Citroen C3 Aircross: ಹೊಸ ಸಿಟ್ರನ್ ಸಿ3 ಏರ್‌ಕ್ರಾಸ್ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ

|

Updated on: Jan 29, 2024 | 6:57 PM

ಸಿಟ್ರನ್ ಕಂಪನಿಯು ತನ್ನ ಜನಪ್ರಿಯ ಸಿ3 ಏರ್‌ಕ್ರಾಸ್ ಎಸ್ ಯುವಿ ಆವೃತ್ತಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಿದೆ.

Citroen C3 Aircross: ಹೊಸ ಸಿಟ್ರನ್ ಸಿ3 ಏರ್‌ಕ್ರಾಸ್ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ
ಸಿಟ್ರನ್ ಸಿ3 ಏರ್‌ಕ್ರಾಸ್ ಆಟೋಮ್ಯಾಟಿಕ್ ವರ್ಷನ್
Follow us on

ಸಿಟ್ರನ್ ಇಂಡಿಯಾ(Citroen India) ಕಂಪನಿಯು ತನ್ನ ಹೊಚ್ಚ ಹೊಸ ಸಿ3 ಏರ್‌ಕ್ರಾಸ್ (C3 Aircross) ಕಂಪ್ಯಾಕ್ಟ್ ಎಸ್ ಯುವಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.85 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹೊಸ ಆಟೋಮ್ಯಾಟಿಕ್ ಆವೃತ್ತಿಯು ಪ್ಲಸ್ ಮತ್ತು ಮ್ಯಾಕ್ಸ್ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಮಾದರಿಯು ರೂ. 12.85 ಲಕ್ಷ ಬೆಲೆ ಹೊಂದಿದ್ದರೆ ಮ್ಯಾಕ್ಸ್ ಮಾದರಿಯು ರೂ. 13.50 ಲಕ್ಷ ಬೆಲೆ ಹೊಂದಿದೆ.

ಸಿ3 ಏರ್‌ಕ್ರಾಸ್ ಮೊದಲ ಬಾರಿಗೆ ಬಿಡುಗಡೆಯ ಸಂದರ್ಭದಲ್ಲಿ ಕೇವಲ ಮ್ಯಾನುವಲ್ ಆವೃತ್ತಿಯನ್ನು ಮಾತ್ರ ಪರಿಚಯಿಸಿದ್ದ ಸಿಟ್ರನ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಇವು ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿವೆ. ಹೊಸ ಕಾರಿನಲ್ಲಿ ಯು ವೆರಿಯೆಂಟ್ ಮಾತ್ರ ಮ್ಯಾನುವಲ್ ನಲ್ಲಿ ಲಭ್ಯವಿದ್ದು, ಇನ್ನುಳಿದ ಎರಡು ಹೈ ಎಂಡ್ ವೆರಿಯೆಂಟ್ ಗಳು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆ ಹೊಂದಿವೆ.

ಹೊಸ ಕಾರಿನಲ್ಲಿ ಮತ್ತೊಂದು ವಿಶೇಷವೆಂದರೆ ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಖರೀದಿಸಬಹುದಾಗಿದ್ದು, 7 ಸೀಟರ್ ಮಾದರಿಯು ಪ್ಲಸ್ ಮತ್ತು ಮ್ಯಾಕ್ಸ್ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿರಲಿದೆ. ಇನ್ನುಳಿದಂತೆ ಎಲ್ಲಾ ವೆರಿಯೆಂಟ್ ಗಳಲ್ಲೂ 5 ಸೀಟರ್ ಮಾದರಿಯು ಸ್ಟ್ಯಾಂಡರ್ಡ್ ಆಗಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು 5 ಸೀಟರ್ ಮಾದರಿಗಿಂತಲೂ ರೂ. 35 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರುತ್ತವೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳಿವು!

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸಿ3 ಏರ್‌ಕ್ರಾಸ್ ನಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ.

ವಿನ್ಯಾಸ ಮತ್ತು ಫೀಚರ್ಸ್ ಗಳು

ಹೊಸ ಸಿ3 ಏರ್ ಕ್ರಾಸ್ ಕಾರು ಮಾದರಿಯು ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿದ್ದು, ಹೊಸ ಕಾರಿನ ಮುಂಭಾಗದಲ್ಲಿ ಸಿಗ್ನೇಚರ್ ಗ್ರಿಲ್ ಜೊತೆ ವಿಭಜಿತ ಹೆಡ್‌ಲೈಟ್ ಗಳು, ಎಲ್ಇಡಿ ಡಿಆರ್ ಎಲ್ ಗಳನ್ನು ನೀಡಲಾಗಿದೆ. ಕಾರಿನ ಒಳಭಾಗದಲ್ಲಿ 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‌ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿವರ್ಸ್ ಕ್ಯಾಮೆರಾ, ರಿಯರ್ ಡಿಫಾಗರ್ ಮತ್ತು ಯುಎಸ್ ಬಿ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ ಸೇರಿದಂತೆ ಹಲವು ಕಾರ್ ಟೆಕ್ ಕನೆಕ್ಟೆ ಸೌಲಭ್ಯಗಳನ್ನು ಹೊಂದಿದೆ.

ಇದನ್ನೂ ಓದಿ: ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು

ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಸಿಟ್ರನ್ ಕಂಪನಿ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಜೋಡಣೆ ಮಾಡಿದ್ದು, ಸ್ಟ್ಯಾಂಡರ್ಡ್ ಆಗಿ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಇಎಸ್ ಸಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳನ್ನು ಹೊಂದಿದೆ. ಈ ಮೂಲಕ ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.