AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾರ್ ಗೆ ಪೈಪೋಟಿಯಾಗಿ ರೋಡ್ ಗೆ ಎಂಟ್ರಿ ಕೊಡ್ತು ಪವರ್‌ಫುಲ್‌ ಫೋರ್ಸ್ ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿ ತನ್ನ ಹೊಸ ಗೂರ್ಖಾ ಆಫ್ ರೋಡ್ ಎಸ್ ಯುವಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರಿನ ವಿತರಣೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಿದೆ.

ಥಾರ್ ಗೆ ಪೈಪೋಟಿಯಾಗಿ ರೋಡ್ ಗೆ ಎಂಟ್ರಿ ಕೊಡ್ತು ಪವರ್‌ಫುಲ್‌ ಫೋರ್ಸ್ ಗೂರ್ಖಾ
ಫೋರ್ಸ್ ಗೂರ್ಖಾ
Praveen Sannamani
|

Updated on: Jun 18, 2024 | 10:10 PM

Share

ಪ್ರಯಾಣಿಕ ಕಾರುಗಳು ಮತ್ತು ವಾಣಿಜ್ಯ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಫೋರ್ಸ್ ಮೋಟಾರ್ಸ್ (Force Motors) ಕಂಪನಿಯು ಭಾರೀ ಬದಲಾವಣೆಯೊಂದಿಗೆ ಇತ್ತೀಚೆಗೆ 2024ರ ಗೂರ್ಖಾ ಎಸ್ ಯುವಿ ಬಿಡುಗಡೆ ಮಾಡಿತ್ತು. ಇದೀಗ ಹೊಸ ಕಾರಿನ ವಿತರಣೆಗೆ ಅಧಿೃತವಾಗಿ ಚಾಲನೆ ನೀಡಲಾಗಿದ್ದು, ಹೊಸ ಕಾರು ಖರೀದಿಗೆ ಭಾರೀ ಬೇಡಿಕೆ ಹರಿದುಬರುತ್ತಿದೆ. ಹೊಸ ಕಾರು ಈ ಬಾರಿ 3 ಡೋರ್ ಮತ್ತು 5 ಡೋರ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, 3 ಡೋರ್ ಆವೃತ್ತಿಯು ಎಕ್ಸ್ ಶೋರೂಂ ಪ್ರಕಾರ ರೂ. 16.75 ಲಕ್ಷಕ್ಕೆ ಮತ್ತು 5 ಡೋರ್ ಆವೃತ್ತಿಯು ರೂ. 18 ಲಕ್ಷ ಆರಂಭಿಕ ಬೆಲೆ ಹೊಂದಿವೆ.

ಆಫ್ ರೋಡ್ ಎಸ್ ಯುವಿ ವಿಭಾಗದಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯತೆ ಹೊಂದಿರುವ ಗೂರ್ಖಾ ಕಾರು ಇದೀಗ ಮಹೀಂದ್ರಾ ಥಾರ್ ಗೆ ಪೈಪೋಟಿಯಾಗಿ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಂಡಿದೆ. ಗೂರ್ಖಾ ಕಾರಿನ ಎಂಟ್ರಿ ಲೆವಲ್ ಮಾದರಿಯು ಥಾರ್ ಎಂಟ್ರಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯ ಹೊಂದಿದ್ದು, ಇದು ಥಾರ್ 4X4 ಎಂಟ್ರಿ ಲೆವಲ್ ಗಿಂತಲೂ ರೂ. 1.75 ಲಕ್ಷದಷ್ಟು ದುಬಾರಿ ಎನ್ನಿಸಲಿದೆ. ಹೀಗಾಗಿ ಹೊಸ ಕಾರನ್ನು ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ ವಿವಿಧ ಆವೃತ್ತಿಗಳನ್ನು ಖರೀದಿಸಬಹುದಾಗಿದೆ. ಇದರಲ್ಲಿ 5 ಸೀಟರ್ ಮಾದರಿಯು ಆಫ್ ರೋಡ್ ಪ್ರಿಯರಿಗೆ ಮತ್ತು 7 ಸೀಟರ್ ಆವೃತ್ತಿಯು ಆಫ್ ರೋಡ್ ಜೊತೆ ಕುಟುಂಬ ಸಮೇತರಾಗಿ ಪ್ರಯಾಣಿಸುವುದಕ್ಕೆ ಆಯ್ಕೆ ಮಾಡಬಹುದಾಗಿದೆ.

ಹೊಸ ಕಾರಿನಲ್ಲಿ ಫೋರ್ಸ್ ಕಂಪನಿಯ ಮರ್ಸಿಡಿಸ್ ನಿಂದ ಎರವಲು ಪಡೆಯಲಾದ 2.6 ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದೆ. ಇದು ಫೋರ್ ಸಿಲಿಂಡರ್ ವೈಶಿಷ್ಟ್ಯತೆಯೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಪ್ರೇರಿತ 4X4 ಡ್ರೈವ್ ಸಿಸ್ಟಂ ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರು ಈ ಬಾರಿ 140 ಹಾರ್ಸ್ ಪವರ್ ಮತ್ತು 320 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಇದರಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಆಟೋ ಸ್ಟಾರ್ಟ್ ಅಂಡ್ ಸ್ಟಾಪ್ ಸೌಲಭ್ಯ ನೀಡಲಾಗಿದೆ. ಈ ಮೂಲಕ ಇದು ಈ ಹಿಂದಿನ ಮಾದರಿಗಿಂತಲೂ ಹೆಚ್ಚು ಇಂಧನ ದಕ್ಷತೆಯನ್ನು ಖಾತ್ರಿ ಪಡಿಸುತ್ತದೆ.

ಇನ್ನು ಹೊಸ ಗೂರ್ಖಾ ಕಾರಿನ 5 ಡೋರ್ ಆವೃತ್ತಿಯು 3 ಡೋರ್ ಆವೃತ್ತಿಗಿಂತಲೂ 425 ಎಂಎಂ ಹೆಚ್ಚುವರಿ ಉದ್ದಳತೆ ಹೊಂದಿದ್ದು, ಇದು ಉತ್ತಮ ಒಳಾಂಗಣ ಸೌಲಭ್ಯವನ್ನು ಹೊಂದಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೊಸ ಕಾರಿನಲ್ಲಿ 9 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್, ಪವರ್ಡ್ ರಿಯರ್ ವ್ಯೂ ಮಿರರ್ ಗಳು, ಫುಲ್ ಎಲ್ಇಡಿ ಹೆಡ್ ಲ್ಯಾಂಪ್ಸ್ ಮತ್ತು 18 ಇಂಚಿನ ಅಲಾಯ್ ವ್ಹೀಲ್ಸ್ ನೀಡಲಾಗಿದೆ. ಇದರಲ್ಲಿ ಸುರಕ್ಷತೆಗಾಗಿ ಫುಲ್ ಮೆಟಲ್ ಬಾಡಿಯೊಂದಿಗೆ ಡ್ಯುಯಲ್ ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯಗಳಿವೆ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ