Citroen: ಸಿಟ್ರನ್ ಹೊಸ ಎಸ್‍ಯುವಿ ಖರೀದಿ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಣೆ

ಸಿಟ್ರನ್ ಇಂಡಿಯಾ ಕಂಪನಿಯು ಸಿ3 ಏರ್‌ಕ್ರಾಸ್ ಎಸ್‍ಯುವಿಯ ಭಾರೀ ಪ್ರಮಾಣದ ಡಿಸ್ಕೌಂಟ್ ಘೋಷಣೆ ಮಾಡಿದೆ.

Citroen: ಸಿಟ್ರನ್ ಹೊಸ ಎಸ್‍ಯುವಿ ಖರೀದಿ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಣೆ
ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‍ಯುವಿ
Follow us
Praveen Sannamani
|

Updated on:Nov 01, 2023 | 3:58 PM

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ (Citroen) ಭಾರತದಲ್ಲಿ ಹೊಸ ಕಾರುಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ದೀಪಾವಳಿ ವಿಶೇಷತೆಗಾಗಿ ಸಿ3 ಏರ್‌ಕ್ರಾಸ್ (C3 Aircross) ಎಸ್‍ಯುವಿ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ನಲ್ಲಿ ಗ್ರಾಹಕರು ಕ್ಯಾಶ್ ಬ್ಯಾಕ್ ಜೊತೆಗೆ ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದ್ದು, ಎಸ್ ಯುವಿ ಕಾರು ಖರೀದಿದಾರರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಸಿಟ್ರನ್ ಹೊಸ ಆಫರ್ ನಲ್ಲಿ ಸಿ3 ಏರ್‌ಕ್ರಾಸ್ ಎಸ್‍ಯುವಿ ಖರೀದಿದಾರರಿಗೆ ಒಟ್ಟಾರೆ ರೂ. 1 ಲಕ್ಷ ಮೌಲ್ಯದ ಆಫರ್ ನೀಡುತ್ತಿದ್ದು, ಇದರಲ್ಲಿ ರೂ. 30 ಸಾವಿರ ಕ್ಯಾಶ್ ಡಿಸ್ಕೌಂಟ್ ಸಿಗಲಿದ್ದರೆ ರೂ 25 ಸಾವಿರ ಮೌಲ್ಯದ 5 ವರ್ಷಗಳ ಅಥವಾ 60 ಸಾವಿರ ಕಿ.ಮೀ ವಿಸ್ತೃತ ವಾರಂಟಿ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ 5 ವರ್ಷಗಳ ಅಥವಾ 50 ಸಾವಿರ ಕಿ.ಮೀ ತನಕ ಕಾರು ನಿರ್ವಹಣೆಗಾಗಿ ರೂ 45 ಸಾವಿರ ಮೌಲ್ಯದ ನಿರ್ವಹಣಾ ಪ್ಯಾಕೇಜ್ ನೀಡಲಾಗುತ್ತಿದ್ದು, ಹೊಸ ಆಫರ್ ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

Citroen C3 Aircross (1)

ಹೊಸ ಆಫರ್ ನಲ್ಲಿ ಸಿಟ್ರನ್ ಕಂಪನಿಯು ಮೇಲೆ ತಿಳಿಸಿರುವ ಕ್ಯಾಶ್ ಬ್ಯಾಕ್, ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಹೊರತಾಗಿಯೂ ಮತ್ತೊಂದು ಆಫರ್ ನೀಡುತ್ತಿದ್ದು, ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಬಿಟ್ಟು ರೂ. 90 ಸಾವಿರ ಮೌಲ್ಯದ ಕ್ಯಾಶ್ ಬ್ಯಾಕ್ ಆಫರ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ನ್ಯೂ ಜನರೇಷನ್ ಸುಜುಕಿ ಸ್ವಿಫ್ಟ್ ಅನಾವರಣ

ಇನ್ನು ಇತ್ತೀಚೆಗೆ ಬಿಡುಗಡೆಗೊಂಡಿರುವ ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯು ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ಮತ್ತು ಟಾಪ್ ಎಂಡ್ ಆವೃತ್ತಿಯು ರೂ. 12.34 ಲಕ್ಷ ಬೆಲೆ ಹೊಂದಿದೆ.

ಸಿ3 ಏರ್‌ಕ್ರಾಸ್ ಎಸ್‌ಯುವಿಯ ಮತ್ತೊಂದು ವಿಶೇಷವೆಂದರೆ ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಖರೀದಿಸಬಹುದಾಗಿದ್ದು, 7 ಸೀಟರ್ ಮಾದರಿಯು ಪ್ಲಸ್ ಮತ್ತು ಮ್ಯಾಕ್ಸ್ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿರಲಿದೆ. ಇನ್ನುಳಿದಂತೆ ಎಲ್ಲಾ ವೆರಿಯೆಂಟ್ ಗಳಲ್ಲೂ 5 ಸೀಟರ್ ಮಾದರಿಯು ಸ್ಟ್ಯಾಂಡರ್ಡ್ ಆಗಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು 5 ಸೀಟರ್ ಮಾದರಿಗಿಂತಲೂ ರೂ. 35 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿವೆ.

ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರಲಿದೆ. ಸದ್ಯ ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಜೊತೆ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಮಾತ್ರ ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಇದನ್ನೂ ಓದಿ: ಫೀಚರ್ಸ್ ವಿಚಾರದಲ್ಲಿ ಮಹೀಂದ್ರಾ ಎಕ್ಸ್ ಯುವಿ700 ಹಿಂದಿಕ್ಕಿದ ಟಾಟಾ ಸಫಾರಿ

ಈ ಮೂಲಕ ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

Published On - 3:41 pm, Wed, 1 November 23

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು