Citroen: ಹೊಸ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾದ ಸಿಟ್ರನ್ ಇಂಡಿಯಾ

ಹೊಸ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಫ್ರೆಂಚ್ ಕಾರು ಕಂಪನಿ ಸಿಟ್ರನ್ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ.

Follow us
|

Updated on:Mar 28, 2023 | 8:46 PM

ಭಾರತದಲ್ಲಿ ಸದ್ಯ ಸಿ3 ಮತ್ತು ಸಿ5 ಏರ್ ಕ್ರಾಸ್ ಕಾರು ಮಾರಾಟ ಮಾಡುತ್ತಿರುವ ಸಿಟ್ರನ್(Citroen) ಕಂಪನಿ ಮತ್ತೊಂದು ಹೊಸ ಎಸ್ ಯುವಿ ಬಿಡುಗಡೆ ಮಾಡುತ್ತಿದೆ. ಹೊಸ ಕಾರು(New Car) ಮಧ್ಯಮ ಕ್ರಮಾಂಕದ ಎಸ್ ಯುವಿ(SUV) ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿ ಎಸ್ ಯುವಿ ಕಾರುಗಳ ಬೇಡಿಕೆ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಇತ್ತೀಚೆಗೆ ಹಲವು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರು ಮಾದರಿಗಳು ಬಿಡುಗಡೆಯ ಸಿದ್ದತೆಯಲ್ಲಿದ್ದು, ಸಿಟ್ರನ್ ಇಂಡಿಯಾ ಕೂಡಾ ತನ್ನ ಬಹುನೀರಿಕ್ಷಿತ ಸಿ3 ಏರ್ ಕ್ರಾಸ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಭಾರತದಲ್ಲಿ ಸದ್ಯ ಸಿ3, ಇ ಸಿ3 ಎಲೆಕ್ಟ್ರಿಕ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳನ್ನ ಮಾರಾಟ ಮಾಡುತ್ತಿದ್ದು, ಇದೀಗ ಕಂಪನಿಯು ಹೊಸದಾಗಿ ಸಿ3 ಏರ್ ಕ್ರಾಸ್ ಕಾರು ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೊಸ ಕಾರು ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಹೊಸ ಸಿ3 ಏರ್ ಕ್ರಾಸ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಸಿ3 ಕಾರು ಮಾದರಿಯನ್ನೇ ಹೋಲುತ್ತದೆ. ಆದರೆ ಹೊಸ ಕಾರು ಮಾದರಿಯು ಹ್ಯುಂಡೈ ಕ್ರೆಟಾ ಮಾದರಿಯೆಂತೆ 4.3 ಮೀಟರ್ ಉದ್ದಳತೆಯೊಂದಿಗೆ ಉತ್ತಮ ಒಳಾಂಗಣ ಸೌಲಭ್ಯ ಹೊಂದಿದ್ದು, ಇದು ಪೆಟ್ರೋಲ್ ಮಾದರಿಯಲ್ಲಿ ಮಾತ್ರವಲ್ಲದೆ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಯಾಗಬಹುದಾಗಿದೆ. ಸದ್ಯಕ್ಕೆ ಹೊಸ ಕಾರಿನಲ್ಲಿ ಸಿ3 ಮಾದರಿಯಲ್ಲಿರುವಂತೆ 1.2 ಲೀಟರ್, 3 ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಬಹುದಾಗಿದ್ದು, ಅತ್ಯಾಧುನಿಕ ವಿನ್ಯಾಸ ಭಾಷೆಯು ಎಸ್‌ಯುವಿ ಪ್ರಿಯರನ್ನ ಸೆಳೆಯಲಿದೆ.

ಹೊಸ ಸಿ3 ಏರ್ ಕ್ರಾಸ್ ಎಸ್‌ಯುವಿಯಲ್ಲಿ ಸಿಟ್ರನ್ ಕಂಪನಿಯು ಹಲವಾರು ವಿನೂತನ ಫೀಚರ್ಸ್ ನೀಡಿದ್ದು, ಹೊಸ ಕಾರಿನ ಮುಂಭಾಗದಲ್ಲಿ ಸಿಗ್ನೇಚರ್ ಗ್ರಿಲ್, ವಿಭಜಿತ ಹೆಡ್‌ಲೈಟ್ ಗಳು, ಎಲ್ಇಡಿ ಡಿಆರ್ ಎಲ್ ಗಳನ್ನ ಹೊಂದಿದೆ. ಹಾಗೆಯೇ ಹೊಸ ಕಾರಿನ ಒಳಭಾಗದಲ್ಲಿ 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‌ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಳ್ಳಲಿದೆ.

ಇದರಲ್ಲಿ ಟಾಪ್ ಎಂಡ್ ಮಾದರಿಯು ಹೆಚ್ಚಿನ ಫೀಚರ್ಸ್ ಹೊಂದಿರಲಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ ಸೇರಿದಂತೆ ಹಲವು ಕಾರ್ ಟೆಕ್ ಕನೆಕ್ಟೆ ಸೌಲಭ್ಯಗಳನ್ನ ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Published On - 8:46 pm, Tue, 28 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ