ಹೋಂಡಾ ಎಲಿವೇಟ್ Vs ಸಿಟ್ರನ್ ಸಿ3 ಏರ್‌ಕ್ರಾಸ್: ಹೊಸ ಎಸ್ ಯುವಿಗಳಲ್ಲಿ ಯಾವುದು ಖರೀದಿಗೆ ಬೆಸ್ಟ್?

ಹೊಸ ಕಾರುಗಳ ಮಾರಾಟದಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಆವೃತ್ತಿಗಳ ಮಾರಾಟವು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕಳೆದ ಕೆಲ ವರ್ಷಗಳಲ್ಲಿ ಈ ವಿಭಾಗದಲ್ಲಿ ಹಲವಾರು ಹೊಸ ಕಾರುಗಳು ಲಗ್ಗೆಯಿಟ್ಟಿವೆ. ಇತ್ತೀಚೆಗೆ ಹೋಂಡಾ ಕಂಪನಿಯಿಂದ ಎಲಿವೇಟ್ ಮತ್ತು ಸಿಟ್ರನ್ ಕಂಪನಿಯಿಂದ ಸಿ3 ಏರ್‌ಕ್ರಾಸ್ ಕಾರುಗಳು ಬಿಡುಗಡೆಯಾಗಿದ್ದು, ಬೆಲೆ ಮತ್ತು ತಾಂತ್ರಿಕ ವಿಚಾರವಾಗಿ ಈ ಎರಡು ಹೊಸ ಕಾರುಗಳು ಗ್ರಾಹಕರ ಗಮನಸೆಳೆಯುತ್ತಿವೆ. ಹಾಗಾದ್ರೆ ಹೊಸ ಕಾರುಗಳಲ್ಲಿ ಏನೆಲ್ಲಾ ವಿಶೇಷತೆಗಳಿವೆ? ಖರೀದಿಗೆ ಯಾವ ಕಾರು ಬೆಸ್ಟ್? ಈ ಎಲ್ಲಾ ಮಾಹಿತಿ ಇಲ್ಲಿದೆ.

ಹೋಂಡಾ ಎಲಿವೇಟ್ Vs ಸಿಟ್ರನ್ ಸಿ3 ಏರ್‌ಕ್ರಾಸ್: ಹೊಸ ಎಸ್ ಯುವಿಗಳಲ್ಲಿ ಯಾವುದು ಖರೀದಿಗೆ ಬೆಸ್ಟ್?
ಹೋಂಡಾ ಎಲಿವೇಟ್ Vs ಸಿಟ್ರನ್ ಸಿ3 ಏರ್‌ಕ್ರಾಸ್
Follow us
Praveen Sannamani
|

Updated on: Sep 21, 2023 | 8:05 PM

ಹೊಸ ಕಾರುಗಳ ಮಾರಾಟದಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಆವೃತ್ತಿಗಳ ಮಾರಾಟವು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕಳೆದ ಕೆಲ ವರ್ಷಗಳಲ್ಲಿ ಈ ವಿಭಾಗದಲ್ಲಿ ಹಲವಾರು ಹೊಸ ಕಾರುಗಳು ಲಗ್ಗೆಯಿಟ್ಟಿವೆ. ಇತ್ತೀಚೆಗೆ ಹೋಂಡಾ ಕಂಪನಿಯಿಂದ ಎಲಿವೇಟ್ ಮತ್ತು ಸಿಟ್ರನ್ ಕಂಪನಿಯಿಂದ ಸಿ3 ಏರ್‌ಕ್ರಾಸ್ ಕಾರುಗಳು ಬಿಡುಗಡೆಯಾಗಿದ್ದು, ಬೆಲೆ ಮತ್ತು ತಾಂತ್ರಿಕ ವಿಚಾರವಾಗಿ ಈ ಎರಡು ಹೊಸ ಕಾರುಗಳು ಗ್ರಾಹಕರ ಗಮನಸೆಳೆಯುತ್ತಿವೆ. ಹಾಗಾದ್ರೆ ಹೊಸ ಕಾರುಗಳಲ್ಲಿ ಏನೆಲ್ಲಾ ವಿಶೇಷತೆಗಳಿವೆ? ಖರೀದಿಗೆ ಯಾವ ಕಾರು ಬೆಸ್ಟ್? ಈ ಎಲ್ಲಾ ಮಾಹಿತಿ ಇಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಆವೃತ್ತಿಗಳ ಮಾರಾಟವು ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ ಕೆಲ ವರ್ಷಗಳಲ್ಲಿ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಹಲವಾರು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇತ್ತೀಚೆಗೆ ಹೋಂಡಾ ಕಂಪನಿಯಿಂದ ಎಲಿವೇಟ್ ಮತ್ತು ಸಿಟ್ರನ್ ಕಂಪನಿಯಿಂದ ಸಿ3 ಏರ್‌ಕ್ರಾಸ್ ಕಾರುಗಳು ಬಿಡುಗಡೆಯಾಗಿವೆ. ಬೆಲೆ ಮತ್ತು ತಾಂತ್ರಿಕ ವಿಚಾರವಾಗಿ ಈ ಎರಡು ಹೊಸ ಕಾರುಗಳು ಗ್ರಾಹಕರ ಗಮನಸೆಳೆಯುತ್ತಿದ್ದು, ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿವೆ. ಹಾಗಾದ್ರೆ ಹೊಸ ಕಾರುಗಳಲ್ಲಿ ಏನೆಲ್ಲಾ ವಿಶೇಷತೆಗಳಿವೆ? ಖರೀದಿಗೆ ಯಾವ ಕಾರು ಬೆಸ್ಟ್? ಈ ಎಲ್ಲಾ ಮಾಹಿತಿ ಇಲ್ಲಿದೆ.

Car comparison

ಪ್ರೀಮಿಯಂ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್ ತನ್ನ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿಯನ್ನು ಕಳೆದ ವಾರವಷ್ಟೇ ಬಿಡುಗಡೆ ಮಾಡಿದೆ. ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು ನಾಲ್ಕು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ. ಹೊಸ ಕಾರು SV, V, VX ಮತ್ತು ZX ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಎಸ್ ವಿ ಮ್ಯಾನುವಲ್ ವೆರಿಯೆಂಟ್ ರೂ. 11 ಲಕ್ಷ ಆರಂಭಿಕ ಬೆಲೆ ಹೊಂದಿದ್ದರೆ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಜೆಡ್ಎಕ್ಸ್ ವೆರಿಯೆಂಟ್ ರೂ. 16 ಲಕ್ಷ ಬೆಲೆ ಹೊಂದಿದೆ.

ಹೋಂಡಾ ಎಲಿವೇಟ್ ಕಾರಿಗೆ ಪೈಪೋಟಿಯಾಗಿ ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ ಕೂಡಾ ಆಕರ್ಷಕ ಬೆಲೆಗೆ ಬಿಡುಗಡೆಯಾಗಿದೆ. ಹೊಸ ಕಾರು ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಸದ್ಯ ಆರಂಭಿಕ ಮಾದರಿಯ ಬೆಲೆಯನ್ನು ಮಾತ್ರ ಬಹಿರಂಗಪಡಿಸಲಾಗಿದ್ದು, ಶೀಘ್ರದಲ್ಲಿಯೇ ಟಾಪ್ ಎಂಡ್ ಮಾದರಿಗಳ ಬೆಲೆ ಮಾಹಿತಿ ಬಹಿರಂಗಪಡಿಸುವುದಾಗಿ ಸಿಟ್ರನ್ ಕಂಪನಿ ಹೇಳಿಕೊಂಡಿದೆ. ಮಾಹಿತಿಗಳ ಪ್ರಕಾರ ಸಿ3 ಏರ್‌ಕ್ರಾಸ್ ಕಾರಿನ ಟಾಪ್ ಎಂಡ್ ಮಾದರಿಯು ರೂ. 15 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಇದು 5 ಸೀಟರ್ ಮತ್ತು 7 ಸೀಟರ್ ಆಯ್ಕೆ ಹೊಂದಿದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

Car comparison (1)

ಇನ್ನು ಹೋಂಡಾ ಎಲಿವೇಟ್ ಕಾರು ಹೋಂಡಾ ಗ್ಲೋಬಲ್ ಸ್ಮಾಲ್ ಕಾರ್ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗಿದ್ದು, ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆಯೊಂದಿಗೆ ಬಾಕ್ಸಿ ಡಿಸೈನ್ ಹೊಂದಿದೆ. ಈ ಮೂಲಕ ಹೊಸ ಎಲಿವೇಟ್ ಕಾರು ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಪ್ಲಾಸ್ಟಿಕ್ ಕ್ಲ್ಯಾಡಿಂಗ್ ಮತ್ತು ವ್ಹೀಲ್ ಆರ್ಚ್ ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನ ಒಳಭಾಗವು ಕೂಡಾ ಆಕರ್ಷಕವಾಗಿದ್ದು, ಕಾರಿನ ಒಳಭಾಗದಲ್ಲಿ ಪ್ರೀಮಿಯಂ ಆಗಿರುವ ಡ್ಯಾಶ್ ಬೋರ್ಡ್, 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, 7 ಇಂಚಿನ ಸೆಮಿ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಹೊಸ ಸಿ3 ಏರ್‌ಕ್ರಾಸ್ ಕಾರು ಮಾದರಿಯು ಸಹ ಪ್ರತಿಸ್ಪರ್ಧಿ ಮಾದರಿಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ. ಅತ್ಯಾಧುನಿಕ ವಿನ್ಯಾಸ ಭಾಷೆ ಹೊಂದಿರುವ ಸಿ3 ಏರ್‌ಕ್ರಾಸ್ ಕಾರಿನಲ್ಲಿ ಸಿಗ್ನೇಚರ್ ಗ್ರಿಲ್ ಜೊತೆ ವಿಭಜಿತ ಹೆಡ್‌ಲೈಟ್ ಗಳು, ಎಲ್ಇಡಿ ಡಿಆರ್ ಎಲ್, ಕಾರಿನ ಒಳಭಾಗದಲ್ಲಿ 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‌ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿವರ್ಸ್ ಕ್ಯಾಮೆರಾ, ರಿಯರ್ ಡಿಫಾಗರ್ ಮತ್ತು ಯುಎಸ್ ಬಿ ಚಾರ್ಜಿಂಗ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ ಸೇರಿದಂತೆ ಹಲವು ಕಾರ್ ಟೆಕ್ ಕನೆಕ್ಟೆ ಸೌಲಭ್ಯಗಳಿವೆ.

Car comparison (3)

ಹೊಸ ಕಾರುಗಳ ಎಂಜಿನ್ ಆಯ್ಕೆ ಕುರಿತು ಹೇಳುವುದಾದರೇ, ಹೋಂಡಾ ಎಲಿವೇಟ್ ಕಾರಿನಲ್ಲಿ 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಲಾಗಿದ್ದು, ಇದು ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಇದರೊಂದಿಗೆ ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಸಿಟ್ರನ್ ಕಂಪನಿ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ. ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಸಹ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ರೂ. 10 ಲಕ್ಷ ಬಜೆಟ್ ಒಳಗಿನ ಕಾರುಗಳಿವು!

ಹೊಸ ಕಾರುಗಳಲ್ಲಿ ಸುರಕ್ಷತೆ ಕುರಿತು ಹೇಳುವುದಾದರೇ, ಹೋಂಡಾ ಎಲಿವೇಟ್ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಲಾಗಿದೆ. ಎಲಿವೇಟ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯಗಳಿವೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಇದರಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್ ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳಿವೆ. ಆದರೆ ಸಿ3 ಏರ್‌ಕ್ರಾಸ್ ಕಾರಿನಲ್ಲಿ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಇಎಸ್ ಸಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳು ಮಾತ್ರ ನೀಡಲಾಗಿದೆ.

Car comparison (2)

ಹೊಸ ಕಾರುಗಳ ಕುರಿತಾದ ಎಲ್ಲಾ ಮಾಹಿತಿಗಳನ್ನು ಅರಿತ ನಂತರ ಯಾವುದು ಬೆಸ್ಟ್? ಎನ್ನುವ ಪ್ರಶ್ನೆಗೆ ಉತ್ತರ ನೀಡುವುದಾರೇ ಈ ಎರಡೂ ಹೊಸ ಕಾರುಗಳಲ್ಲಿ ಹೋಂಡಾ ಎಲಿವೇಟ್ ವಿವಿಧ ವಿಭಾಗಗಳಲ್ಲಿ ಸಿಟ್ರನ್ ಸಿ3 ಏರ್‌ಕ್ರಾಸ್ ಕಾರಿಗಿಂತಲೂ ಸಾಕಷ್ಟು ಉತ್ತಮ ತಾಂತ್ರಿಕ ಅಂಶಗಳನ್ನು ಹೊಂದಿದೆ ಎನ್ನಬಹುದು. ಆದರೆ ಸಿಟ್ರನ್ ಸಿ3 ಏರ್ ಕ್ರಾಸ್ ಕಾರು ಹಲವಾರು ಪ್ರಾಯೋಗಿಕ ಅಂಶಗಳನ್ನು ಹೊಂದಿರುವುದು ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಬಹುದಾಗಿದೆ. ಹೊಸ ಕಾರು 5 ಸೀಟರ್ ಮತ್ತು 7 ಸೀಟರ್ ಆಯ್ಕೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆಯಲ್ಲಿ ಆರಂಭಿಕ ಮಾದರಿಯನ್ನು ಹೊಂದಿದೆ. ಹೀಗಾಗಿ ಗ್ರಾಹಕರಿಗೆ ಈ ಎರಡೂ ಹೊಸ ಕಾರುಗಳು ವಿವಿಧ ವಿಭಾಗದಲ್ಲಿ ತಮ್ಮದೆ ಆದ ಬೇಡಿಕೆ ಸೃಷ್ಠಿಸುವ ನೀರಿಕ್ಷೆಯಲ್ಲಿವೆ ಎನ್ನಬಹುದು.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ