Budget 2024: ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕಾಗಿ ಕೇಂದ್ರದಿಂದ ಮಹತ್ವದ ಯೋಜನೆ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರವು 2024ರ ಮಧ್ಯಂತರ ಬಜೆಟ್ ನಲ್ಲಿ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದು, ಇವಿ ವಾಹನಗಳ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಕ್ಕೆ ಹೆಚ್ಚಳದ ಗುರಿಹೊಂದಿದೆ.

Budget 2024: ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕಾಗಿ ಕೇಂದ್ರದಿಂದ ಮಹತ್ವದ ಯೋಜನೆ
ಎಲೆಕ್ಟ್ರಿಕ್ ವಾಹನಗಳು
Follow us
Praveen Sannamani
|

Updated on: Feb 01, 2024 | 8:43 PM

ಎಲೆಕ್ಟ್ರಿಕ್ ವಾಹನಗಳ (Electric Vehicles) ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರವು 2024ರ ಮಧ್ಯಂತರ ಬಜೆಟ್ ನಲ್ಲಿ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದು, ಇವಿ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳದ ಗುರಿಹೊಂದಿದೆ. ಈ ಹಿಂದೆ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಡಿ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರವು ಈ ಬಾರಿ ಫಾಸ್ಟ್ ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕಾಗಿ ವಿಶೇಷ ನೆರವು ಘೋಷಣೆ ಮಾಡಿದೆ.

ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಹೆಚ್ಚಳದಲ್ಲಿ ಈಗಾಗಲೇ ಹೊಸ ಮೈಲಿಗಲ್ಲು ಸಾಧಿಸಿರುವ ಕೇಂದ್ರ ಸರ್ಕಾರವು ಇದೀಗ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ಸಿದ್ದವಾಗಿದೆ. ಇದಕ್ಕಾಗಿ ಮಹತ್ವದ ಯೋಜನೆ ಸಿದ್ದಪಡಿಸಿರುವ ಕೇಂದ್ರ ಸರ್ಕಾರವು ಫಾಸ್ಟ ಚಾರ್ಜಿಂಗ್ ನಿಲ್ದಾಣಗಳ ಉದ್ಯಮ ಆರಂಭಿಸಲು ಹಣಕಾಸಿನ ನೆರವು ಘೋಷಿಸಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಬಯಸುವರಿಗೆ ಕೇಂದ್ರ ಸರ್ಕಾರದ ಹೊಸ ಯೋಜನೆಯಡಿ ಗರಿಷ್ಠ ಪ್ರಮಾಣದ ಸಬ್ಸಡಿ ಸಿಗಲಿದೆ.

ಇದನ್ನೂ ಓದಿ: ಅಚ್ಚರಿಯ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ

ಇವಿ ವಾಹನಗಳಿಗೆ ಸದ್ಯ ದೂರದ ಸ್ಥಳಗಳಿಗೆ ಪ್ರಯಾಣ ಬೆಳೆಸಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯಿದ್ದು, ಹೊಸ ಸಬ್ಸಡಿ ಯೋಜನೆಯು ಹೆಚ್ಚಿನ ಸಂಖ್ಯೆಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಆರಂಭಕ್ಕೆ ಸಹಕಾರಿಯಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಇವಿ ವಾಹನಗಳನ್ನು ಖರೀದಿಸಲು ಹೆಚ್ಚಿನ ಗ್ರಾಹಕರಿಗೆ ಆಸಕ್ತಿ ಇದ್ದರೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆಯಿಂದ ಹಿಂದೇಟು ಹಾಕುತ್ತಿದ್ದಾರೆ. ಅದರಲ್ಲೂ ದೂರದ ಪ್ರಯಾಣದ ಸಂದರ್ಭದಲ್ಲಿ ಚಾರ್ಜಿಂಗ್ ಸೌಲಭ್ಯ ಇಲ್ಲದಿರುವ ಬಗ್ಗೆ ಇವಿ ಮಾಲೀಕರು ಅಸಮಾಧಾನ ಹೊಂದಿದ್ದು, ಹೊಸ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಇವಿ ಬೇಡಿಕೆಯಲ್ಲಿ ಹೊಸ ಸಂಚಲನ ಮೂಡಿಸುವ ಭರವಸೆಗಳಿವೆ.

ಇದನ್ನೂ ಓದಿ: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿದ್ದು, ಕರ್ನಾಟಕದಲ್ಲೂ ಸಹ ಇವಿ ವಾಹನಗಳ ನೋಂದಣಿ ಪ್ರಮಾಣ ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಏರಿಕೆಯಾಗಿದೆ. ಇದೀಗ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕೆ ಮುಂದಾಗಿರುವ ಇವಿ ವಾಹನ ಖರೀದಿದಾರರಲ್ಲಿ ಹೊಸ ಭರವಸೆ ಮೂಡಿಸಿದೆ.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ