Car Seat Belt: ನ.1ರಿಂದ ಈ ನಗರದಲ್ಲಿ ಸಂಚರಿಸುವ ಎಲ್ಲಾ ಕಾರುಗಳಲ್ಲೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ದೇಶಾದ್ಯಂತ ದಿನಂಪ್ರತಿ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ವಾಹನಗಳ ಸಂಖ್ಯೆ ಹೆಚ್ಚಳದ ಜೊತೆಗೆ ಅಪಘಾತಗಳ ಪ್ರಮಾಣ ಕೂಡಾ ಏರಿಕೆಯಾಗುತ್ತಿದೆ. ಹೀಗಾಗಿ ಸಂಚಾರಿ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳೊಂದಿಗೆ ರಸ್ತೆ ನಿಯಮಗಳ ಕಡ್ಡಾಯ ಪಾಲನೆಗಾಗಿ ಕಠಿಣ ಕ್ರಮಗಳನ್ನು ಜರಗಿಸಲಾಗುತ್ತಿದೆ.

Car Seat Belt: ನ.1ರಿಂದ ಈ ನಗರದಲ್ಲಿ ಸಂಚರಿಸುವ ಎಲ್ಲಾ ಕಾರುಗಳಲ್ಲೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ
ಎಲ್ಲಾ ಕಾರುಗಳಲ್ಲೂ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ
Follow us
Praveen Sannamani
|

Updated on:Oct 31, 2022 | 3:04 PM

ಹೊಸ ವಾಹನಗಳ ಹೆಚ್ಚಳದೊಂದಿಗೆ ಭಾರತದಲ್ಲಿ ಅಪಘಾತಗಳ(Accident) ಪ್ರಮಾಣ ಕೂಡಾ ನಿರಂತವಾಗಿ ಹೆಚ್ಚಳವಾಗುತ್ತಿದ್ದು, ಅಪಘಾತಗಳಲ್ಲಿ ಸಾವಿನ ಸಂಖ್ಯೆ ಕೂಡಾ ಕಳೆದ ಕೆಲ ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಹೀಗಾಗಿ ಕೇಂದ್ರ ಸಾರಿಗೆ ಇಲಾಖೆಯು ಅಪಘಾತಗಳಲ್ಲಿ ಸಾವಿನ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಕಡ್ಡಾಯ ಸಂಚಾರಿ ನಿಯಮ(Traffic Rules) ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದೆ. ಇತ್ತೀಚೆಗೆ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರು ಅಪಘಾತದಲ್ಲಿ ನಿಧನರಾದ ಬಳಿಕ ಕಾರುಗಳಲ್ಲಿ ಎಲ್ಲಾ ಸಹಪ್ರಯಾಣಿಕರಿಗೂ ಸೀಟ್ ಬೆಲ್ಟ್(Seat Belt) ಕಡ್ಡಾಯಕ್ಕೆ ಒತ್ತಡ ಹೆಚ್ಚುತ್ತಿದ್ದು, ಮುಂಬೈನಲ್ಲೂ ಇದೀಗ ಹೊಸ ನಿಯಮವನ್ನು ಕಡ್ಡಾಯ ಜಾರಿಗೆ ತರಲಾಗುತ್ತಿದೆ.

ಕಾರು ಅಪಘಾತಗಳ ಸಂದರ್ಭದಲ್ಲಿ ಸಹಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುವ ಉದ್ದೇಶದಿಂದ ಮುಂಬೈ ಪೊಲೀಸರು ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಾರುಗಳಲ್ಲಿ ಎಲ್ಲಾ ಸಹಪ್ರಯಾಣಿಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಬಳಸುವಂತೆ ಆದೇಶ ಹೊರಡಿಸಿದ್ದಾರೆ. ಹೊಸ ಆದೇಶದಲ್ಲಿ ಎಲ್ಲಾ ಮಾದರಿಯ ಪ್ರಯಾಣಿಕರ ಕಾರುಗಳಲ್ಲೂ ಸೀಟ್ ಬೆಲ್ಟ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ಕಾರು ಮಾಲೀಕರು ಭರ್ಜರಿ ದಂಡ ಪಾವತಿ ಮಾಡಬೇಕಾಗುತ್ತದೆ.

ನಿಯಮ ಉಲ್ಲಂಘನೆ ಮಾಡಿದ್ರೆ ರೂ. 1 ಸಾವಿರ ದಂಡ

ಮುಂಬೈ ಪೊಲೀಸರು ಎಲ್ಲಾ ಮಾದರಿಯ ಪ್ರಯಾಣಿಕರ ಕಾರುಗಳಲ್ಲಿ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯದೊಂದಿಗೆ ನಿಯಮ ಉಲ್ಲಂಘನೆ ಮಾಡುವವರಿಗೆ ರೂ. 1 ಸಾವಿರ ದಂಡ ನಿಗದಿಪಡಿಸಿದ್ದು, ಮೋಟಾರ್ ವೆಹಿಕಲ್ ನಿಯಮದ ಸೆಕ್ಟನ್ 194(ಬಿ)(1) ನಿಯಮದಡಿಯಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಎಲ್ಲಾ ಕಾರುಗಳಲ್ಲೂ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ಎಲ್ಲಾ ಕಾರುಗಳಲ್ಲೂ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ಇದನ್ನೂ ಓದಿ: ಭಾರತದಲ್ಲಿ ಸದ್ಯ ಖರೀದಿಸಬಹುದಾದ ಅತಿಹೆಚ್ಚು ಸುರಕ್ಷಿತ ಮಧ್ಯಮ ಕ್ರಮಾಂಕದ ಕಾರುಗಳಿವು!

ಸೀಟ್ ಬೆಲ್ಟ್ ತಪ್ಪದೇ ಅಳವಡಿಸಿಕೊಳ್ಳಿ

ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಕಾರುಗಳಲ್ಲಿ ಚಾಲಕನ ಜೊತೆ ಎಲ್ಲಾ ಸಹ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಸೌಲಭ್ಯ ಹೊಂದಿದ್ದರೂ ಕೆಲವು ಹಳೆಯ ಕಾರು ಮಾದರಿಗಳಲ್ಲಿ ಸೀಟ್ ಬೆಲ್ಟ್ ಸೌಲಭ್ಯವು ಚಾಲಕನಿಗೆ ಮಾತ್ರ ಸೀಮಿತವಾಗಿವೆ. ಹೀಗಾಗಿ ಕೂಡಲೇ ಸೀಟ್ ಬೆಲ್ಟ್ ಹೊಂದಿರದ ಕಾರುಗಳಲ್ಲಿ ಕಡ್ಡಾಯವಾಗಿ ಹೊಸ ಸುರಕ್ಷಾ ಸೌಲಭ್ಯವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಹಾಗೆಯೇ ಹೊಸ ಕಾರುಗಳಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಖಾತ್ರಿಪಡಿಸಲು ಅಲಾರಾಂ ಸೌಲಭ್ಯವನ್ನ ಕಡ್ಡಾಯವಾಗಿ ಹೊಂದಿರಬೇಕಿದೆ. ಅಲಾರಾಂ ಸೌಲಭ್ಯವಿದ್ದಲ್ಲಿ ಸೀಟ್ ಬೆಲ್ಟ್ ಹಾಕದಿದ್ದಲ್ಲಿ ಚಾಲಕನಿಗೆ ಮತ್ತು ಪ್ರಯಾಣಿಕರಿಗೆ ಅದು ಎಚ್ಚರಿಸಲಿದ್ದು, ಈ ಮೂಲಕ ಅದು ಕಾರು ಪ್ರಯಾಣಿಕರ ಪ್ರಾಣ ರಕ್ಷಣೆಗೆ ನೇರವಾಗುತ್ತಿದೆ.

ಇದನ್ನೂ ಓದಿ: ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಈ ಟಾಪ್ 5 ಕಾರುಗಳ ವಿಶೇಷತೆಗಳೇನು? 

ಎಲ್ಲಾ ಕಾರುಗಳಲ್ಲೂ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ಎಲ್ಲಾ ಕಾರುಗಳಲ್ಲೂ ಸಹಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ಏರ್ ಬ್ಯಾಗ್ ಕಾರ್ಯನಿರ್ವಹಣೆಗೆ ಸೀಟ್ ಬೆಲ್ಟ್ ಅತಿಮುಖ್ಯ

ಕಡ್ಡಾಯ ಸೀಟ್ ಬೆಲ್ಟ್ ಬಳಕೆಯು ಆಧುನಿಕ ಕಾರು ಮಾದರಿಗಳಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸಲಿದ್ದು, ಅಪಘಾತಗಳ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸಿದ್ದರೆ ಮಾತ್ರ ಏರ್ ಬ್ಯಾಗ್ ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡುತ್ತದೆ. ಸಂಪೂರ್ಣವಾಗಿ ಸೆನ್ಸಾರ್ ಮೇಲೆ ಕಾರ್ಯನಿರ್ವಹಿಸುವ ಏರ್ ಬ್ಯಾಗ್ ಸೌಲಭ್ಯವು ಸೀಟ್ ಬೆಲ್ಟ್ ತಂತ್ರಜ್ಞಾನದೊಂದಿಗೆ ಸಂಯೋಜನೆ ಹೊಂದಿದ್ದು, ಇವು ಅಪಘಾತ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಸ್ಪೋಟಗೊಳ್ಳುವ ಮೂಲಕ ಚಾಲಕ ಮತ್ತು ಸಹಪ್ರಯಾಣಿಕರ ತಲೆ ಮತ್ತು ಎದೆ ಭಾಗಕ್ಕೆ ಆಗಬಹುದಾದ ಹಾನಿ ತಪ್ಪಿಸಿ ಪ್ರಾಣಾಪಾಯದಿಂದ ಪಾರು ಮಾಡುತ್ತವೆ.

Published On - 2:59 pm, Mon, 31 October 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್