Citroen eC3 Shine: ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಹೊಂದಿರುವ ಸಿಟ್ರನ್ ಇಸಿ3 ಶೈನ್ ವೆರಿಯೆಂಟ್ ಬಿಡುಗಡೆ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಸ ಇಸಿ3 ಎಲೆಕ್ಟ್ರಿಕ್ ಮೈಕ್ರೊ ಎಸ್ ಯುವಿಯ ಶೈನ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಬಜೆಟ್ ಬೆಲೆಯಲ್ಲಿ ಬಿಡುಗಡೆಗೊಂಡಿದೆ.

Citroen eC3 Shine: ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಹೊಂದಿರುವ ಸಿಟ್ರನ್ ಇಸಿ3 ಶೈನ್ ವೆರಿಯೆಂಟ್ ಬಿಡುಗಡೆ
ಸಿಟ್ರನ್ ಇಸಿ3 ಶೈನ್ ವೆರಿಯೆಂಟ್ ಬಿಡುಗಡೆ
Follow us
Praveen Sannamani
|

Updated on:Jan 24, 2024 | 10:41 PM

ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್(Citroen) ತನ್ನ ಮೊದಲ ಇವಿ ಕಾರು ಮಾದರಿಯಾದ ಇಸಿ3(eC3) ಆವೃತ್ತಿಯಲ್ಲಿ ಹೊಸದಾಗಿ ಶೈನ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಇದು ರೂ. 13.20 ಲಕ್ಷ ಬೆಲೆ ಹೊಂದಿದೆ. ಇಸಿ3 ಆವೃತ್ತಿಯಲ್ಲಿ ಕೆಲ ತಿಂಗಳ ಹಿಂದಷ್ಟೇ ಲೈವ್ ಮತ್ತು ಫೀಲ್ ಎನ್ನುವ ಎರಡು ವೆರಿಯೆಂಟ್ ಗಳನ್ನು ಬಿಡುಗಡೆ ಮಾಡಿದ್ದ ಸಿಟ್ರನ್ ಕಂಪನಿ ಇದೀಗ ಟಾಪ್ ಎಂಡ್ ಶೈನ್ ವೆರಿಯೆಂಟ್ ಪರಿಚಯಿಸಿದೆ.

ಇತ್ತೀಚೆಗೆ ಬಿಡುಗಡೆಯಾದ ಟಾಟಾ ಪಂಚ್ ಎಲೆಕ್ಟ್ರಿಕ್ ಆವೃತ್ತಿಗೆ ಪ್ರತಿಸ್ಪರ್ಧಿಯಾಗಿ ಹೊಸ ಇಸಿ3 ಶೈನ್ ವೆರಿಯೆಂಟ್ ಪರಿಚಯಿಸಿರುವ ಸಿಟ್ರನ್ ಕಂಪನಿ ಹೊಸ ಕಾರಿನಲ್ಲಿ ಈ ಹಿಂದಿನ ವೆರಿಯೆಂಟ್ ಗಳಲ್ಲಿರುವಂತೆಯೇ ಬ್ಯಾಟರಿ ಪ್ಯಾಕ್ ಮುಂದುವರೆಸಿದ್ದು, ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಗಳನ್ನು ನೀಡಿದೆ. ಹೊಸ ವೆರಿಯೆಂಟ್ ನಲ್ಲಿ ಆಟೋಮ್ಯಾಟಿಕ್ ವಿಂಗ್ ಮಿರರ್ ಗಳು, ರಿಯರ್ ಪಾರ್ಕಿಂಗ್ ಕ್ಯಾಮೆರಾ, 15 ಇಂಚಿನ ಡೈಮಂಡ್ ಕಟ್ ಅಲಾಯ್‌ ವ್ಹೀಲ್, ರಿಯರ್ ಫ್ಲಕ್ಸ್ ಸ್ಕೀಡ್ ಪ್ಲೇಟ್ ಮತ್ತು ಲೆದರ್ ವ್ಯಾರ್ಪ್ ಸ್ಟೀರಿಂಗ್ ವ್ಹೀಲ್ ಪಡೆದುಕೊಂಡಿದೆ.

ವೆರಿಯೆಂಟ್ ಗಳು ಮತ್ತು ಬೆಲೆ

ಸಿಟ್ರನ್ ಇಸಿ3 ಹೊಸ ಕಾರಿನಲ್ಲಿ ಇದೀಗ ಶೈನ್ ವೆರಿಯೆಂಟ್ ನೊಂದಿಗೆ ಲೈವ್ ಮತ್ತು ಫೀಲ್ ವೆರಿಯೆಂಟ್ ಗಳು ಸಹ ಮಾರಾಟವಾಗುತ್ತಿದ್ದು, ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11.61 ಲಕ್ಷ ಆರಂಭಿಕ ಬೆಲೆ ಹೊಂದಿವೆ. ಇದರಲ್ಲಿ ಗ್ರಾಹಕರು ಸಿಂಗಲ್ ಟೋನ್ ಅಥವಾ ಡ್ಯುಯಲ್ ಟೋನ್ ಬಣ್ಣಗಳನ್ನು ಆಯ್ಕೆ ಮಾಡಬಹುದಾಗಿದ್ದು, ಡ್ಯುಯಲ್ ಟೋನ್ ಮಾದರಿಗಳನ್ನ ಖರೀದಿಸುವ ಗ್ರಾಹಕರು ಹೆಚ್ಚುವರಿಯಾಗಿ ರೂ. 25 ಸಾವಿರ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳಿವು!

ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್

ಹೊಸ ಇಸಿ3 ಎಲೆಕ್ಟ್ರಿಕ್ ಕಾರಿನಲ್ಲಿ ಸಿಟ್ರನ್ ಕಂಪನಿಯು 29.2kWh ಬ್ಯಾಟರಿ ಪ್ಯಾಕ್ ಜೊತೆಗೆ ಆಕ್ಸೆಲ್ ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದರಲ್ಲಿರುವ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್ ಗೆ ಗರಿಷ್ಠ 320 ಕಿ.ಮೀ ಮೈಲೇಜ್ ಹಿಂದಿರುಗಿಸುವುಗಾಗಿ ಎಆರ್ ಎಐ ಸಂಸ್ಥೆ ಪ್ರಮಾಣೀಕರಿಸಿದೆ.

ಇದರೊಂದಿಗೆ ಹೊಸ ಕಾರು ಮಾದರಿಯು 56.2 ಹಾರ್ಸ್ ಪವರ್ ಮತ್ತು 143 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಪರ್ಫಾಮೆನ್ಸ್ ಹೊಂದಿದ್ದು, ಇದು ಪ್ರತಿ ಗಂಟೆಗೆ 107 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ. ಹಾಗೆಯೇ ಹೊಸ ಕಾರು ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಹೊಂದಿದ್ದು, ಹೋಂ ಚಾರ್ಜ್ ಮೂಲಕ ಪೂರ್ತಿ ಚಾರ್ಜ್ ಆಗಲು ಗರಿಷ್ಠ 10.50 ಗಂಟೆ ತೆಗೆದುಕೊಳ್ಳುತ್ತದೆ.

ಫೀಚರ್ಸ್ ಗಳು ಮತ್ತು ಸುರಕ್ಷತೆ

ಹೊಸ ಇಸಿ3 ಕಾರಿನಲ್ಲಿ ಸಿಟ್ರನ್ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೌಲಭ್ಯಗಳನ್ನ ಜೋಡಣೆ ಮಾಡಿದ್ದು, ಇದರಲ್ಲಿ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ 10.2 ಇಂಚಿನ ಟಚ್ ಸ್ಕ್ರೀನ್, ವೈರ್ ಲೆಸ್ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಸೌಲಭ್ಯವನ್ನ ನೀಡಲಾಗಿದ್ದು, ಸುರಕ್ಷತೆಗಾಗಿ ಡ್ಯುಯಲ್ ಏರ್ ಬ್ಯಾಗ್, ಎಬಿಎಸ್, ಇಬಿಡಿ ಸೇರಿದಂತೆ ಹಲವು ಸೌಲಭ್ಯಗಳನ್ನ ನೀಡಿದೆ.

ಇದನ್ನೂ ಓದಿ: ಅಚ್ಚರಿಯ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ

ವಾರಂಟಿ

ಹೊಸ ಇಸಿ3 ಎಲೆಕ್ಟ್ರಿಕ್ ಕಾರು ಖರೀದಿಯ ಮೇಲೆ ಸಿಟ್ರನ್ ಕಂಪನಿಯು ಸ್ಟ್ಯಾಂಡರ್ಡ್ ಆಗಿ ಮೂರು ವರ್ಷಗಳ ವಾರಂಟಿ ನೀಡುತ್ತಿದ್ದು, ಬ್ಯಾಟರಿ ಪ್ಯಾಕ್ ಮೇಲೆ 7 ವರ್ಷ ಅಥವಾ 1.40 ಲಕ್ಷ ಕಿ.ಮೀ ಮೇಲೆ ವಾರಂಟಿ ಘೋಷಣೆ ಮಾಡಿದೆ. ಹಾಗೆಯೇ ಎಲೆಕ್ಟ್ರಿಕ್ ಮೋಟಾರ್ ಮೇಲೆ 5 ವರ್ಷ ಅಥವಾ 1 ಲಕ್ಷ ಕಿ.ಮೀ ಮೇಲೆ ವಾರಂಟಿ ನೀಡುತ್ತಿದ್ದು, ಇದು ಹ್ಯಾಚ್ ಬ್ಯಾಕ್ ಇವಿ ಖರೀದಿದಾರರಿಗೆ ಅತ್ಯುತ್ತಮ ಆಯ್ಕೆ ಎನ್ನಬಹುದು.

Published On - 10:39 pm, Wed, 24 January 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ