AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂಡಾ ಎಲಿವೇಟ್ ಗೆ ಭರ್ಜರಿ ಬೇಡಿಕೆ: ಕೇವಲ 100 ದಿನಗಳಲ್ಲಿ ಹೊಸ ದಾಖಲೆ ನಿರ್ಮಾಣ!

ಹೋಂಡಾ ಕಾರ್ಸ್ ಇಂಡಿಯಾ ಕಂಪನಿ ತನ್ನ ಹೊಚ್ಚ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಹೋಂಡಾ ಎಲಿವೇಟ್ ಗೆ ಭರ್ಜರಿ ಬೇಡಿಕೆ: ಕೇವಲ 100 ದಿನಗಳಲ್ಲಿ ಹೊಸ ದಾಖಲೆ ನಿರ್ಮಾಣ!
ಹೋಂಡಾ ಎಲಿವೇಟ್
Follow us
Praveen Sannamani
|

Updated on: Dec 19, 2023 | 7:12 PM

ಪ್ರೀಮಿಯಂ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್(Honda Cars) ತನ್ನ ಹೊಸ ಎಲಿವೇಟ್ (Elevate) ಕಂಪ್ಯಾಕ್ಟ್ ಎಸ್ ಯುವಿ ಬಿಡುಗಡೆಯೊಂದಿಗೆ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ 100 ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಆಕರ್ಷಕ ಬೆಲೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೊಸ ಎಲಿವೇಟ್ ಕಾರು ಕೇವಲ 100 ದಿನಗಳ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಕಂಪ್ಯಾಕ್ಟ್ ಎಸ್ ಯುವಿ ವಿಭಾಗದ ಪ್ರಮುಖ ಕಾರುಗಳಿಗೆ ಉತ್ತಮ ಪೈಪೋಟಿ ನೀಡಿದೆ. ಎಲಿವೇಟ್ ಕಾರು ಸದ್ಯ ಎಸ್ ವಿ, ವಿ, ವಿಎಕ್ಸ್ ಮತ್ತು ಜೆಡ್ಎಕ್ಸ್ ಎನ್ನುವ ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ಟಾಪ್ ಎಂಡ್ ವೆರಿಯೆಂಟ್ ರೂ. 16.28 ಲಕ್ಷ ಬೆಲೆ ಹೊಂದಿದೆ.

ಹೋಂಡಾ ಗ್ಲೋಬಲ್ ಸ್ಮಾಲ್ ಕಾರ್ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗಿರುವ ಎಲಿವೇಟ್ ಕಾರು ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಬಾಕ್ಸಿ ಡಿಸೈನ್ ಪಡೆದುಕೊಂಡಿದ್ದು, ಇದು 4,312 ಎಂಎಂ ಉದ್ದ, 1,790 ಎಂಎಂ ಅಗಲ, 1,650 ಎಂಎಂ ಎತ್ತರ, 2,650 ಎಂಎಂ ವ್ಹೀಲ್ ಬೆಸ್, 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 458 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಹೊಂದಿದೆ.

ಇದನ್ನೂ ಓದಿ: ಭಾರತದ ಜನಪ್ರಿಯ ಎಸ್ ಯುವಿ ಕಾರು ಖರೀದಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನ ಪುತ್ರಿ

ಎಲಿವೇಟ್ ಕಾರಿನಲ್ಲಿ ಹೋಂಡಾ ಕಂಪನಿ 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಲಾಗಿದೆ. ಇದು ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಜೊತೆಗೆ ಹೊಸ ಕಾರಿನಲ್ಲಿ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ನೀಡುವ ಸುಳಿವು ನೀಡಿದ್ದು, ಹೈಬ್ರಿಡ್ ಆವೃತ್ತಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಇದರೊಂದಿಗೆ ಹೊಸ ಎಲಿವೇಟ್ ಕಾರಿನಲ್ಲಿ ಆಕರ್ಷಕವಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಪ್ಲಾಸ್ಟಿಕ್ ಕ್ಲ್ಯಾಡಿಂಗ್ ಮತ್ತು ವ್ಹೀಲ್ ಆರ್ಚ್ ಗಳನ್ನು ನೀಡಲಾಗಿದ್ದು, ಹೊಸ ಕಾರಿನ ಒಳಭಾಗವು ಕೂಡಾ ಗಮನಸೆಳೆಯುತ್ತದೆ. ಕಾರಿನ ಒಳಭಾಗದಲ್ಲಿ ಆಕರ್ಷಕವಾದ ಡ್ಯಾಶ್ ಬೋರ್ಡ್ ನೊಂದಿಗೆ 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, 7 ಇಂಚಿನ ಸೆಮಿ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ದುಬಾರಿ ಬೆಲೆಯ ಬಿಎಂಡಬ್ಲ್ಯು ಎಕ್ಸ್ಎಂ ಕಾರು ಖರೀದಿಸಿದ ಎಂಟಿಬಿ ನಾಗರಾಜ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದರಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳು ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಿದೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದ್ದು, ಎಡಿಎಎಸ್ ನಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್ ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳಿವೆ. ಈ ಮೂಲಕ ಹೊಸ ಕಾರು ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್ ಮತ್ತು ಟೊಯೊಟಾ ಹೈರೈಡರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.