Honda Elevate: ಆಕರ್ಷಕ ಬೆಲೆಗೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಎಸ್ ಯುವಿ ಬಿಡುಗಡೆ

ಹೋಂಡಾ ಕಾರ್ಸ್ ಇಂಡಿಯಾ ತನ್ನ ಹೊಚ್ಚ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿಯನ್ನು ಬಿಡುಗಡೆ ಮಾಡಿದೆ.

Honda Elevate: ಆಕರ್ಷಕ ಬೆಲೆಗೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಎಸ್ ಯುವಿ ಬಿಡುಗಡೆ
ಹೋಂಡಾ ಎಲಿವೇಟ್ ಎಸ್ ಯುವಿ ಬಿಡುಗಡೆ
Praveen Sannamani

Updated on: Sep 04, 2023 | 2:01 PM

ಪ್ರೀಮಿಯಂ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್(Honda Cars) ತನ್ನ ಹೊಸ ಎಲಿವೇಟ್ (Elevate) ಕಂಪ್ಯಾಕ್ಟ್ ಎಸ್ ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಎಲಿವೇಟ್ ಕಾರು ಎಸ್ ವಿ(SV), ವಿ(V), ವಿಎಕ್ಸ್(VX) ಮತ್ತು ಜೆಡ್ಎಕ್ಸ್(ZX) ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಎಸ್ ವಿ ಮ್ಯಾನುವಲ್ ವೆರಿಯೆಂಟ್ ರೂ. 11 ಲಕ್ಷ ಆರಂಭಿಕ ಬೆಲೆ ಹೊಂದಿದ್ದರೆ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಜೆಡ್ಎಕ್ಸ್ ವೆರಿಯೆಂಟ್ ರೂ. 16 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಹೋಂಡಾ ಗ್ಲೋಬಲ್ ಸ್ಮಾಲ್ ಕಾರ್ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗಿದ್ದು, ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಬಾಕ್ಸಿ ಡಿಸೈನ್ ಪಡೆದುಕೊಂಡಿದೆ.

Honda Elevate (4)

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಎಲಿವೇಟ್ ಕಾರಿನ ಮುಂಭಾಗದಲ್ಲಿ ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಪ್ಲಾಸ್ಟಿಕ್ ಕ್ಲ್ಯಾಡಿಂಗ್ ಮತ್ತು ವ್ಹೀಲ್ ಆರ್ಚ್ ಗಳನ್ನು ಹೊಂದಿದ್ದು, ಹೊಸ ಕಾರಿನ ಒಳಭಾಗವು ಕೂಡಾ ಆಕರ್ಷಕವಾಗಿದೆ. ಕಾರಿನ ಒಳಭಾಗದಲ್ಲಿ ಆಕರ್ಷಕ ಡ್ಯಾಶ್ ಬೋರ್ಡ್ ನೊಂದಿಗೆ 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, 7 ಇಂಚಿನ ಸೆಮಿ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಹಾಗೆಯೇ ಎಲಿವೇಟ್ ಕಾರು 4,312 ಎಂಎಂ ಉದ್ದ, 1,790 ಎಂಎಂ ಅಗಲ, 1,650 ಎಂಎಂ ಎತ್ತರ, 2,650 ಎಂಎಂ ವ್ಹೀಲ್ ಬೆಸ್, 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 458 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಹೊಂದಿದ್ದು, ಇದರಲ್ಲಿ ನಾಲ್ಕು ಮೊನೊ ಟೋನ್ ಬಣ್ಣಗಳ ಆಯ್ಕೆ ಮತ್ತು ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಪರಿಚಯಿಸಲಾಗಿದೆ.

ಇದನ್ನೂ ಓದಿ: ಆಕರ್ಷಕ ಫೀಚರ್ಸ್ ಗಳೊಂದಿಗೆ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಅನಾವರಣ

Honda Elevate (6)

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಎಲಿವೇಟ್ ಕಾರಿನಲ್ಲಿ ಹೋಂಡಾ ಕಂಪನಿ 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಲಾಗಿದೆ. ಇದು ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ. ಜೊತೆಗೆ ಹೊಸ ಕಾರಿನಲ್ಲಿ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ನೀಡುವ ಸುಳಿವು ನೀಡಿದ್ದು, ಹೈಬ್ರಿಡ್ ಆವೃತ್ತಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

Honda Elevate (5)

ಸುರಕ್ಷಾ ಸೌಲಭ್ಯಗಳು

ಎಲಿವೇಟ್ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿದ್ದು, ಇದರಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಿದೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದ್ದು, ಎಡಿಎಎಸ್ ನಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್ ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳಿವೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

Honda Elevate (3)

ಈ ಮೂಲಕ ಹೊಸ ಕಾರು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದು ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್, ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Loading...
Unable to load recommendations.
Follow Us