Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗಮನಸೆಳೆದ ಸಿಟ್ರನ್ ಬಸಾಲ್ಟ್ ಕೂಪೆ ಎಸ್​ಯುವಿ

Citroen Basalt: ಸಿಟ್ರನ್ ಕಂಪನಿ ತನ್ನ ಹೊಸ ಬಸಾಲ್ಟ್ ಕೂಪೆ ಎಸ್ ಯುವಿ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸ ಕಾರು ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗಮನಸೆಳೆದ ಸಿಟ್ರನ್ ಬಸಾಲ್ಟ್ ಕೂಪೆ ಎಸ್​ಯುವಿ
ಸಿಟ್ರನ್ ಬಸಾಲ್ಟ್ ಕೂಪೆ ಎಸ್​ಯುವಿ
Follow us
Praveen Sannamani
|

Updated on: Oct 12, 2024 | 8:16 PM

ಸಿಟ್ರನ್ ಇಂಡಿಯಾ (Citroen India) ಕಂಪನಿಯು ಬಸಾಲ್ಟ್ (Basalt)  ಕೂಪೆ ಎಸ್ ಯುವಿ ಮೂಲಕ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಹೊಸ ನೀರಿಕ್ಷೆ ಮೂಡಿಸಿದ್ದು, ಇದೀಗ ಹೊಸ ಕಾರು ಭಾರತ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಗುಣಮಟ್ಟದ ಉತ್ಪಾದನೆಯೊಂದಿಗೆ ಸುಧಾರಿತ ಸುರಕ್ಷಾ ಫೀಚರ್ಸ್ ಗಳನ್ನು ಹೊಂದಿದ್ದು, 4 ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬಸಾಲ್ಟ್ ಕಾರು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ 32 ಅಂಕಗಳಲ್ಲಿ 26.19 ಅಂಕಗಳನ್ನು ಪಡೆದುಕೊಂಡರೆ ಮಕ್ಕಳ ಸುರಕ್ಷತೆಯಲ್ಲಿ 24 ಅಂಕಗಳಿಗೆ 19.90 ಅಂಕಗಳನ್ನು ಪಡೆದುಕೊಂಡಿದ್ದು, ಇದು ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉತ್ತಮ ಸುರಕ್ಷತೆ ಖಾತ್ರಿಪಡಿಸಿದೆ. ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಇಎಸ್ ಪಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ ಗಳಿವೆ.

ಇನ್ನು ಬಸಾಲ್ಟ್ ಕೂಪೆ ಎಸ್ ಯುವಿಯು ಪಿಯು (ರೂ.7.99 ಲಕ್ಷ), ಪ್ಲಸ್ (ರೂ.9.99 ಲಕ್ಷ) , ಟರ್ಬೊ ಪ್ಲಸ್ (ರೂ.11.49 ಲಕ್ಷ) , ಟರ್ಬೊ ಎಟಿ (ರೂ.12.79 ಲಕ್ಷ) ಮತ್ತು ಟರ್ಬೊ ಮ್ಯಾಕ್ಸ್ ಎಟಿ (ರೂ.13.62 ಲಕ್ಷ) ವೆರಿಯೆಂಟ್ ಗಳನ್ನು ಹೊಂದಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಾಟಾ ಕರ್ವ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಹೋಂಡಾ ಎಲಿವೇಟ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಇದನ್ನೂ ಓದಿ: ಎಲೆಕ್ಟ್ರಿಕ್ ಕಾರಿನಲ್ಲಿ ಒಂದೇ ಚಾರ್ಜ್‌ಗೆ 949 ಕಿ.ಮೀ ಪ್ರಯಾಣಿಸಿ ಗಿನ್ನಿಸ್ ದಾಖಲೆ

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರಲಿರುವ ಹೊಸ ಬಸಾಲ್ಟ್ ಕಾರಿನಲ್ಲಿ ಸಿ3 ಏರ್ ಕ್ರಾಸ್ನಲ್ಲಿರುವಂತೆ ಹಲವು ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಸ್ಪೋರ್ಟಿ ಲುಕ್ ನೊಂದಿಗೆ ಕ್ರೋಮ್ ಲೈನ್ ಹೊಂದಿರುವ ಚೆವರಾನ್ ಲೊಗೊ, ಎರಡು ಹಂತಗಳಲ್ಲಿ ವಿಭಾಗಗೊಂಡಿರುವ ಫ್ರಂಟ್ ಗ್ರೀಲ್, ಪ್ರೊಜೆಕ್ಟರ್ ಹೆಡ್ ಲ್ಯಾಂಪ್ಸ್, ಎಲ್ಇಡಿ ರನ್ನಿಂಗ್ ಲ್ಯಾಂಪ್ಸ್, ಕ್ಲಾಡಿಂಗ್ ಹೊಂದಿರುವ ವ್ಹೀಲ್ ಆರ್ಚ್, 17 ಇಂಚಿನ ಅಲಾಯ್ ವ್ಹೀಲ್ ಗಳು, ಪೂರ್ಣಪ್ರಮಾಣದಲ್ಲಿ ತೆರೆದುಕೊಳ್ಳುವ ಡೋರ್ ಗಳು, ಹಾಲೋಜೆನ್ ಟೈಲ್ ಲ್ಯಾಂಪ್ಸ್, 3ಡಿ ಎಫೆಕ್ಟ್ ಹೊಂದಿರುವ ಸ್ಪೋರ್ಟಿ ಡ್ಯುಯಲ್ ಟೋನ್ ಬಂಪರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಹಾಗೆಯೇ ಹೊಸ ಕಾರಿನ ಒಳಭಾಗದ ಫೀಚರ್ಸ್ ಗಳು ಸಹ ಗ್ರಾಹಕರನ್ನು ಸೆಳೆಯಲಿದ್ದು, ಸಿ3 ಏರ್ ಕ್ರಾಸ್ ನಲ್ಲಿರುವಂತೆ ಹೊಸ ವಿನ್ಯಾಸದ ಹ್ವಾಕ್ ಪ್ಯಾನೇಲ್ ನೊಂದಿಗೆ ಟಾಂಗಲ್ ಸ್ವಿಚ್ ಗಳು, ಆಟೋಮ್ಯಾಟಿಕ್ ಎಸಿ, ಅತ್ಯುತ್ತಮವಾಗಿ ಆರ್ಮ್ ರೆಸ್ಟ್, ಹೊಂದಾಣಿಕೆ ಮಾಡಬಹುದಾದ ಹಿಂಬದಿಯ ಆಸನಗಳ ಹೆಡ್ ರೆಸ್ಟ್, ರಿಯರ್ ಎಸಿ ವೆಂಟ್ಸ್ ಜೊತೆಗೆ 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ. ಜೊತೆಗೆ ಕನೆಕ್ಟಿವಿ ಸೌಲಭ್ಯಕ್ಕಾಗಿ 10..25 ಇಂಚಿನ ಪ್ಲೊಟರಿಂಗ್ ಇನ್ಪೋಟೈನ್ ಮೆಂಟ್ ಸಿಸ್ಟಂ, 7 ಇಂಚಿನ ಆಲ್ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವೈರ್ ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಮತ್ತು ತ್ರಿ ಸ್ಪೋಕ್ ಸ್ಟೀರಿಂಗ್ ವ್ಹೀಲ್ ನೀಡಲಾಗಿದೆ.

ಇದನ್ನೂ ಓದಿ: ಹೊಸ ಕಾರು ಖರೀದಿಸುವಾಗ ಯಾವ ವೆರಿಯೆಂಟ್ ಗಳು ಖರೀದಿಗೆ ಬೆಸ್ಟ್?

ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ಇದರಲ್ಲಿ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಮಾಡಬಹುದಾಗಿದೆ. ಮೊದಲನೇದಾಗಿ ಆರಂಭಿಕ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 82 ಹಾರ್ಸ್ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಟಾಪ್ ಎಂಡ್ ಟರ್ಬೊ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಿದ್ದು, ಇದು 110 ಹಾರ್ಸ್ ಪವರ್ ಮತ್ತು 205 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಕಾರು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಗೆ ಇದು 18 ಕಿ.ಮೀ ನಿಂದ 19.5 ಕಿ.ಮೀ ಮೈಲೇಜ್ ನೀಡಲಿದೆ.