Honda City: ಮಹತ್ವದ ಬದಲಾವಣೆಗಳೊಂದಿಗೆ 2023ರ ಹೋಂಡಾ ಸಿಟಿ ಸೆಡಾನ್ ಬಿಡುಗಡೆ

ಹೋಂಡಾ ಇಂಡಿಯಾ ಕಂಪನಿಯು ತನ್ನ ಹೊಸ ಸಿಟಿ ಸೆಡಾನ್ ಕಾರು ಮಾದರಿಯನ್ನ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಭಾರೀ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Follow us
Praveen Sannamani
|

Updated on:Mar 02, 2023 | 8:55 PM

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್(Honda Cars) ಕಂಪನಿಯು ತನ್ನ ನವೀಕೃತ ಸಿಟಿ(City) ಸೆಡಾನ್ ಕಾರು ಮಾದರಿಯನ್ನ ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎರಡನೇ ಹಂತದ ಬಿಎಸ್ 6 ನಿಯಮ ಅಳವಡಿಕೆಯೊಂದಿಗೆ ಹೊಸ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಾಗಿದೆ. ಹೊಸ ಕಾರಿನಲ್ಲಿ ಈ ಬಾರಿ ಡೀಸೆಲ್ ಆವೃತ್ತಿಯನ್ನ ಸ್ಥಗಿತಗೊಳಿಸಿದ್ದು, ಈ ಹಿಂದಿನಂತೆ ಪೆಟ್ರೋಲ್ ಮತ್ತು ಹೈಬ್ರಿಡ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ವೆರಿಯೆಂಟ್ ಮತ್ತು ಬೆಲೆ

2023ರ ಸಿಟಿ ಸೆಡಾನ್ ಕಾರು ಮಾದರಿಯು ಎಸ್ ವಿ, ವಿ, ವಿಎಕ್ಸ್ ಮತ್ತು ಜೆಡ್ಎಕ್ಸ್ ಎನ್ನುವ ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 11.49 ಲಕ್ಷ ಆರಂಭಿಕ ಬೆಲೆಯೊಂದಿಗೆ ಟಾಪ್ ಎಂಡ್ ಮಾದರಿಗೆ ರೂ. 20.39 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಗಾಗಿ ಈಗಾಗಲೇ ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭವಾಗಿದ್ದು, ಹೊಸ ಕಾರು ಮಾದರಿಯನ್ನು ಇದೇ ತಿಂಗಳು ವಿತರಣೆಗೊಳ್ಳಲಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್

ಕೇಂದ್ರ ಸರ್ಕಾರವು ಮುಂದಿನ ತಿಂಗಳು ಏಪ್ರಿಲ್ 1ರಿಂದ ಎರಡನೇ ಹಂತದ ಬಿಎಸ್ 6 ನಿಯಮ ಆರ್ ಡಿಇ(ರಿಯಲ್ ಡ್ರೈವಿಂಗ್ ಎಮಿಷನ್) ಜಾರಿಗೆ ತರುತ್ತಿದ್ದು, ಹೊಸ ನಿಯಮ ಜಾರಿಗೆ ಮುನ್ನ ಹೋಂಡಾ ಕಂಪನಿ ಸಿಟಿ ಸೆಡಾನ್ ಕಾರಿನ ಎಂಜಿನ್ ಆಯ್ಕೆಗಳನ್ನು ನವೀಕರಿಸಿದೆ. ಹೊಸ ನಿಯಮ ಜಾರಿಯಾಗುತ್ತಿರುವ ಪರಿಣಾಮ ಹೊಸ ಸಿಟಿ ಕಾರಿನಲ್ಲಿ 1.5 ಲೀಟರ್ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಆವೃತ್ತಿಯನ್ನ ಮಾತ್ರ ಪರಿಚಯಿಸಲಾಗಿದ್ದು, ಹೊಸ ನಿಯಮವು ಇಂಧನಗಳಲ್ಲಿ ಶೇ.20 ರಷ್ಟು ಎಥೆನಾಲ್ ಮಿಶ್ರಣಕ್ಕೆ ಪೂರಕವಾಗಿದೆ.

ಹೀಗಾಗಿ ಹೊಸ ನಿಯಮವನ್ನ ಡೀಸೆಲ್ ಕಾರುಗಳಲ್ಲಿ ಅಳವಡಿಕೆ ದುಬಾರಿಯಾಗುವ ಪರಿಣಾಮ ಸಿಟಿ ಕಾರಿನಲ್ಲಿ ಈ ಹಿಂದಿನ 1.5 ಲೀಟರ್ ಡೀಸೆಲ್ ಮಾದರಿಯನ್ನ ಸ್ಥಗಿತಗೊಳಿಸಲಾಗಿದ್ದು, ಇನ್ಮುಂದೆ ಹೊಸ ಕಾರು ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ. ಇದರಲ್ಲಿ ಪೆಟ್ರೋಲ್ ಮಾದರಿಯು 6 ಸ್ಪೀಡ್ ಮ್ಯಾನುವಲ್ ಮತ್ತು ಸಿಟಿವಿ ಗೇರ್ ಆಯ್ಕೆಯೊಂದಿಗೆ 121 ಹಾರ್ಸ್ ಪವರ್ ಉತ್ಪಾದಿಸುತ್ತದೆ.

ಹಾಗೆಯೇ ಹೊಸ ಸಿಟಿ ಕಾರಿನ ಹೈಬ್ರಿಡ್ ಮಾದರಿಯು ಆಟ್ಕಿನ್ಸನ್ ಹೈಬ್ರಿಡ್ ಎಂಜಿನ್ ನೊಂದಿಗೆ ಇಸಿವಿಟಿ ಗೇರ್ ಬಾಕ್ಸ್ ಹೊಂದಿದ್ದು, ಇದು 126 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 26.5 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಇನ್ನು ಹೊಸ ಸಿಟಿ ಕಾರಿನಲ್ಲಿ ಹೋಂಡಾ ಕಂಪನಿಯು ಇದೀಗ ವಿ ವೆರಿಯೆಂಟ್ ನಲ್ಲಿ ಎಂಟ್ರಿ ಲೆವಲ್ ಹೈಬ್ರಿಡ್ ವೆರಿಯೆಂಟ್ ಪರಿಚಯಿಸಿದ್ದು, ಈ ಹಿಂದೆ ಹೈಬ್ರಿಡ್ ಮಾದರಿಯನ್ನ ಹೈಎಂಡ್ ಮಾದರಿಯಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು.

ಎಡಿಎಎಸ್ ಸೇಫ್ಟಿ ಫೀಚರ್ಸ್ ಅಳವಡಿಕೆ

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಹೋಂಡಾ ಕಂಪನಿಯು ಈ ಬಾರಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳೊಂದಿಗೆ ಟಾಪ್ ಎಂಡ್ ವೆರಿಯೆಂಟ್ ಗಳಲ್ಲಿ ಅಡ್ವಾನ್ಸ್ ಡ್ರೈವಿಂಗ್ ಸಿಸ್ಟಂ ಸೌಲಭ್ಯವನ್ನು ಪರಿಚಯಿಸಿದೆ. ಜೊತೆಗೆ ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೈನ್ ಸೆನ್ಸಿಂಗ್ ವೈಪರ್, ಆಂಬಿಯೆಂಟ್ ಲೈಟಿಂಗ್, ವೈರ್ ಲೆಸ್ ಚಾರ್ಜರ್, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯಗಳನ್ನ ನೀಡಿದೆ. ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಾದ ಸ್ಕೋಡಾ ಸ್ಲಾವಿಯಾ, ಫೋಕ್ಸ್ ವ್ಯಾಗನ್ ವರ್ಟಸ್, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

Published On - 2:36 pm, Thu, 2 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ