Honda Elevate: ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಅನಾವರಣ

ಹೋಂಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ.

Honda Elevate: ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಅನಾವರಣ
ಹೋಂಡಾ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಅನಾವರಣ
Follow us
Praveen Sannamani
|

Updated on:Jun 06, 2023 | 5:21 PM

ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್(Honda Cars) ಕಂಪನಿಯು ತನ್ನ ಬಹುನೀರಿಕ್ಷಿತ ಎಲಿವೇಟ್(Elevate) ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಪ್ರವೇಶಿಸಿದೆ.

ಭಾರತದಲ್ಲಿ ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳ ಪರಿಣಾಮ ಪ್ರಮುಖ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿರುವ ಹೋಂಡಾ ಕಾರ್ಸ್ ಕಂಪನಿಯು ಸಂಪೂರ್ಣ ಕಾರು ಮಾದರಿಗಳ ಮೇಲೆ ಗಮನಹರಿಸಿದ್ದು, ಇದೀಗ ಎಲಿವೇಟ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿಯನ್ನು ಹೊಸ ನೀರಿಕ್ಷೆಗಳೊಂದಿಗೆ ಅನಾವರಣಗೊಳಿಸಿದೆ.

Honda Elevate (4)

ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಕಾರು ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆ ಹೊಂದಿದ್ದು, ಅತ್ಯಾಧುನಿಕ ತಂತ್ರಜ್ಙಾನ ಮತ್ತು ಹಲವು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಅಭಿವೃದ್ದಿಗೊಂಡಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್, ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಇದನ್ನೂ ಓದಿ: ಟಾಟಾ ಪಂಚ್ ಗಿಂತ ಹ್ಯುಂಡೈ ಎಕ್ಸ್ ಟರ್ ಯಾಕೆ ಬೆಸ್ಟ್?

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಎಲಿವೇಟ್ ಕಾರು ಪ್ರೀಮಿಯಂ ಕಂಪ್ಯಾಕ್ಟ್ ವೈಶಿಷ್ಟ್ಯತೆಯನ್ನು ಹೊಂದಿದ್ದು, ಮುಂಭಾಗದಲ್ಲಿ ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಹಾಗೆಯೇ ಹೊಸ ಕಾರಿನ ಒಳಭಾಗದಲ್ಲಿ ಆಕರ್ಷಕ ವಿನ್ಯಾಸದೊಂದಿಗೆ 10.25 ಇಂಚಿನ ಇನ್ಪೊಟೈನ್ ಮೆಂಟ್ ಸಿಸ್ಟಂ, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ಜೋಡಣೆ ಮಾಡಲಾಗಿದೆ.

ಇದರೊಂದಿಗೆ ಹೊಸ ಕಾರು 4,312 ಎಂಎಂ ಉದ್ದ, 1,650 ಎಂಎಂ ಎತ್ತರ ಮತ್ತು 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಸದ್ಯಕ್ಕೆ ಇದು ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪ್ರಮುಖ ವೆರಿಯೆಂಟ್ ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

Honda Elevate (3)

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಎಲಿವೇಟ್ ಕಾರಿನಲ್ಲಿ ಹೋಂಡಾ ಕಂಪನಿಯು 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಆಯ್ಕೆ ಜೋಡಿಸಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 121 ಹಾರ್ಸ್ ಪವರ್ ಉತ್ಪಾದನೆ ಮಾಡುತ್ತದೆ. ಜೊತೆಗೆ ಹೊಸ ಕಾರಿನಲ್ಲಿ ಹೋಂಡಾ ಕಂಪನಿಯ ಸಿಟಿ ಸೆಡಾನ್ ಮಾದರಿಯಲ್ಲಿರುವಂತೆ ಹೈಬ್ರಿಡ್ ಎಂಜಿನ್ ಆಯ್ಕೆ ಸಹ ನೀಡುವ ಸುಳಿವು ನೀಡಿದ್ದು, ಇದು ಹೊಸ ಕಾರು ಬಿಡುಗಡೆಯಾದ ಕೆಲವು ತಿಂಗಳುಗಳ ನಂತರವಷ್ಟೇ ಬಿಡುಗಡೆ ಮಾಡಬಹುದಾಗಿದೆ.

ಇದನ್ನೂ ಓದಿ: 360 ಡಿಗ್ರಿ ಕ್ಯಾಮೆರಾ ಹೊಂದಿರುವ ಬಜೆಟ್ ಬೆಲೆಯ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು

ಹೊಸ ಕಾರುಗಳಲ್ಲಿ ಹೋಂಡಾ ಕಂಪನಿಯು ಇತ್ತೀಚೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಜೋಡಣೆ ಮಾಡುತ್ತಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ, ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಟಾಪ್ ಎಂಡ್ ಮಾದರಿಗಳಲ್ಲಿ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದೆ.

ಬೆಲೆ(ಎಕ್ಸ್ ಶೋರೂಂ ಪ್ರಕಾರ)

ಹೊಸ ಎಲಿವೇಟ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದೆ.

Honda Elevate (5)

ಬುಕಿಂಗ್ ಮತ್ತು ಬಿಡುಗಡೆ

ಎಲಿವೇಟ್ ಕಾರು ಮಾದರಿಯನ್ನು ಹೋಂಡಾ ಕಂಪನಿಯು ಮುಂಬರುವ ಜುಲೈ ಕೊನೆಯಲ್ಲಿ ಅಥವಾ ಅಗಸ್ಟ್ ಮಧ್ಯಂತರದಲ್ಲಿ ಬಿಡುಗಡೆ ಮಾಡಬಹುದಾಗಿದ್ದು, ಈ ತಿಂಗಳಾಂತ್ಯಕ್ಕೆ ಅಧಿಕೃತ ಬುಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

Published On - 5:21 pm, Tue, 6 June 23

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ