ಅಕ್ಟೋಬರ್​ನಲ್ಲಿ ದಾಖಲೆಯ ಮಾರಾಟ ಕಂಡ ಎಲೆಕ್ಟ್ರಿಕ್ ವಾಹನಗಳು: ಸೇಲ್ ಆಗಿದ್ದು ಎಷ್ಟು ಗೊತ್ತೇ?

ಅಕ್ಟೋಬರ್ 2024 ರಲ್ಲಿ, ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ 1,39,159 ವಾಹನಗಳನ್ನು ಮಾರಾಟ ಮಾಡಲಾಗಿದೆ. ಇದು ಅಕ್ಟೋಬರ್ 2023 ರಲ್ಲಿ ಒಂದು ವರ್ಷದ ಹಿಂದೆ ಮಾರಾಟವಾದ 75,165 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 85 ರಷ್ಟು ಹೆಚ್ಚಾಗಿದೆ.

ಅಕ್ಟೋಬರ್​ನಲ್ಲಿ ದಾಖಲೆಯ ಮಾರಾಟ ಕಂಡ ಎಲೆಕ್ಟ್ರಿಕ್ ವಾಹನಗಳು: ಸೇಲ್ ಆಗಿದ್ದು ಎಷ್ಟು ಗೊತ್ತೇ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 12, 2024 | 6:36 PM

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ತಮ್ಮ ಛಾಪು ಮೂಡಿಸಲು ಪ್ರಾರಂಭಿಸಿವೆ. ಕಳೆದ ಅಕ್ಟೋಬರ್‌ನಲ್ಲಿ ಹಬ್ಬದ ಋತುವಿನ ಸಂದರ್ಭ ಎಲೆಕ್ಟ್ರಿಕ್ ವಾಹನಗಳು ದಾಖಲೆಯ ಮಾರಾಟವಾಗಿದೆ. ಎಲೆಕ್ಟ್ರಿಕ್ ಸ್ಕೂಟರ್ ಅಥವಾ ಮೋಟಾರ್ ಸೈಕಲ್, ಎಲೆಕ್ಟ್ರಿಕ್ ಕಾರು ಅಥವಾ ತ್ರಿಚಕ್ರ ವಾಹನ, ಎಲೆಕ್ಟ್ರಿಕ್ ವಾಣಿಜ್ಯ ಬ್ಯಾಟರಿ ಚಾಲಿತ ವಾಹನಗಳನ್ನು ವ್ಯಾಪಕವಾಗಿ ಖರೀದಿಸಿದ್ದಾರೆ. ಇದಕ್ಕಾಗಿಯೇ ಕಳೆದ ತಿಂಗಳು ಸುಮಾರು 2.18 ಲಕ್ಷ ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ.

ಕಳೆದ ತಿಂಗಳು 1.39 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ:

ಅಕ್ಟೋಬರ್ 2024 ರಲ್ಲಿ, ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ 1,39,159 ವಾಹನಗಳನ್ನು ಮಾರಾಟ ಮಾಡಲಾಗಿದೆ. ಇದು ಅಕ್ಟೋಬರ್ 2023 ರಲ್ಲಿ ಒಂದು ವರ್ಷದ ಹಿಂದೆ ಮಾರಾಟವಾದ 75,165 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 85 ರಷ್ಟು ಹೆಚ್ಚಾಗಿದೆ. ಅದೇ ಸಮಯದಲ್ಲಿ, ಸೆಪ್ಟೆಂಬರ್ 2024 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ 90 ಸಾವಿರ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಅಂದರೆ ಅವುಗಳ ಮಾರಾಟದಲ್ಲಿ ಮಾಸಿಕ 55 ಪ್ರತಿಶತದಷ್ಟು ಹೆಚ್ಚಳವಾಗಿದೆ. ಓಲಾ ಎಲೆಕ್ಟ್ರಿಕ್, ಟಿವಿಎಸ್, ಬಜಾಜ್, ಅಥರ್ ಎನರ್ಜಿ ಮತ್ತು ಹೀರೋ ವಿಡಾ ಕಂಪನಿಗಳು ಭಾರತದಲ್ಲಿ ಗರಿಷ್ಠ ಸಂಖ್ಯೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿವೆ.

ಅಕ್ಟೋಬರ್‌ನಲ್ಲಿ 67 ಸಾವಿರ ಎಲೆಕ್ಟ್ರಿಕ್ 3-ಚಕ್ರ ವಾಹನಗಳ ಮಾರಾಟ:

ಕಳೆದ ತಿಂಗಳು ಹಬ್ಬದ ಋತುವಿನಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ 67,171 ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. ಇದು ಸುಮಾರು 18 ಪ್ರತಿಶತದಷ್ಟು ವಾರ್ಷಿಕ ಹೆಚ್ಚಳವಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಅದೇ ಸಮಯದಲ್ಲಿ, ಮಾಸಿಕ ಮಾರಾಟವು ಸುಮಾರು 7 ಪ್ರತಿಶತದಷ್ಟು ಹೆಚ್ಚಾಗಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ 62,899 ಎಲೆಕ್ಟ್ರಿಕ್ 3-ಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ.

ಅಕ್ಟೋಬರ್ ನಲ್ಲಿ 865 ಎಲೆಕ್ಟ್ರಿಕ್ ಗೂಡ್ಸ್ ವಾಹನಗಳ ಮಾರಾಟ:

ಕಳೆದ ಅಕ್ಟೋಬರ್‌ನಲ್ಲಿ ಭಾರತದಲ್ಲಿ 864 ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಇದು ವಾರ್ಷಿಕ ಶೇಕಡಾ 50 ರಷ್ಟು ಹೆಚ್ಚಳವಾಗಿದೆ. ಅದೇ ಸಮಯದಲ್ಲಿ, ಮಾಸಿಕ ಮಾರಾಟವು ಶೇಕಡಾ 1 ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಮನೆಯ ವೈಫೈ ವೇಗ ಕಡಿಮೆಯಾಗಿದೆಯೇ? ಈ ಟ್ರಿಕ್ ಮೂಲಕ ನಿಮಿಷಗಳಲ್ಲಿ ವೇಗ ಹೆಚ್ಚಿಸಿ

ಕಳೆದ ತಿಂಗಳು 10 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳ ಮಾರಾಟ:

ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ 10,609 ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಇದು ಅಕ್ಟೋಬರ್ 2023 ರಲ್ಲಿ 7626 ಯುನಿಟ್‌ಗಳಿಗಿಂತ 39 ಶೇಕಡಾ ಹೆಚ್ಚಾಗಿದೆ. ಅದೇ ಸಮಯದಲ್ಲಿ, ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಳೆದ ತಿಂಗಳು ಮಾಸಿಕ ಸುಮಾರು 81 ಪ್ರತಿಶತದಷ್ಟು ಹೆಚ್ಚಾಗಿದೆ, ಅದೇ ಸೆಪ್ಟೆಂಬರ್‌ನಲ್ಲಿ ಕೇವಲ 5873 ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಿತ್ತು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?