Citroen C3 Aircross: ಅಚ್ಚರಿ ಬೆಲೆಗೆ ಬಿಡುಗಡೆಗೊಂಡಿದೆ ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ

|

Updated on: Oct 06, 2023 | 2:31 PM

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಸ ಸಿ3 ಏರ್ ಕ್ರಾಸ್ ಎಸ್ ಯುವಿ ಆವೃತ್ತಿಯ ಸಂಪೂರ್ಣ ಬೆಲೆ ಮಾಹಿತಿ ಬಹಿರಂಗಪಡಿಸಿದೆ.

Citroen C3 Aircross: ಅಚ್ಚರಿ ಬೆಲೆಗೆ ಬಿಡುಗಡೆಗೊಂಡಿದೆ ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ
ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ
Follow us on

ಪ್ರೀಮಿಯಂ ಕಾರುಗಳೊಂದಿಗೆ ಗ್ರಾಹಹಕರ ಗಮನಸೆಳೆಯುತ್ತಿರುವ ಸಿಟ್ರನ್ ಇಂಡಿಯಾ(Citroen India) ಕಂಪನಿಯು ತನ್ನ ಹೊಚ್ಚ ಹೊಸ ಸಿ3 ಏರ್‌ಕ್ರಾಸ್ (C3 Aircross) ಕಂಪ್ಯಾಕ್ಟ್ ಎಸ್ ಯುವಿಯನ್ನು ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆ ಮಾಡಿತ್ತು. ಹೊಸ ಕಾರು ಬಿಡುಗಡೆ ವೇಳೆ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರಿನ ಆರಂಭಿಕ ಆವೃತ್ತಿಯ ಬೆಲೆ ಮಾಹಿತಿ ಮಾತ್ರ ಹಂಚಿಕೊಂಡಿದ್ದ ಸಿಟ್ರನ್ ಕಂಪನಿಯು ಇದೀಗ ಹೊಸ ಕಾರಿನ ಎಲ್ಲಾ ವೆರಿಯೆಂಟ್ ಗಳ ಬೆಲೆಯನ್ನು ಬಹಿರಂಗಪಡಿಸಿದೆ.

ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರು ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ಮತ್ತು ಟಾಪ್ ಎಂಡ್ ಆವೃತ್ತಿಯು ರೂ. 12.34 ಲಕ್ಷ ಬೆಲೆ ಹೊಂದಿದೆ.

ಸಿ3 ಏರ್‌ಕ್ರಾಸ್ ಎಸ್‌ಯುವಿಯ ಮತ್ತೊಂದು ವಿಶೇಷವೆಂದರೆ ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಖರೀದಿಸಬಹುದಾಗಿದ್ದು, 7 ಸೀಟರ್ ಮಾದರಿಯು ಪ್ಲಸ್ ಮತ್ತು ಮ್ಯಾಕ್ಸ್ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿರಲಿದೆ. ಇನ್ನುಳಿದಂತೆ ಎಲ್ಲಾ ವೆರಿಯೆಂಟ್ ಗಳಲ್ಲೂ 5 ಸೀಟರ್ ಮಾದರಿಯು ಸ್ಟ್ಯಾಂಡರ್ಡ್ ಆಗಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು 5 ಸೀಟರ್ ಮಾದರಿಗಿಂತಲೂ ರೂ. 35 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿವೆ.

ಸಿಟ್ರನ್

ಇದನ್ನೂ ಓದಿ: ಹಳೆಯ ವಾಹನಗಳಿಗೆ ಗುಡ್ ಬೈ ಹೇಳಲು ಬೆಂಗಳೂರಿನಲ್ಲಿ ವೆಹಿಕಲ್ ಸ್ಕ್ರ್ಯಾಪಿಂಗ್ ಕೇಂದ್ರ ಆರಂಭ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರಲಿದೆ. ಸದ್ಯ ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಜೊತೆ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಮಾತ್ರ ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಸಿಟ್ರನ್

ವಿನ್ಯಾಸ ಮತ್ತು ಫೀಚರ್ಸ್ ಗಳು

ಹೊಸ ಸಿ3 ಏರ್ ಕ್ರಾಸ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಸಿ3 ಕಾರು ಮಾದರಿ ಹೋಲಿಕೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದ್ದು, ಅತ್ಯಾಧುನಿಕ ವಿನ್ಯಾಸ ಭಾಷೆಯು ಎಸ್‌ಯುವಿ ಪ್ರಿಯರನ್ನ ಸೆಳೆಯಲಿದೆ. ಹೊಸ ಕಾರಿನ ಮುಂಭಾಗದಲ್ಲಿ ಸಿಗ್ನೇಚರ್ ಗ್ರಿಲ್ ಜೊತೆ ವಿಭಜಿತ ಹೆಡ್‌ಲೈಟ್ ಗಳು, ಎಲ್ಇಡಿ ಡಿಆರ್ ಎಲ್ ಗಳಿದ್ದು, ಕಾರಿನ ಒಳಭಾಗದಲ್ಲಿ 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‌ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿವರ್ಸ್ ಕ್ಯಾಮೆರಾ, ರಿಯರ್ ಡಿಫಾಗರ್ ಮತ್ತು ಯುಎಸ್ ಬಿ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ ಸೇರಿದಂತೆ ಹಲವು ಕಾರ್ ಟೆಕ್ ಕನೆಕ್ಟೆ ಸೌಲಭ್ಯಗಳನ್ನು ಹೊಂದಿದೆ.

ಸಿಟ್ರನ್

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು

ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಸಿಟ್ರನ್ ಕಂಪನಿ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಜೋಡಣೆ ಮಾಡಿದ್ದು, ಸ್ಟ್ಯಾಂಡರ್ಡ್ ಆಗಿ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಇಎಸ್ ಸಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳನ್ನು ಹೊಂದಿದೆ.

ಈ ಮೂಲಕ ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

Published On - 12:51 pm, Fri, 6 October 23