ಹೋಂಡಾ ಎಲಿವೇಟ್ ವೆರಿಯೆಂಟ್ ಮತ್ತು ಫೀಚರ್ಸ್ ಗಳ ಮಾಹಿತಿ ಬಹಿರಂಗ

ಹೋಂಡಾ ಕಂಪನಿಯು ಶೀಘ್ರದಲ್ಲಿಯೇ ಹೊಚ್ಚ ಹೊಸ ಎಲಿವೇಟ್ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗವಾಗಿದೆ.

ಹೋಂಡಾ ಎಲಿವೇಟ್ ವೆರಿಯೆಂಟ್ ಮತ್ತು ಫೀಚರ್ಸ್ ಗಳ ಮಾಹಿತಿ ಬಹಿರಂಗ
ಹೋಂಡಾ ಎಲಿವೇಟ್ ವೆರಿಯೆಂಟ್ ಮತ್ತು ಫೀಚರ್ಸ್
Praveen Sannamani

Updated on: Jul 07, 2023 | 5:28 PM

ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಹೊಚ್ಚ ಹೊಸ ಕಾರು ಮಾದರಿಗಳತ್ತ ಗಮನಹರಿಸುತ್ತಿದ್ದು, ಇದೀಗ ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಎಲಿವೇಟ್ ಅನಾವರಣಗೊಳಿಸಿದೆ. ಹೊಸ ಕಾರನ್ನು ಹೋಂಡಾ ಕಂಪನಿಯು ಮುಂಬರುವ ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಎಲಿವೇಟ್ ಕಾರು ಖರೀದಿಗಾಗಿ ಹೋಂಡಾ ಕಂಪನಿಯು ರೂ. 25 ಸಾವಿರ ಮುಂಗಡದೊಂದಿಗೆ ಈಗಾಗಲೇ ಅಧಿಕೃತ ಬುಕಿಂಗ್ ಆರಂಭಿಸಿದ್ದು, ಹೊಸ ಕಾರು ಹಲವಾರು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಅಭಿವೃದ್ದಿಗೊಂಡಿದೆ. ಈ ಮೂಲಕ ಇದು ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್, ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Honda Elevate new (1)

ಎಲಿವೇಟ್ ವೆರಿಯೆಂಟ್ ಗಳು
ಎಲಿವೇಟ್ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ಎಸ್ ವಿ(SV), ವಿ(V), ವಿಎಕ್ಸ್(VX) ಮತ್ತು ಜೆಡ್ಎಕ್ಸ್(ZX) ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಜೆಡ್ಎಕ್ಸ್ ವೆರಿಯೆಂಟ್ ಹೆಚ್ಚಿನ ಮಟ್ಟದ ಫೀಚರ್ಸ್ ಗಳನ್ನು ಹೊಂದಿರಲಿದೆ. ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆ ಹೊಂದಿರುವ ಎಲಿವೇಟ್ ಕಾರು ಸಿಟಿ ಸೆಡಾನ್ ಮಾದರಿಯಲ್ಲಿರುವಂತೆ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ. ಹೊಸ ಕಾರು ಸದ್ಯಕ್ಕೆ ಪೆಟ್ರೋಲ್ ಆವೃತ್ತಿಯೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಮುಂಬರುವ ದಿನಗಳಲ್ಲಿ ಹೈಬ್ರಿಡ್ ಆವೃತ್ತಿಯಲ್ಲೂ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇನ್ವಿಕ್ಟೊ ಎಂಪಿವಿ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್
ಹೊಸ ಎಲಿವೇಟ್ ಕಾರು 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿರಲಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಹುದಾಗಿದೆ. ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ಹೊಂದಿರಲಿದ್ದು, ಇದು ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

Honda Elevate new (2)

ವಿನ್ಯಾಸ ಮತ್ತು ಫೀಚರ್ಸ್
ಕಂಪ್ಯಾಕ್ಟ್ ಎಸ್ ಯುವಿ ವೈಶಿಷ್ಟ್ಯತೆಯನ್ನು ಹೊಂದಿರುವ ಹೊಸ ಎಲಿವೇಟ್ ಕಾರು ಮುಂಭಾಗದಲ್ಲಿ ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಹೊಂದಿದ್ದು, ಹೊಸ ಕಾರಿನ ಒಳಭಾಗವು ಕೂಡಾ ಆಕರ್ಷಕ ವಿನ್ಯಾಸದೊಂದಿಗೆ 10.25 ಇಂಚಿನ ಇನ್ಪೊಟೈನ್ ಮೆಂಟ್ ಸಿಸ್ಟಂ, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಎಲಿವೇಟ್ ಉದ್ದಳತೆ
ಹೊಸ ಎಲಿವೇಟ್ ಕಾರು 4,312 ಎಂಎಂ ಉದ್ದ, 1,650 ಎಂಎಂ ಎತ್ತರ ಮತ್ತು 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರಲ್ಲಿ ನಾಲ್ಕು ಮೊನೊ ಟೋನ್ ಬಣ್ಣಗಳ ಆಯ್ಕೆ ಮತ್ತು ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಪರಿಚಯಿಸಲಾಗುತ್ತಿದೆ.

Honda Elevate new (3)

ಸುರಕ್ಷಾ ಸೌಲಭ್ಯಗಳು
ಹೋಂಡಾ ಕಂಪನಿಯು ಎಲಿವೇಟ್ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿದ್ದು, ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಿದೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದ್ದು, ಇದು ಕಾರಿಗೆ ಹೆಚ್ಚಿನ ಸುರಕ್ಷತೆ ಖಾತ್ರಿಪಡಿಸುತ್ತದೆ.

ಇದನ್ನೂ ಓದಿ: ವಿನೂತನ ಫೀಚರ್ಸ್ ಗಳೊಂದಿಗೆ ಕಿಯಾ ಸೆಲ್ಟೊಸ್ ಫೇಸ್ ಲಿಫ್ಟ್ ಅನಾವರಣ

ಅಂದಾಜು ಬೆಲೆ(ಎಕ್ಸ್ ಶೋರೂಂ ಪ್ರಕಾರ)
ಕಾರು ಮಾರುಕಟ್ಟೆಯಲ್ಲಿ ಸದ್ಯ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಮಾದರಿಗಳು ರೂ. 11 ಲಕ್ಷದಿಂದ ರೂ. 19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಎಲಿವೇಟ್ ಕಾರು ಕೂಡಾ ಪ್ರತಿಸ್ಪರ್ಧಿ ಕಾರುಗಳ ಬೆಲೆಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.40 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದೆ.

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Loading...
Unable to load recommendations.
Follow Us