ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ದೀಪಾವಳಿ ವಿಶೇಷತೆಗಾಗಿ ಹೊಸ ಕಾರುಗಳ ಖರೀದಿ ಅಬ್ಬರ ಜೋರಾಗಿದೆ. ಹೊಸ ಕಾರುಗಳಲ್ಲಿ ಬಜೆಟ್ ಬೆಲೆಯ ಹ್ಯಾಚ್ ಬ್ಯಾಕ್ ಕಾರುಗಳ ನಂತರ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿಗೂ ಹೆಚ್ಚಿನ ಬೇಡಿಕೆಯಿದ್ದು, ರೂ. 10 ಲಕ್ಷ ಬೆಲೆ ಅಂತರದಲ್ಲಿ ಖರೀದಿಸಬಹುದಾದ ಉತ್ತಮ ಮೈಲೇಜ್ ಹೊಂದಿರುವ ಕಾರುಗಳ ಮಾಹಿತಿ ಇಲ್ಲಿದೆ.

ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!
ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!
Follow us
Praveen Sannamani
|

Updated on: Nov 12, 2023 | 9:00 PM

ದೇಶಾದ್ಯಂತ ದೀಪಾವಳಿ (Deepavali) ಹಬ್ಬಕ್ಕಾಗಿ ಹೊಸ ವಸ್ತುಗಳ ಖರೀದಿ ಭರಾಟೆ ಜೋರಾಗಿದ್ದು, ವಾಹನ ಖರೀದಿ ಪ್ರಕ್ರಿಯೆ ಕೂಡಾ ಜೋರಾಗಿದೆ. ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ ವಿವಿಧ ಮಾದರಿಯ ಕಾರುಗಳನ್ನು ಖರೀದಿಸುತ್ತಿದ್ದು, ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿದೆ. ಇವು ಎಸ್ ಯುವಿ ವಿನ್ಯಾಸದೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯುತ್ತಿದ್ದು, ಇವು ರೂ. 8 ಲಕ್ಷದಿಂದ ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ. ಫೀಚರ್ಸ್ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಆಧರಿಸಿ ರೂ. 10 ಲಕ್ಷದಲ್ಲಿ ಖರೀದಿಸಬಹುದಾದ ವೆರಿಯೆಂಟ್ ಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಮಾರುತಿ ಸುಜುಕಿ ಬ್ರೆಝಾ

ಆಕರ್ಷಕ ಬೆಲೆ ಜೊತೆಗೆ ವಿವಿಧ ಎಂಜಿನ್ ಆಯ್ಕೆ ಹೊಂದಿರುವ ಮಾರುತಿ ಸುಜುಕಿ ಬ್ರೆಝಾ ಕಾರು ಮಾದರಿಯು ಇತ್ತೀಚೆಗೆ ಹೊಸ ವಿನ್ಯಾಸದೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 8.29 ಲಕ್ಷ ಆರಂಭಿಕ ಬೆಲೆ ಹೊಂದಿರುವ ಬ್ರೆಝಾ ಕಾರಿನಲ್ಲಿ 1.5 ಲೀಟರ್ ಪೆಟ್ರೋಲ್ ಮತ್ತು ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಆಯ್ಕೆ ನೀಡಲಾಗಿದೆ. ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆ ಹೊಂದಿರುವ ಬ್ರೆಝಾ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ 19.8 ಕಿ.ಮೀ ಮೈಲೇಜ್ ನೀಡದರೆ, ಸಿಎನ್ ಜಿ ಮಾದರಿಯು ಮ್ಯಾನುವಲ್ ಗೇರ್ ಬಾಕ್ಸ್‌ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿ ಗೆ 25.1 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಬ್ರೆಝಾ ಕಾರು ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳೊಂದಿಗೆ 4 ಸ್ಟಾರ್ ಕ್ರ್ಯಾಶ್ ಟೆಸ್ಟಿಂಗ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಟಾಟಾ ಪಂಚ್

ಹೊಸ ಟಾಟಾ ಪಂಚ್ ಮೈಕ್ರೊ ಎಸ್ ಯುವಿ ಕಾರು ಮಾದರಿಯು ವಿವಿಧ ವೆರಿಯೆಂಟ್ ಗಳೊಂದಿಗೆ ಆಕರ್ಷಕ ಬೆಲೆ ಹೊಂದಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಪ್ರಮುಖ ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರುವ ಪಂಚ್ ಕಾರು ಮಾದರಿಯು 1.2 ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ಸಿಎನ್ ಜಿ ಮಾದರಿಯಲ್ಲೂ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ 20.09 ಕಿ.ಮೀ ಮೈಲೇಜ್ ನೀಡಿದರೆ ಸಿಎನ್ ಜಿ ಮಾದರಿಯು ಪ್ರತಿ ಕೆಜಿ ಸಿಎನ್ ಜಿಗೆ 26.99 ಕಿ.ಮೀ ಮೈಲೇಜ್ ನೀಡುತ್ತದೆ. ಜೊತೆಗೆ ಪಂಚ್ ಕಾರು ಗುಣಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಸುರಕ್ಷತೆಗಾಗಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ: ಮಹೀಂದ್ರಾ ನಿರ್ಮಾಣದ ಈ ಕಾರಿನ ಮೇಲೆ ರೂ. 3.50 ಲಕ್ಷ ಡಿಸ್ಕೌಂಟ್

ಹ್ಯುಂಡೈ ಎಕ್ಸ್ ಟರ್

ಹ್ಯುಂಡೈ ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಿದ ಅತ್ಯುತ್ತಮ ಕಾರುಗಳಲ್ಲಿ ಎಕ್ಸ್ ಟರ್ ಕೂಡಾ ಒಂದಾಗಿದೆ. ಆಕರ್ಷಕ ಬೆಲೆ, ವಿವಿಧ ಎಂಜಿನ್ ಆಯ್ಕೆ, ಗರಿಷ್ಠ ಸುರಕ್ಷಾ ಫೀಚರ್ಸ್ ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಕ್ಸ್ ಟರ್ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಇದು ಕೂಡಾ 1.2 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಸಿಎನ್ ಜಿ ವರ್ಷನ್ ಹೊಂದಿದೆ. ಇದರಲ್ಲಿ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ 19.4 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಸಿಎನ್ ಜಿ ಮಾದರಿಯು ಪ್ರತಿ ಕೆಜಿ ಸಿಎನ್ ಜಿಗೆ 27.1 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಎಕ್ಸ್ ಟರ್ ಕಾರಿನಲ್ಲಿ 6 ಏರ್ ಬ್ಯಾಗ್, ಡ್ಯಾಶ್ ಬೋರ್ಡ್ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿದ್ದು, ಇದು ಪಂಚ್ ಕಾರಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಟಾಟಾ ನೆಕ್ಸಾನ್ ಫೇಸ್ ಲಿಫ್ಟ್

ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಎಸ್, ಕ್ರಿಯೆಟಿವ್, ಕ್ರಿಯೆಟಿವ್ ಪ್ಲಸ್, ಫಿಯರ್ ಲೆಸ್, ಫಿಯರ್ ಲೆಸ್ ಪ್ಲಸ್ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಮಾದರಿ ಎಕ್ಸ್ ಶೋರೂಂ ಪ್ರಕಾರ ರೂ. 8.10 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದ್ದು, ಇದರಲ್ಲಿ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಗೆ ಗರಿಷ್ಠ 17.18 ಕಿ.ಮೀ ಮೈಲೇಜ್ ನೀಡಿದರೆ ಡೀಸೆಲ್ ಮಾದರಿಯು ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಲೀಟರ್ ಗೆ ಗರಿಷ್ಠ 23.23 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ನಿಮ್ಮ ಕಾರು ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸುವ ಆಕ್ಸೆಸರಿಸ್ ಗಳಿವು!

ಜೊತೆಗೆ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳು , ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಎಲ್ಲಾ ಆಸನಗಳಲ್ಲೂ ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಎಮರ್ಜೆನ್ಸಿ ಕಾಲ್ ಅಸಿಸ್ಟ್ ಮತ್ತು ಇಎಸ್ ಸಿ ತಂತ್ರಜ್ಞಾನ ನೀಡಲಾಗಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈಗಾಗಲೇ ಫೈವ್ ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ನೆಕ್ಸಾನ್ ಕಾರು ಇದೀಗ ಫೇಸ್ ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಬಲಿಷ್ಠವಾಗಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುತ್ತದೆ.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ