ಭಾರತದಲ್ಲಿ ಬಸಾಲ್ಟ್ ಕೂಪೆ ಎಸ್ ಯುವಿ ಉತ್ಪಾದನೆ ಆರಂಭಿದ ಸಿಟ್ರನ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ ಭಾರತದಲ್ಲಿ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಭಾರತದಲ್ಲಿ ಬಸಾಲ್ಟ್ ಕೂಪೆ ಎಸ್ ಯುವಿ ಉತ್ಪಾದನೆ ಆರಂಭಿದ ಸಿಟ್ರನ್
ಸಿಟ್ರನ್ ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ
Follow us
Praveen Sannamani
|

Updated on: Jun 16, 2024 | 10:21 PM

ಹೊಸ ಕಾರುಗಳೊಂದಿಗೆ ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್ (Citroen) ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರುಗಳಲ್ಲಿ ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ ಕೂಡಾ ಒಂದಾಗಿದ್ದು, ಹೊಸ ಕಾರನ್ನು ಸಿಟ್ರನ್ ಕಂಪನಿ ಭಾರತ ಮತ್ತು ದಕ್ಷಿಣ ಅಮೆರಿಕದಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹೊಸ ಕಾರನ್ನು ಸದ್ಯ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೀಗ ಅಧಿಕೃತವಾಗಿ ಉತ್ಪಾದನೆಗೂ ಸಹ ಚಾಲನೆ ನೀಡಲಾಗಿದೆ.

ಭಾರತದಲ್ಲಿ ಸದ್ಯ ಸಿ3, ಇಸಿ3, ಸಿ3 ಏರ್ ಕ್ರಾಸ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಸಿಟ್ರನ್ ಕಂಪನಿ ಇದೀಗ 5ನೇ ಕಾರು ಮಾದರಿಯಾಗಿ ಬಸಾಲ್ಟ್ ಹೊಸ ಕೂಪೆ ಎಸ್ ಯುವಿ ಬಿಡುಗಡೆ ಮಾಡುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ3 ಏರ್ ಕ್ರಾಸ್ ಆಧರಿಸಿ ನಿರ್ಮಾಣಗೊಳ್ಳಲಿದೆ. ಇದು ಮಧ್ಯಮ ಕ್ರಮಾಂಕದ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರಲಿದ್ದು, ಹೊಸ ಕಾರಿನಲ್ಲಿ ಸಿ3 ಏರ್ ಕ್ರಾಸ್ನಲ್ಲಿರುವಂತೆ ಹಲವು ತಾಂತ್ರಿಕ ಅಂಶಗಳೊಂದಿಗೆ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.

ಹೊಸ ಬಸಾಲ್ಟ್ ವಿಷನ್ ಕಾರು ಆಕರ್ಷಕವಾದ ಕೂಪೆ ಎಸ್‌ಯುವಿ ಶೈಲಿ ಹೊಂದಿರುವುದರಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ. ಇದು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಎಂಜಿ ಆಸ್ಟರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಇದಕ್ಕಾಗಿ ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಿದೆ.

ಬಸಾಲ್ಟ್ ವಿಷನ್ ಕಾರು ಪ್ರತಿಸ್ಪರ್ಧಿಗಳಿಗೆ ಪೈಪೋಟಿಯಾಗಿ ಎಲ್ಇಡಿ ಹೆಡ್ ಲ್ಯಾಂಪ್ಸ್, ಎಲ್ಇಡಿ ಟೈಲ್ ಲ್ಯಾಂಪ್ಸ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಸ್ ಮತ್ತು ಕೂಪೆ ವಿನ್ಯಾಸಕ್ಕೆ ಪೂರಕವಾದ ಶಾರ್ಕ್ ಫಿನ್ ಆಟೆಂನಾ ಸೇರಿದಂತೆ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನ ಒಳಾಂಗಣವು ಕೂಡಾ ಸಾಕಷ್ಟು ಸ್ಥಳಾವಕಾಶದೊಂದಿಗೆ ಪ್ರಯಾಣಿಕರಿಗೆ ಪ್ರೀಮಿಯಂ ಚಾಲನಾ ಅನುಭವ ನೀಡಲಿದ್ದು, ಹೊಸ ಕಾರಿನ ಇಂಟಿರಿಯರ್ ಶೀಘ್ರದಲ್ಲಿಯೇ ಬಹಿರಂಗವಾಗಲಿದೆ.

ಇನ್ನು ಹೊಸ ಕಾರಿನ ಒಳಭಾಗದಲ್ಲಿ ಸಿಟ್ರನ್ ಕಂಪನಿಯು ಲೆದರ್ ಆಸನಗಳೊಂದಿಗೆ ಫ್ರಂಟ್ ಸೀಟ್ ವೆಂಟೆಲೆಷನ್ ಸಿಸ್ಟಂ ಜೋಡಣೆ ಮಾಡಿದೆ. ಇದರ ಜೊತೆಗೆ ವೆರ್ ಲೆಸ್ ಚಾರ್ಜಿಂಗ್ ಪಾಡ್, ಆಟೋ ಹೆಡ್ ಲ್ಯಾಂಪ್, ಆಟೋ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವು ಫೀಚರ್ಸ್ ಗಳಿರಲಿವೆ.

ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳನ್ನು ಪರಿಚಯಿಸಲಿದೆಯೆಂತೆ. ಟ್ಯೂನ್ ಮಾಡಲಾಗಿರುವ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದ್ದು, ಇದು 108 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿರಬಹುದಾಗಿದೆ.

ಈ ಮೂಲಕ ಹೊಸ ಬಸಾಲ್ಟ್ ವಿಷನ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಸಿಟ್ರನ್ ಕಂಪನಿ ಈ ವರ್ಷದ ಕೊನೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆಯೆಂತೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಹೊಸ ಕಾರಿನ ಮೂಲಕ ಸಿಟ್ರನ್ ಕಂಪನಿ ಭಾರತದಲ್ಲಿ ತನ್ನ ಮಾರುಕಟ್ಟೆ ಪಾಲು ಹೆಚ್ಚಿಸಿಕೊಳ್ಳುವ ತವಕದಲ್ಲಿದೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ