AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Most Fuel-Efficient Cars: ಭರ್ಜರಿ ಮೈಲೇಜ್ ನೀಡುವ ರೂ. 10 ಲಕ್ಷ ಬಜೆಟ್ ಒಳಗಿನ ಕಾರುಗಳಿವು!

ದುಬಾರಿ ಇಂಧನ ಮತ್ತು ಹೆಚ್ಚುತ್ತಿರುವ ವಾಹನ ನಿರ್ವಹಣಾ ವೆಚ್ಚದ ಪರಿಣಾಮ ಗ್ರಾಹಕರು ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರುವ ಕಾರುಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

Most Fuel-Efficient Cars: ಭರ್ಜರಿ ಮೈಲೇಜ್ ನೀಡುವ ರೂ. 10 ಲಕ್ಷ ಬಜೆಟ್ ಒಳಗಿನ ಕಾರುಗಳಿವು!
ಭರ್ಜರಿ ಮೈಲೇಜ್ ನೀಡುವ ರೂ. 10 ಲಕ್ಷ ಬಜೆಟ್ ಬೆಲೆಯ ಕಾರುಗಳಿವು!
Praveen Sannamani
|

Updated on: Sep 19, 2023 | 6:53 PM

Share

ಹೊಸ ಕಾರುಗಳನ್ನು(New Cars) ಖರೀದಿಸುವಾಗ ಗ್ರಾಹಕರು ತಮ್ಮ ಚಾಲನಾ ಆದ್ಯತೆಗೆ ಅನುಗುಣವಾಗಿ ವಿವಿಧ ಮಾದರಿಗಳನ್ನು ಆಯ್ಕೆ ಮಾಡಬಹುದಾಗಿದ್ದು, ಮಧ್ಯಮ ವರ್ಗದ ಗ್ರಾಹಕರು ಹೆಚ್ಚಾಗಿ ಬಜೆಟ್ ಬೆಲೆಯಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಕಾರುಗಳನ್ನು ಖರೀದಿಸಲು ಯೋಜನೆಯಲ್ಲಿರುತ್ತಾರೆ. ಹಾಗಾದ್ರೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಅತ್ಯುತ್ತಮ ಬಜೆಟ್ ಬೆಲೆಯ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಬೆಲೆಯಲ್ಲಿ ಕಳೆದ ತಿಂಗಳಿನಿಂದ ಸಾಕಷ್ಟು ಏರಿಕೆಯಾಗಿದ್ದು, ಚಾಲನಾ ಸ್ನೇಹಿ ಫೀಚರ್ಸ್ ಮತ್ತು ಇಂಧನ ದಕ್ಷತೆ ಹೊಂದಿರುವ ಉತ್ತಮ ಕಾರುಗಳ ಖರೀದಿಗೆ ರೂ. 10 ಲಕ್ಷ ಬಜೆಟ್ ಅವಶ್ಯವಾಗಿದೆ. ರೂ. 10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲೂ ಹಲವಾರು ಕಾರುಗಳು ಖರೀದಿಗೆ ಲಭ್ಯವಿದ್ದರೂ ಕಡಿಮೆ ಬೆಲೆ ಕಾರಣಕ್ಕೆ ಕೆಲವು ಅವಶ್ಯಕ ಫೀಚರ್ಸ್ ಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ರೂ. 10 ಲಕ್ಷ ಬಜೆಟ್ ನಲ್ಲಿ ಉತ್ತಮ ಫೀಚರ್ಸ್ ಹೊಂದಿರುವ ಕಾರುಗಳನ್ನು ಖರೀದಿಸಬಹುದಾಗಿದ್ದು, ಇವು ಸುರಕ್ಷತೆಯಲ್ಲೂ ಗಮನಾರ್ಹವಾಗಿ ಗುರುತಿಸಿಕೊಳ್ಳುತ್ತವೆ.

ಮಾರುತಿ ಸುಜುಕಿ ವ್ಯಾಗನ್ಆರ್

ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ಇಂಧನ ದಕ್ಷತೆ ಹೊಂದಿರುವ ಕಾರುಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಕಾರು ಅಗ್ರಸ್ಥಾನದಲ್ಲಿದೆ. ಪೆಟ್ರೋಲ್ ಮತ್ತು ಸಿಎನ್ ಜಿ ಎರಡೂ ಆಯ್ಕೆಗಳನ್ನು ಹೊಂದಿರುವ ವ್ಯಾಗನ್ಆರ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 5.54 ಲಕ್ಷದಿಂದ ರೂ. 7.42 ಲಕ್ಷ ಬೆಲೆ ಹೊಂದಿದೆ. ಇದರಲ್ಲಿರುವ 1.2 ಪೆಟ್ರೋಲ್ ಎಂಜಿನ್ ಮಾದರಿಯು ಪ್ರತಿ ಲೀಟರ್ ಗೆ 23.56 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಸಿಎನ್ ಜಿ ಮಾದರಿಯು 34.05 ಕಿ.ಮೀ ಮೈಲೇಜ್ ನೀಡುತ್ತದೆ.

ಹ್ಯುಂಡೈ ಎಕ್ಸ್ ಟರ್

ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆ ಹೊಂದಿರುವ ಹ್ಯುಂಡೈ ಎಕ್ಸ್ ಟರ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಹೊಸ ಅಲೆ ಸೃಷ್ಠಿಸಿದೆ. ಮೈಕ್ರೊ ಎಸ್ ಯುವಿ ಮಾದರಿಯಾಗಿರುವ ಎಕ್ಸ್ ಟರ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ. 10.10 ಲಕ್ಷ ಬೆಲೆ ಹೊಂದಿದ್ದು, 1.2 ಲೀಟರ್ ಪೆಟ್ರೋಲ್ ಮತ್ತು ಸಿಎನ್ ಜಿ ಆಯ್ಕೆಗಳಿವೆ. ಇದರಲ್ಲಿ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ ಗರಿಷ್ಠ 19.40 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಸಿಎನ್ ಜಿ ಮಾದರಿಯು ಗರಿಷ್ಠ 27.10 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರ ಸೂಪರ್ ಸೇಫ್ ಗಾರ್ಡ್ ಐಷಾರಾಮಿ ಕಾರಿನ ವಿಶೇಷತೆಗಳೇನು ಗೊತ್ತಾ?

ಸಿಟ್ರನ್ ಸಿ3 ಮೈಕ್ರೊ ಎಸ್ ಯುವಿ

ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರುವ ಕಾರುಗಳಲ್ಲಿ ಸಿಟ್ರನ್ ಸಿ3 ಮೈಕ್ರೊ ಎಸ್ ಯುವಿ ಕೂಡಾ ಒಂದಾಗಿದೆ. ಹೊಸ ಸಿ3 ಕಾರು ಮಾದರಿಯಲ್ಲಿರುವ 1.2 ಲೀಟರ್ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್ ಗೆ 19.30 ಕಿ.ಮೀ ಮೈಲೇಜ್ ನೀಡುತ್ತದೆ. ಇದು ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 6.16 ಲಕ್ಷದಿಂದ ರೂ. 8.92 ಲಕ್ಷ ಬೆಲೆ ಹೊಂದಿದೆ. ಇದು ಭಾರತದಲ್ಲಿ ಸಿಟ್ರನ್ ಕಂಪನಿಯ ಬಿಡುಗಡೆ ಮಾಡಿದ ಮೊದಲ ಬಜೆಟ್ ಕಾರು ಮಾದರಿಯಾಗಿದ್ದು, ಇತ್ತೀಚೆಗೆ ಇದು ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗಿದೆ.

ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದರಲ್ಲಿ 1.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಇದು ನ್ಯಾಚುರಲಿ ಆಸ್ಪೆರೆಟೆಡ್ ಮತ್ತು ಟರ್ಬೊ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ಲೀಟರ್ ಗೆ ಗರಿಷ್ಠ 19.34 ಕಿ.ಮೀ ಮೈಲೇಜ್ ನೀಡುತ್ತದೆ. ನಿಸ್ಸಾನ್ ಮ್ಯಾಗ್ನೈಟ್ ಪ್ಲ್ಯಾಟ್ ಫಾರ್ಮ್ ಹಂಚಿಕೊಂಡಿರುವ ರೆನಾಲ್ಟ್ ಕೈಗರ್ ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 8.06 ಲಕ್ಷದಿಂದ ರೂ. 10 ಲಕ್ಷ ಬೆಲೆ ಹೊಂದಿವೆ.

ಇದನ್ನೂ ಓದಿ: ಆಕರ್ಷಕ ಬೆಲೆಗೆ 2023ರ ಟಾಟಾ ನೆಕ್ಸಾನ್ ಇವಿ ಬಿಡುಗಡೆ

ಮಾರುತಿ ಸುಜುಕಿ ಫ್ರಾಂಕ್ಸ್

ಅತ್ಯುತ್ತಮ ಫೀಚರ್ಸ್ ಗಳೊಂದಿಗೆ ಭರ್ಜರಿ ಮೈಲೇಜ್ ಮತ್ತು ಆಕರ್ಷಕ ಬೆಲೆ ಹೊಂದಿರುವ ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಕೂಡಾ ಪ್ರಮುಖ ಆವೃತ್ತಿಯಾಗಿದೆ. ಇದು 1.0 ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಜೊತೆಗೆ ಸಿಎನ್ ಜಿ ಆವೃತ್ತಿಯಲ್ಲೂ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್ ಮಾದರಿಗಳು ಪ್ರತಿ ಲೀಟರ್ ಗರಿಷ್ಠ 20.01 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಸಿಎನ್ ಜಿ ಮಾದರಿಯು ರೂ. 28.51 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಫ್ರಾಂಕ್ಸ್ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ.7.64 ಲಕ್ಷದಿಂದ ರೂ. 13.13 ಲಕ್ಷ ಬೆಲೆ ಹೊಂದಿದೆ. ಇದರಲ್ಲಿ ರೂ. 10 ಲಕ್ಷ ಬೆಜೆಟ್ ಬೆಲೆಯಲ್ಲಿ ಡೆಲ್ಟಾ ಪ್ಲಸ್ 1.2 ಲೀಟರ್ ಎಜಿಎಸ್ ಆವೃತ್ತಿ ಖರೀದಿಗೆ ಉತ್ತಮವಾಗಿದೆ ಎನ್ನಬಹುದು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?