೆಡ್ಅಪ್ ಡಿಸ್ಪ್ಲೇ, ಫ್ಲೋಟರಿಂಗ್ ಟಚ್ ಸ್ಕ್ರೀನ್ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.
ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕಾಗಿ ಕೇಂದ್ರದಿಂದ ಮಹತ್ವದ ಯೋಜನೆ
ಹೊಸ ಸೀಲ್ ಕಾರು ಮಾದರಿಯು ಅಟ್ಟೊ 3 ಮಾದರಿಯಲ್ಲಿರುವ ಕೆಲವು ಫೀಚರ್ಸ್ ಗಳನ್ನು ಎರವಲು ಪಡೆದುಕೊಂಡಿದ್ದು, ಇದು ಕೂಪೆ ಮಾದರಿಯ ಹೊಸ ವೈಶಿಷ್ಟ್ಯತೆಯೊಂದಿಗೆ ಫುಲ್ ಎಲ್ಇಡಿ ಲೈಟಿಂಗ್ಸ್ ಸೇರಿದಂತೆ ಹಲವಾರು ಸ್ಪೋರ್ಟಿ ಸೌಲಭ್ಯಗಳಿವೆ. ಈ ಮೂಲಕ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 45 ಲಕ್ಷದಿಂದ ರೂ. 50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಈ ವರ್ಷದ ಮಾರ್ಚ್ ವೇಳೆಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
Published On - 10:01 pm, Tue, 13 February 24




