AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honda Elevate: ಸೆಪ್ಟೆಂಬರ್ 4ಕ್ಕೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Honda Elevate: ಸೆಪ್ಟೆಂಬರ್ 4ಕ್ಕೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್
ಹೋಂಡಾ ಎಲಿವೇಟ್
Praveen Sannamani
Praveen Sannamani|

Updated on: Aug 31, 2023 | 6:41 PM

Share

ಪ್ರೀಮಿಯಂ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್(Honda Cars) ತನ್ನ ಹೊಸ ಎಲಿವೇಟ್(Elevate) ಕಂಪ್ಯಾಕ್ಟ್ ಎಸ್ ಯುವಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕಿಂಗ್ ಆರಂಭಿಸಿದ್ದು, ಹೊಸ ಕಾರನ್ನು ಮುಂದಿನ ತಿಂಗಳು ಸೆಪ್ಟೆಂಬರ್ 4 ರಂದು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಹೊಸ ಕಾರು ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್, ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆ ಹೊಂದಿದೆ.

ಹೊಸ ಎಲಿವೇಟ್ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ಎಸ್ ವಿ(SV), ವಿ(V), ವಿಎಕ್ಸ್(VX) ಮತ್ತು ಜೆಡ್ಎಕ್ಸ್(ZX) ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಜೆಡ್ಎಕ್ಸ್ ವೆರಿಯೆಂಟ್ ಹೆಚ್ಚಿನ ಮಟ್ಟದ ಫೀಚರ್ಸ್ ಗಳನ್ನು ಹೊಂದಿರಲಿದೆ. ಹೊಸ ಎಲಿವೇಟ್ ಕಾರು ಮುಂಭಾಗದಲ್ಲಿ ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಹೊಂದಿದ್ದು, ಹೊಸ ಕಾರಿನ ಒಳಭಾಗವು ಕೂಡಾ ಆಕರ್ಷಕ ವಿನ್ಯಾಸದೊಂದಿಗೆ 10.25 ಇಂಚಿನ ಇನ್ಪೊಟೈನ್ ಮೆಂಟ್ ಸಿಸ್ಟಂ, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇನ್ವಿಕ್ಟೊ ಎಂಪಿವಿ ಬಿಡುಗಡೆ

ಹಾಗೆಯೇ ಎಲಿವೇಟ್ ಕಾರು 4,312 ಎಂಎಂ ಉದ್ದ, 1,650 ಎಂಎಂ ಎತ್ತರ ಮತ್ತು 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರಲ್ಲಿ ನಾಲ್ಕು ಮೊನೊ ಟೋನ್ ಬಣ್ಣಗಳ ಆಯ್ಕೆ ಮತ್ತು ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಪರಿಚಯಿಸಲಾಗುತ್ತಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್ ಎಲಿವೇಟ್ ಕಾರು 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿರಲಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಹುದಾಗಿದ್ದು, ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಇನ್ನು ಹೋಂಡಾ ಕಂಪನಿಯು ಎಲಿವೇಟ್ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿದ್ದು, ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಿದೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದ್ದು, ಇದು ಕಾರಿಗೆ ಹೆಚ್ಚಿನ ಸುರಕ್ಷತೆ ಖಾತ್ರಿಪಡಿಸುತ್ತದೆ.

ಇದನ್ನೂ ಓದಿ: ರೀಬ್ಯಾಡ್ಜ್ ಟೊಯೊಟಾ ರೂಮಿಯಾನ್ ಎಂಪಿವಿ ಬಿಡುಗಡೆ

ಈ ಮೂಲಕ ಹೊಸ ಕಾರು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಕಾರುಗಳ ಬೆಲೆಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.40 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರು ಹೋಂಡಾ ಕಾರು ಮಾರಾಟ ಸುಧಾರಣೆಗೆ ಸಹಕಾರಿಯಾಗುವ ನೀರಿಕ್ಷೆಯಿದೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್