Hero Karizma XMR: ಯುವಕರ ಹಾಟ್ ಫೇವರಿಟ್ ಹೀರೋ ಕರಿಜ್ಮಾ ಎಕ್ಸ್ಎಂಆರ್ ಬಿಡುಗಡೆ

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಹುನೀರಿಕ್ಷಿತ ಕರಿಜ್ಮಾ ಎಕ್ಸ್ಎಂಆರ್ ಬೈಕ್ ಬಿಡುಗಡೆ ಮಾಡಿದೆ.

Hero Karizma XMR: ಯುವಕರ ಹಾಟ್ ಫೇವರಿಟ್ ಹೀರೋ ಕರಿಜ್ಮಾ ಎಕ್ಸ್ಎಂಆರ್ ಬಿಡುಗಡೆ
ಹೀರೋ ಕರಿಜ್ಮಾ ಎಕ್ಸ್ಎಂಆರ್ ಬೈಕ್ ಬಿಡುಗಡೆ
Follow us
Praveen Sannamani
|

Updated on:Aug 30, 2023 | 4:00 PM

ದ್ವಿಚಕ್ರ ವಾಹನಗಳ ಉತ್ಪಾದನೆಯಲ್ಲಿ ಸದ್ಯ ಜಾಗತಿಕವಾಗಿ ಅಗ್ರಸ್ಥಾನದಲ್ಲಿರುವ ಹೀರೋ ಮೋಟೊಕಾರ್ಪ್(Hero MotoCorp) ಕಂಪನಿಯು ಬಜೆಟ್ ಬೆಲೆಯ ಉತ್ಪನ್ನಗಳೊಂದಿಗೆ ಪ್ರೀಮಿಯಂ ಆವೃತ್ತಿಗಳ ಮೇಲೂ ಹೆಚ್ಚಿನ ಗಮನಹರಿಸುತ್ತಿದ್ದು, ಇದೀಗ ಹೊಚ್ಚ ಹೊಸ ಕರಿಜ್ಮಾ ಎಕ್ಸ್ಎಂಆರ್(Karizma XMR) ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದೆ. ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1,72,900 ಪರಿಚಯಾತ್ಮಕ ಬೆಲೆ ಹೊಂದಿದ್ದು, ನಿಗದಿತ ಅವಧಿ ನಂತರ ದರ ಹೆಚ್ಚಳ ಮಾಡುವುದಾಗಿ ಹೀರೋ ಮೋಟೊಕಾರ್ಪ್ ಘೋಷಣೆ ಮಾಡಿದೆ.

ಹೊಸ ಕರಿಜ್ಮಾ ಎಕ್ಸ್ಎಂಆರ್ ಬೈಕ್ ಮಾದರಿಗಾಗಿ ನಿಗದಿತ ಅವಧಿಯಲ್ಲಿ ಬುಕಿಂಗ್ ದಾಖಲಿಸುವ ಗ್ರಾಹಕರಿಗೆ ಮಾತ್ರ ರೂ. 1,72,900 ಎಕ್ಸ್ ಶೋರೂಂ ದರ ಅನ್ವಯಿಸಲಿದ್ದು, ತದನಂತರ ಬುಕಿಂಗ್ ದಾಖಲಿಸುವ ಗ್ರಾಹಕರಿಗೆ ಎಕ್ಸ್ ಶೋರೂಂ ಪ್ರಕಾರ ರೂ. 1,82,900 ಬೆಲೆ ಅನ್ವಯಿಸಲಿದೆ.

Hero Karizma XMR (5)

ಭಾರತೀಯ ಆಟೋ ಉದ್ಯಮದಲ್ಲಿ ಸುಮಾರು ಎರಡು ದಶಕಗಳ ಜನಪ್ರಿಯತೆ ಹೊಂದಿದ್ದ ಕರಿಜ್ಮಾ ಬೈಕ್ ಇತ್ತೀಚೆಗೆ ವಿವಿಧ ಕಂಪನಿಗಳ ಪ್ರತಿಸ್ಪರ್ಧಿ ಬೈಕ್ ಮಾದರಿಗಳಿಂದ ತೀವ್ರ ಹಿನ್ನಡೆ ಅನುಭವಿಸಿತ್ತು. ಜೊತೆಗೆ ಕೇಂದ್ರ ಸರ್ಕಾರವು ಜಾರಿಗೆ ತಂದ ಹೊಸ ಸುರಕ್ಷಾ ಮಾನದಂಡಗಳು ಮತ್ತು ಮಾಲಿನ್ಯ ನಿಯಂತ್ರಣ ಮಾನದಂಡಗಳು ಕರಿಜ್ಮಾ ಮಾರಾಟ ಸ್ಥಗಿತಕ್ಕೆ ಪ್ರಮಖ ಕಾರಣವಾಗಿತ್ತು. ಕಳೆದ ಮೂರು ವರ್ಷಗಳ ಹಿಂದೆಯೇ ಕರಿಜ್ಮಾ ಮಾರಾಟ ಸ್ಥಗಿತಗೊಳಿಸಿದ್ದ ಹೀರೋ ಮೋಟೊಕಾರ್ಪ್ ಕಂಪನಿಯು ಇದೀಗ ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ನವೀಕರಿಸಿದ್ದು, ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕರಿಜ್ಮಾ ಎಕ್ಸ್ಎಂಆರ್ ಪರಿಚಯಿಸಿದೆ.

ಇದನ್ನೂ ಓದಿ: ಟಿವಿಎಸ್ ಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್ ಕರಿಜ್ಮಾ ಎಕ್ಸ್ಎಂಆರ್ ಬೈಕ್ ನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿ ಹೊಸ 210 ಸಿಸಿ ಸಿಂಗಲ್ ಸಿಲಿಂಡರ್ ಡಿಏಹೆಚ್ ಸಿ, ಲಿಕ್ವಿಡ್ ಕೂಲ್ಡ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 25.1 ಹಾರ್ಸ್ ಪವರ್ ಮತ್ತು 20.4 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹೊಸ ಬೈಕಿನಲ್ಲಿ ಅತ್ಯುತ್ತಮ ಪರ್ಫಾಮೆನ್ಸ್ ಗಾಗಿ ಸ್ಲಿಪ್ ಅಂಡ್ ಅಸಿಸ್ಟ್ ಕ್ಲಚ್ ನೀಡಲಾಗಿದ್ದು, ಇದು ಹಿಂಬದಿಯ ಚಕ್ರಕ್ಕೆ ಹೆಚ್ಚಿನ ಶಕ್ತಿ ಒದಗಿಸಲು ಸಹಕಾರಿಯಾಗಿದೆ.

Hero Karizma XMR (3)

ಹೊಸ ಕರಿಜ್ಮಾ ಎಕ್ಸ್ಎಂಆರ್ ಬೈಕ್ ಮಾದರಿಯು ಸ್ಟೀಲ್ ಟ್ರೇಲ್ಲಿಸ್ ಫ್ರೇಮ್ ಆಧರಿಸಿ ನಿರ್ಮಾಣಗೊಂಡಿದ್ದು, ಮುಂಭಾಗದಲ್ಲಿ ಟೆಲಿಸ್ಕೋಫಿಕ್ ಫೋರ್ಕ್ಸ್ ಮತ್ತು ಹಿಂಬದಿಯ ಚಕ್ರದಲ್ಲಿ ಮೊನೊಶಾಕ್ ಸಸ್ಷೆಂಷನ್ ನೀಡಲಾಗಿದೆ. ಹಾಗೆಯೇ ಹೊಸ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ನೀಡಲಾಗಿದ್ದು, ಸುರಕ್ಷಿತ ಬೈಕ್ ಚಾಲನೆಗಾಗಿ ಡ್ಯುಯಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ನೀಡಲಾಗಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು ಹೊಸ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ನೊಂದಿಗೆ ಕರಿಜ್ಮಾ ಎಕ್ಸ್ಎಂಆರ್ ಬೈಕ್ ಹೆಚ್ಚಿನ ಮಟ್ಟದ ಸ್ಪೋರ್ಟಿ ವಿನ್ಯಾಸ ಪಡೆದುಕೊಂಡಿದ್ದು, ವೈ ಆಕಾರದಲ್ಲಿರುವ ಎಲ್ಇಡಿ ಡಿಆರ್ ಎಲ್ ಹೆಚ್ಚು ಆಕರ್ಷಕವಾಗಿದೆ. ಹಾಗೆಯೇ ಪೂರ್ಣ ಪ್ರಮಾಣ ಆಕಾರ ಹೊಂದಿರುವ ಹೆಡ್‌ಲೈಟ್ ಸೆಟಪ್ ಹೊಂದಿದ್ದು, ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್ ಮತ್ತು ರಿಯರ್ ವ್ಯೂ ಮಿರರ್‌ಗಳು ಹ್ಯಾಂಡಲ್‌ಬಾರ್‌ ಹೆಚ್ಚಿನ ಎತ್ತರದೊಂದಿಗೆ ಆಕರ್ಷಕ ನೋಟ ನೀಡುತ್ತವೆ.

ಇದನ್ನೂ ಓದಿ: ಗ್ರ್ಯಾಂಡ್‌ಮಾಸ್ಟರ್ ಪ್ರಗ್ನಾನಂದ ಪೋಷಕರಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ

ಜೊತೆಗೆ ಹೊಸ ಬೈಕ್ ಮಾದರಿಯಲ್ಲಿ ಹಗುರುವಾಗಿರುವ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳು, ಸ್ಪೋರ್ಟಿಯಾಗಿರುವ ಎಕ್ಸಾಸ್ಟ್ ಮತ್ತು ಸ್ಲಿಮ್ ಆಗಿರುವ ಹಿಂಬದಿಯ ಎಲ್ಇಡಿ ಲೈಟಿಂಗ್ ಜೋಡಿಸಲಾಗಿದ್ದು, ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಫುಲ್ ಡಿಜಿಟಲ್ ಎಲ್ ಸಿಡಿ ಇನ್ಸ್ ಟ್ರುಮೆಂಟ್ ಕ್ಲಸ್ಟರ್ ಅನ್ನು ನೀಡಲಾಗಿದೆ. ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಬೈಕ್ ಸವಾರರು ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌ ಜೊತೆಗೆ ವಿವಿಧ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

Hero Karizma XMR (2)

ಇನ್ನು ಹೊಸ ಬೈಕ್ ಮಾದರಿಯು ಐಕಾನಿಕ್ ಯೆಲ್ಲೊ, ಟರ್ಬೊ ರೆಡ್ ಮತ್ತು ಮ್ಯಾಟೆ ಫ್ಯಾಂಟಮ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಹೊಂದಿದ್ದು, ಯಮಹಾ ಆರ್15 ವಿ4, ಸುಜುಕಿ ಜಿಕ್ಸರ್ ಎಸ್ಎಫ್ 250, ಬಜಾಜ್ ಪಲ್ಸರ್ ಆರ್ ಎಸ್ 200 ಮತ್ತು ಪ್ರೀಮಿಯಂ ಬೈಕ್ ಮಾದರಿಯಾದ ಕೆಟಿಎಂ ಆರ್ ಸಿ 200 ಬೈಕ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Published On - 3:59 pm, Wed, 30 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ