AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 8 ಲಕ್ಷ ಆರಂಭಿಕ ಬೆಲೆಯ ಸಿಟ್ರನ್ ಬಸಾಲ್ಟ್ ಕಾರಿನ ಸಂಪೂರ್ಣ ಬೆಲೆ ಮಾಹಿತಿ ಬಹಿರಂಗ

ಸಿಟ್ರನ್ ಕಂಪನಿಯು ತನ್ನ ಬಹುನೀರಿಕ್ಷಿತ ಬಸಾಲ್ಟ್ ಕೂಪೆ ಎಸ್ ಯುವಿ ಮಾದರಿಯನ್ನು ಕಳೆದ ವಾರವಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಹೊಸ ಕಾರಿನ ಸಂಪೂರ್ಣ ಬೆಲೆ ಮಾಹಿತಿಯನ್ನು ಬಹಿರಂಗಪಡಿಸಿದೆ.

ರೂ. 8 ಲಕ್ಷ ಆರಂಭಿಕ ಬೆಲೆಯ ಸಿಟ್ರನ್ ಬಸಾಲ್ಟ್ ಕಾರಿನ ಸಂಪೂರ್ಣ ಬೆಲೆ ಮಾಹಿತಿ ಬಹಿರಂಗ
ಸಿಟ್ರನ್ ಬಸಾಲ್ಟ್
Praveen Sannamani
Praveen Sannamani|

Updated on: Aug 18, 2024 | 2:37 PM

Share

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ (Basalt) ಕಂಪನಿಯು ತನ್ನ ನಾಲ್ಕನೇ ಕಾರು ಮಾದರಿಯಾಗಿ ಬಸಾಲ್ಟ್ ಕೂಪೆ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 7.99 ಲಕ್ಷದಿಂದ ರೂ. 13.62 ಲಕ್ಷ ಬೆಲೆ ಹೊಂದಿದೆ. ಬಸಾಲ್ಟ್ ಕಾರು ಮಾದರಿಯು ಪಿಯು (ರೂ.99 ಲಕ್ಷ), ಪ್ಲಸ್ (ರೂ.9.99 ಲಕ್ಷ) , ಟರ್ಬೊ ಪ್ಲಸ್ (ರೂ.11.49 ಲಕ್ಷ) , ಟರ್ಬೊ ಎಟಿ (ರೂ.12.79 ಲಕ್ಷ)  ಮತ್ತು ಟರ್ಬೊ ಮ್ಯಾಕ್ಸ್ ಎಟಿ (ರೂ.13.62 ಲಕ್ಷ) ವೆರಿಯೆಂಟ್ ಗಳನ್ನು ಹೊಂದಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಸದ್ಯಕ್ಕೆ ಸಿ3, ಇಸಿ3, ಸಿ3 ಏರ್ ಕ್ರಾಸ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಸಿಟ್ರನ್ ಕಂಪನಿಯು ಇದೀಗ ಬಸಾಲ್ಟ್ ಎಸ್ ಯುವಿ ಕೂಪೆ ಪರಿಚಯಿಸಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ3 ಏರ್ ಕ್ರಾಸ್ ಆಧರಿಸಿ ನಿರ್ಮಾಣಗೊಂಡಿದೆ. ಹೊಸ ಕಾರು ಟಾಟಾ ಕರ್ವ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಹೋಂಡಾ ಎಲಿವೇಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಮಧ್ಯಮ ಕ್ರಮಾಂಕದ ಎಸ್ ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರಲಿರುವ ಹೊಸ ಬಸಾಲ್ಟ್ ಕಾರಿನಲ್ಲಿ ಸಿ3 ಏರ್ ಕ್ರಾಸ್ನಲ್ಲಿರುವಂತೆ ಹಲವು ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಸ್ಪೋರ್ಟಿ ಲುಕ್ ನೊಂದಿಗೆ ಕ್ರೋಮ್ ಲೈನ್ ಹೊಂದಿರುವ ಚೆವರಾನ್ ಲೊಗೊ, ಎರಡು ಹಂತಗಳಲ್ಲಿ ವಿಭಾಗಗೊಂಡಿರುವ ಫ್ರಂಟ್ ಗ್ರೀಲ್, ಪ್ರೊಜೆಕ್ಟರ್ ಹೆಡ್ ಲ್ಯಾಂಪ್ಸ್, ಎಲ್ಇಡಿ ರನ್ನಿಂಗ್ ಲ್ಯಾಂಪ್ಸ್, ಕ್ಲಾಡಿಂಗ್ ಹೊಂದಿರುವ ವ್ಹೀಲ್ ಆರ್ಚ್, 17 ಇಂಚಿನ ಅಲಾಯ್ ವ್ಹೀಲ್ ಗಳು, ಪೂರ್ಣಪ್ರಮಾಣದಲ್ಲಿ ತೆರೆದುಕೊಳ್ಳುವ ಡೋರ್ ಗಳು, ಹಾಲೋಜೆನ್ ಟೈಲ್ ಲ್ಯಾಂಪ್ಸ್, 3ಡಿ ಎಫೆಕ್ಟ್ ಹೊಂದಿರುವ ಸ್ಪೋರ್ಟಿ ಡ್ಯುಯಲ್ ಟೋನ್ ಬಂಪರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಹಾಗೆಯೇ ಹೊಸ ಕಾರಿನ ಒಳಭಾಗದ ಫೀಚರ್ಸ್ ಗಳು ಸಹ ಗ್ರಾಹಕರನ್ನು ಸೆಳೆಯಲಿದ್ದು, ಸಿ3 ಏರ್ ಕ್ರಾಸ್ ನಲ್ಲಿರುವಂತೆ ಹೊಸ ವಿನ್ಯಾಸದ ಹ್ವಾಕ್ ಪ್ಯಾನೇಲ್ ನೊಂದಿಗೆ ಟಾಂಗಲ್ ಸ್ವಿಚ್ ಗಳು, ಆಟೋಮ್ಯಾಟಿಕ್ ಎಸಿ, ಅತ್ಯುತ್ತಮವಾಗಿ ಆರ್ಮ್ ರೆಸ್ಟ್, ಹೊಂದಾಣಿಕೆ ಮಾಡಬಹುದಾದ ಹಿಂಬದಿಯ ಆಸನಗಳ ಹೆಡ್ ರೆಸ್ಟ್, ರಿಯರ್ ಎಸಿ ವೆಂಟ್ಸ್ ಜೊತೆಗೆ 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ. ಜೊತೆಗೆ ಕನೆಕ್ಟಿವಿ ಸೌಲಭ್ಯಕ್ಕಾಗಿ 10..25 ಇಂಚಿನ ಪ್ಲೊಟರಿಂಗ್ ಇನ್ಪೋಟೈನ್ ಮೆಂಟ್ ಸಿಸ್ಟಂ, 7 ಇಂಚಿನ ಆಲ್ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವೈರ್ ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಮತ್ತು ತ್ರಿ ಸ್ಪೋಕ್ ಸ್ಟೀರಿಂಗ್ ವ್ಹೀಲ್ ನೀಡಲಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ಇದರಲ್ಲಿ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಮಾಡಬಹುದಾಗಿದೆ. ಮೊದಲನೇದಾಗಿ ಆರಂಭಿಕ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 82 ಹಾರ್ಸ್ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಟಾಪ್ ಎಂಡ್ ಟರ್ಬೊ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಿದ್ದು, ಇದು 110 ಹಾರ್ಸ್ ಪವರ್ ಮತ್ತು 205 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಕಾರು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಗೆ ಇದು 18 ಕಿ.ಮೀ ನಿಂದ 19.5 ಕಿ.ಮೀ ಮೈಲೇಜ್ ನೀಡಲಿದೆ.

ಇನ್ನು ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿಯು ಆರು ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಇಎಸ್ ಪಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ ಗಳಿದ್ದು, ಇದು ಕ್ರ್ಯಾಶ್ ಟೆಸ್ಟಿಂಗ್ ನಲ್ಲೂ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸುವ ನೀರಿಕ್ಷೆಯಲ್ಲಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ