Hyundai Alcazar: ಐಷಾರಾಮಿ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾದ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್

ಹ್ಯುಂಡೈ ಇಂಡಿಯಾ ತನ್ನ ನವೀಕೃತ ಅಲ್ಕಾಜರ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಸುಧಾರಿತ ಪ್ರೇರಿತ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಾಗಿದೆ.

Hyundai Alcazar: ಐಷಾರಾಮಿ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾದ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್
ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್
Follow us
Praveen Sannamani
|

Updated on:Sep 09, 2024 | 4:47 PM

ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಹ್ಯುಂಡೈ ಇಂಡಿಯಾ (Hyundai India) ಕಂಪನಿಯು ಹೊಸ ಕ್ರೆಟಾ ನಂತರ ಇದೀಗ ಅಲ್ಕಾಜರ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹೊಸ ಕಾರು ಎಕ್ಸಿಕ್ಯೂಟಿವ್, ಪ್ರೇಸ್ಟಿಜ್, ಪ್ಲಾಟಿನಿಯಂ ಮತ್ತು ಸಿಗ್ನೆಚರ್ ಎನ್ನುವ ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 14.99 ಲಕ್ಷ ಬೆಲೆ ಹೊಂದಿದೆ.

ಅಲ್ಕಾಜರ್ ಫೇಸ್‌ಲಿಫ್ಟ್ ಈ ಹಿಂದಿನಂತೆಯೇ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಕ್ರೆಟಾ ಫೇಸ್‌ಲಿಫ್ಟ್ ನಲ್ಲಿರುವಂತೆ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಮತ್ತು ಸುಧಾರಿತ ಸುರಕ್ಷಾ ಸೌಲಭ್ಯಗಳನ್ನು ನೀಡಿರುವುದು ಈ ಬಾರಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.

Hyundai Alcazar (2)

ಹೊಸ ಅಲ್ಕಾಜರ್ ಕಾರು ಈ ಹಿಂದಿಗಿಂತಲೂ ಹೆಚ್ಚು ಸ್ಪೋರ್ಟಿ ವಿನ್ಯಾಸ ಹೊಂದಿದ್ದು, ಇದರಲ್ಲಿ ಕ್ವಾಡ್ ಬೀಮ್ ಎಲ್ಇಡಿ ಹೆಡ್ ಲ್ಯಾಂಪ್ಸ್ ಜೊತೆ ಹೆಚ್ ಆಕಾರದ ಎಲ್ಇಡಿ ಡೇಲೈಟ್ ರನ್ನಿಂಗ್ ಲ್ಯಾಂಪ್ಸ್, ಮರುವಿನ್ಯಾಸಗೊಳಿಸಲಾದ ಬಂಪರ್, ಸ್ಕೀಡ್ ಪ್ಲೇಟ್, ಡಾರ್ಕ್ ಕ್ರೊಮ್ ಗ್ರೀಲ್, 18 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಸ್, ಫಂಕ್ಷನಲ್ ರೂಫ್ ರೈಲ್ಸ್ ಮತ್ತು ದೊಡ್ಡದಾಗಿರುವ ಟೈಲ್ ಲ್ಯಾಂಪ್ಸ್ ನೀಡಲಾಗಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಬದಲಾವಣೆಗಳನ್ನು ತರಲಾಗಿದ್ದು, ನೊಬಲ್ ಬ್ರೌನ್ ಮತ್ತು ಹೆಜ್ ನೆವಿ ಬಣ್ಣ ಡ್ಯುಯಲ್ ಟೋನ್ ಇಂಟಿರಿಯರ್ ಐಷಾರಾಮಿ ಕಾರು ಚಾಲನೆ ಅನುಭವ ನೀಡುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಕ್ರೆಟಾದಲ್ಲಿರುವಂತೆ 10.25 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ಟುಮೆಂಟ್ ಸೇರಿದಂತೆ ವೆಂಟಿಲೆಷನ್ ಹೊಂದಿರುವ ಎರಡನೇ ಸಾಲಿನ ಆಸನಗಳು, ವಾಯ್ಸ್ ಆಕ್ಟಿವೆಟೆಡ್ ಪನೊರಮಿಕ್ ಸನ್ ರೂಫ್, ವೈರ್ ಲೆಸ್ ಚಾರ್ಜಿಂಗ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ರೈನ್ ಸೆನ್ಸಿಂಗ್ ವೈಪರ್ಸ್ ಮತ್ತು ಬಾಷ್ ಸೌಂಡ್ ಸಿಸ್ಟಂ ನೀಡಲಾಗಿದೆ.

Hyundai Alcazar (1)

ಹ್ಯುಂಡೈ ಕಂಪನಿಯು ಹೊಸ ಕಾರಿನಲ್ಲಿ ಈ ಹಿಂದಿನಂತೆ 1.5 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದರಲ್ಲಿ ಪೆಟ್ರೋಲ್ ಎಂಜಿನ್ 160 ಹಾರ್ಸ್ ಪವರ್ ಮತ್ತು 253 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಡೀಸೆಲ್ ಮಾದರಿಯು 116 ಹಾರ್ಸ್ ಪವರ್ ಮತ್ತು 250 ಎನ್ಎಂ ಟಾರ್ಕ್ ನೊಂದಿಗೆ ಪ್ರತಿ ಲೀಟರ್ ಗೆ 17 ರಿಂದ 20.4 ಕಿ.ಮೀ ಮೈಲೇಜ್ ನೀಡುತ್ತವೆ. ಇವು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು ಹೆಚ್ಚಿನ ಪರ್ಫಾಮೆನ್ಸ್ ಗಾಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳನ್ನು ಹೊಂದಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಸುರಕ್ಷತೆಗಾಗಿ ಹೊಸ ಅಲ್ಕಾಜರ್ ನಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಲಾಗಿದ್ದು, ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್ ಗಳು, ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್ಮೆಂಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ಸ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಡಿಜಿಟಲ್ ಕೀ, ಹಿಲ್ ಡಿಸೆಂಟ್ ಕಂಟ್ರೋಲ್ ಸೌಲಭ್ಯಗಳನ್ನು ನೀಡಲಾಗಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಗಳಲ್ಲಿ ಸಂಭಾವ್ಯ ಅಪಘಾತಗಳನ್ನು ತಡೆಯಬಲ್ಲ ಲೆವಲ್ 2 ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಹೊಸ ಎಡಿಎಎಸ್ ಪ್ಯಾಕೇಜ್ ನಲ್ಲಿ ಸ್ಮಾರ್ಟ್ ಕ್ರೂಸ್ ಕಂಟ್ರೋಲ್, ಸರೌಂಡ್ ವ್ಯೂ ಮಾನಿಟರ್, ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್, ಫಾರ್ವಡ್ ಕೂಲಿಷನ್ ವಾರ್ನಿಂಗ್, ಅವಾಯ್ಡ್ನೆಸ್ ಅಸಿಸ್ಟ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

Published On - 4:41 pm, Mon, 9 September 24

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ