ಅತ್ಯುತ್ತಮ ಫೀಚರ್ಸ್ ಪ್ರೇರಿತ ಕ್ರೆಟಾ ಇವಿ ಬಿಡುಗಡೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಭಾರತದಲ್ಲಿ ವಿವಿಧ ಕಾರು ಮಾದರಿಗಳ ಮೂಲಕ ಉತ್ತಮ ಬೇಡಿಕೆ ಕಾಯ್ದುಕೊಂಡಿರುವ ಹ್ಯುಂಡೈ ಇಂಡಿಯಾ ಕಂಪನಿಯು ಎಲೆಕ್ಟ್ರಿಕ್ ಕಾರು ವಿಭಾಗದಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ. ಕೊನಾ ಎಲೆಕ್ಟ್ರಿಕ್ ನಂತರ ಇದೀಗ ಕ್ರೆಟಾ ಇವಿ ಮಾದರಿಯನ್ನು ಪರಿಚಯಿಸುವ ಸುಳಿವು ನೀಡಿದ್ದು, ಹೊಸ ಇವಿ ಕಾರಿನೊಂದಿಗೆ ಮಧ್ಯಮ ಕ್ರಮಾಂಕದ ಇವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಅತ್ಯುತ್ತಮ ಫೀಚರ್ಸ್ ಪ್ರೇರಿತ ಕ್ರೆಟಾ ಇವಿ ಬಿಡುಗಡೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ
ಹ್ಯುಂಡೈ ಕ್ರೆಟಾ
Follow us
Praveen Sannamani
|

Updated on: Mar 25, 2024 | 10:12 PM

ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚುತ್ತಿರುವ ಬೇಡಿಕೆಯಿಂದ ಇತ್ತೀಚೆಗೆ ಹಲವು ಹೊಸ ಇವಿ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಇದಕ್ಕಾಗಿ ಹ್ಯುಂಡೈ ಇಂಡಿಯಾ (Hyundai India) ಕಂಪನಿಯು ಸಹ ಬೃಹತ್ ಯೋಜನೆ ರೂಪಿಸುತ್ತಿದ್ದು, ಕ್ರೆಟಾ ಎಲೆಕ್ಟ್ರಿಕ್ (Creta Electric) ಆವೃತ್ತಿಯನ್ನು ಪರಿಚಯಿಸಲು ಸಿದ್ದವಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಕೊನಾ ಎಲೆಕ್ಟ್ರಿಕ್ ಮಾದರಿಯನ್ನು ಕೈಬಿಡಲು ನಿರ್ಧರಿಸಿರುವ ಹ್ಯುಂಡೈ ಕಂಪನಿಯು ಕ್ರೆಟಾ ಇವಿ ಮೂಲಕ ಪ್ರತಿಸ್ಪರ್ಧಿ ಇವಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ, ಮಹೀಂದ್ರಾ ಎಕ್ಸ್ ಯುವಿ400, ಎಂಜಿ ಜೆಡ್ಎಸ್ ಇವಿ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೇ ನಿಟ್ಟಿನಲ್ಲಿ ಹ್ಯುಂಡೈ ಕ್ರೆಟಾ ಇವಿ ಕೂಡಾ ವಿಶೇಷ ಫೀಚರ್ಸ್ ಗಳೊಂದಿಗೆ ಗ್ರಾಹಕರನ್ನು ಸೆಳೆಯುವ ಸಿದ್ದತೆಯಲ್ಲಿದೆ. ಸದ್ಯ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟಗೊಳ್ಳುತ್ತಿರುವ ಕ್ರೆಟಾ ಕಾರು ಹಲವಾರು ಐಷಾರಾಮಿ ಫೀಚರ್ಸ್ ಗಳೊಂದಿಗೆ ಮಾರಾಟವಾಗುತ್ತಿದ್ದು, ಎಲೆಕ್ಟ್ರಿಕ್ ವರ್ಷನ್ ಕೂಡಾ ಅತ್ಯುತ್ತಮ ಫೀಚರ್ಸ್ ಗಳನ್ನು ಪಡೆದುಕೊಳ್ಳಲಿದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ನೊಂದಿಗೆ ಎಂಟ್ರಿ ನೀಡಲಿವೆ ಹೊಸ ಸ್ಕೋಡಾ ಕುಶಾಕ್ ಮತ್ತು ಸ್ಲಾವಿಯಾ

ಹೊಸ ಕ್ರೆಟಾ ಇವಿ ಆವೃತ್ತಿಗಾಗಿ ಹ್ಯುಂಡೈ ಇಂಡಿಯಾ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಪ್ಲ್ಯಾಟ್ ಫಾರ್ಮ್ ನಿರ್ಮಿಸುತ್ತಿದ್ದು, ಇದು ಸಾಮಾನ್ಯ ಕ್ರೆಟಾ ಹೋಲಿಕೆ ಪಡೆದುಕೊಂಡಿದ್ದರೂ ಫೀಚರ್ಸ್ ಗಳಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಳ್ಳಲಿದೆ. ಹೊಸ ಕಾರು 4330 ಎಂಎಂ ಉದ್ದಳತೆಯೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರಲಿದ್ದು, ಇದರಲ್ಲಿ 45 ಕೆವಿಹೆಚ್ ಬ್ಯಾಟರಿ ಪ್ಯಾಕ್ ನೀಡಬಹುದಾಗಿದೆ.

45 ಕೆವಿಹೆಚ್ ಬ್ಯಾಟರಿ ಪ್ಯಾಕ್ ಮೂಲಕ ಕ್ರೆಟಾ ಇವಿ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಪ್ರತಿ ಚಾರ್ಜ್ ಗೆ 450 ಕಿ.ಮೀ ಮೈಲೇಜ್ ನೀಡಬಹುದಾಗಿದೆ. ಜೊತೆಗೆ ಹೊಸ ಇವಿ ಕಾರು ಪರ್ಫಾಮೆನ್ಸ್ ನಲ್ಲೂ ಗಮನ ಸೆಳೆಯಲಿದ್ದು, ಇದು 138 ಹಾರ್ಸ್ ಪವರ್ ಮತ್ತು 255 ಎನ್ಎಂ ಟಾರ್ಕ್ ನೊಂದಿಗೆ ಫೀಚರ್ಸ್ ನಲ್ಲಿ ಗ್ರಾಹಕರನ್ನು ಸೆಳೆಯಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್ ಗಳಿರಲಿದ್ದು, ಇವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿವೆ.

ಇದನ್ನೂ ಓದಿ: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳಿವು..

ಇನ್ನು ಹೊಸ ಕ್ರೆಟಾ ಇವಿ ಕಾರಿನಲ್ಲಿ ಐಯಾನಿಕ್ 5 ಮಾದರಿಯಿಂದ ಎರವಲು ಪಡೆಯಲಾದ ಕೆಲವು ಫೀಚರ್ಸ್ ನೀಡಬಹುದಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎಡಿಎಎಸ್ ಸೇರಿದಂತೆ 360 ಡಿಗ್ರಿ ಕ್ಯಾಮೆರಾ, 6 ಏರ್ ಬ್ಯಾಗ್ ಗಳು, ಪನೊರಮಿಕ್ ಸನ್ ರೂಫ್, ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಸೀಟುಗಳು ಮತ್ತು ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳಿರಲಿವೆ. ಈ ಮೂಲಕ ಇದು ರೂ. 18 ಲಕ್ಷದಿಂದ ರೂ. 23 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಮುಂಬರುವ 2025ರ ಆರಂಭದಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಬಹುದಾಗಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ