ದೀಪಾವಳಿ ಡಿಸ್ಕೌಂಟ್: ಸ್ಕೋಡಾ ಕುಶಾಕ್ ಮತ್ತು ಸ್ಲಾವಿಯಾ ಕಾರುಗಳ ಮೇಲೆ ಅತ್ಯುತ್ತಮ ಆಫರ್
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಗಳಾದ ಕುಶಾಕ್ ಕಂಪ್ಯಾಕ್ಟ್ ಎಸ್ ಯುವಿ ಮತ್ತು ಸ್ಲಾವಿಯಾ ಸೆಡಾನ್ ಕಾರುಗಳ ಖರೀದಿ ಮೇಲೆ ದೀಪಾವಳಿ ಆಫರ್ ಘೋಷಣೆ ಮಾಡಿದೆ.
ಹೊಸ ಮಾದರಿಗಳೊಂದಿಗೆ ಉತ್ತಮ ಗ್ರಾಹಕರ ಬೇಡಿಕೆ ಕಾಯ್ದುಕೊಂಡಿರುವ ಸ್ಕೋಡಾ(Skoda) ಕಂಪನಿಯು ದೀಪಾವಳಿ ವಿಶೇಷತೆಗಾಗಿ ತನ್ನ ಪ್ರಮುಖ ಕಾರು ಮಾದರಿಗಳಾದ ಕುಶಾಕ್ ಮತ್ತು ಸ್ಲಾವಿಯಾ ಕಾರುಗಳ ಖರೀದಿ ಮೇಲೆ ಆಫರ್ ನೀಡುತ್ತಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳಲ್ಲಿ ಗ್ರಾಹಕರು ಎಕ್ಸ್ ಚೆಂಜ್ ಮತ್ತು ಸರ್ವಿಸ್ ಪ್ಯಾಕೇಜ್ ಆಫರ್ ಪಡೆಯಬಹುದಾಗಿದೆ.
ಕುಶಾಕ್ ಕಂಪ್ಯಾಕ್ಟ್ ಎಸ್ ಯುವಿ
ಸ್ಕೋಡಾ ಕಂಪನಿಯು ಕುಶಾಕ್ ಕಾರು ಖರೀದಿಯ ಮೇಲೆ ರೂ. 30 ಸಾವಿರ ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ರೂ. 15 ಸಾವಿರ ತನಕ ಎಕ್ಸ್ ಚೆಂಜ್ ಬೋನಸ್ ಮತ್ತು ರೂ. 15 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.
ಎಕ್ಸ್ ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಜೊತೆಗೆ ಕುಶಾಕ್ ಕಾರು ಖರೀದಿಸುವ ಗ್ರಾಹಕರಿಗೆ ಕಂಪನಿಯು ಉಚಿತವಾಗಿ ನಾಲ್ಕು ವರ್ಷದ ಸರ್ವಿಸ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಕಾರು ಖರೀದಿದಾರರಿಗೆ ಇದೊಂದು ಅತ್ಯುತ್ತಮ ಅವಕಾಶ ಎನ್ನಬಹುದು.
ಇದನ್ನು ಓದಿ: ಭಾರತದಲ್ಲಿ ಸದ್ಯ ಖರೀದಿಸಬಹುದಾದ ಅತಿಹೆಚ್ಚು ಸುರಕ್ಷಿತ ಮಧ್ಯಮ ಕ್ರಮಾಂಕದ ಕಾರುಗಳಿವು!
ಸ್ಲಾವಿಯಾ ಸೆಡಾನ್
ಸ್ಕೋಡಾ ಕಂಪನಿಯು ಕುಶಾಕ್ ನಂತರ ಸ್ಲಾವಿಯಾ ಸೆಡಾನ್ ಮಾದರಿಯ ಮೇಲೆ ರೂ. 15 ಸಾವಿರ ತನಕ ಎಕ್ಸ್ ಚೆಂಜ್ ಆಫರ್ ಮತ್ತು ರೂ. 10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ. ಜೊತೆಗೆ ಹೊಸ ಕಾರು ಖರೀದಿಸುವ ಗ್ರಾಹಕರಿಗಾಗಿ ನಾಲ್ಕನೇ ವರ್ಷದ ಉಚಿತ ಸರ್ವಿಸ್ ಪ್ಯಾಕೇಜ್ ಘೋಷಣೆ ಮಾಡಿದೆ.
ಬೆಲೆ ಮತ್ತು ಎಂಜಿನ್ ಆಯ್ಕೆ
ಸ್ಕೋಡಾ ಕಂಪನಿಯು ಎಂಕ್ಯೂಬಿ-ಎo ಇನ್ ಪ್ಲ್ಯಾಟ್ ಫಾರ್ಮ್ ಆಧರಿಸಿದ್ದು, ಎರಡು ಕಾರು ಮಾದರಿಗಳಲ್ಲೂ ಒಂದೇ ರೀತಿಯ ಎಂಜಿನ್ ಜೋಡಣೆ ಮಾಡಲಾಗಿದೆ. ಕುಶಾಕ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವ್, ಆ್ಯಂಬಿನೇಷನ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಎನ್ನುವ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.
ಸ್ಲಾವಿಯಾ ಕಾರು ಕೂಡಾ ಆಕ್ಟಿವ್, ಆ್ಯಂಬಿನೇಷನ್, ಸ್ಟೈಲ್ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.39 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.
ಇದನ್ನು ಓದಿ: ಪ್ರತಿ ಚಾರ್ಜ್ ಗೆ 590 ಕಿ.ಮೀ ಮೈಲೇಜ್ ಹೊಂದಿರುವ ಹೊಸ ಮರ್ಸಿಡಿಸ್ ಇಕ್ಯೂಇ ಅನಾವರಣ
ಕುಶಾಕ್ ಮತ್ತು ಸ್ಲಾವಿಯಾ ಕಾರುಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿರಲಿದೆ.