Hyundai Creta: ಭರ್ಜರಿ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಜ್ಜಾದ ಹೊಸ ಹ್ಯುಂಡೈ ಕ್ರೆಟಾ

|

Updated on: Dec 05, 2023 | 6:17 PM

ಹ್ಯುಂಡೈ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಹೊಸ ಕ್ರೆಟಾ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಭರ್ಜರಿ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

Hyundai Creta: ಭರ್ಜರಿ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಜ್ಜಾದ ಹೊಸ ಹ್ಯುಂಡೈ ಕ್ರೆಟಾ
ಹೊಸ ಹ್ಯುಂಡೈ ಕ್ರೆಟಾ
Follow us on

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಹ್ಯುಂಡೈ ಕ್ರೆಟಾ (Hyundai Creta) ಮಾದರಿಯು ಶೀಘ್ರದಲ್ಲಿಯೇ ಹೊಸ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿದ್ದು, ಹೊಸ ಕಾರು ಮಾದರಿಯು ಬಲಿಷ್ಠ ಎಂಜಿನ್ ಆಯ್ಕೆ ಸೇರಿದಂತೆ ಪ್ರೀಮಿಯಂ ಫೀಚರ್ಸ್ ಮತ್ತು ಹಲವಾರು ಹೊಸ ಸೇಫ್ಟಿ ಫೀಚರ್ಸ್ ಪಡೆದುಕೊಂಡಿರಲಿದೆ.

ಕ್ರೆಟಾ ಹೊಸ ಆವೃತ್ತಿಯ ಬಿಡುಗಡೆಗಾಗಿ ಮುಂದಿನ ತಿಂಗಳು ಜನವರಿ 16 ಕ್ಕೆ ದಿನಾಂಕ ನಿಗದಿಪಡಿಸಿರುವ ಹ್ಯುಂಡೈ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ತವಕದಲ್ಲಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಹಲವು ಫೀಚರ್ಸ್ ಗಳನ್ನು ಹೊಂದಿರಲಿದೆ.

ಹೊಸ ಕ್ರೆಟಾ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಶಾರ್ಪ್ ಆದ ವಿನ್ಯಾಸ ಭಾಷೆ ಹೊಂದಿರಲಿದ್ದು, ಇದರಲ್ಲಿ ಜನಪ್ರಿಯ ಪ್ಯಾಲಿಸೆಡ್ ಎಸ್ ಯುವಿ ಮಾದರಿಯಿಂದ ಎರವಲು ಪಡೆಯಲಾದ ಫ್ರಂಟ್ ಗ್ರಿಲ್ ಮತ್ತು ಬಂಪರ್, ವಿಭಜಿತ ವಿನ್ಯಾಸದ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್, ಹೊಸ ವಿನ್ಯಾಸದ ಅಲಾಯ್ ವ್ಹೀಲ್ ಗಳು, ಮಾಡಿಫೈ ವಿನ್ಯಾಸದ ರಿಯರ್ ಬಂಪರ್ ಮತ್ತು ಎಲ್ಇಡಿ ಟೈಲ್ ಲೈಟ್ಸ್ ಗಳನ್ನು ಪಡೆದುಕೊಂಡಿರಲಿದೆ.

ಇದನ್ನೂ ಓದಿ: ರಗಡ್ ಲುಕ್ ನೊಂದಿಗೆ ಭರ್ಜರಿ ಫೀಚರ್ಸ್ ಹೊಂದಿರುವ ಹೊಸ ರೆನಾಲ್ಟ್ ಡಸ್ಟರ್ ಅನಾವರಣ

ಕ್ರೆಟಾ ಹೊಸ ಆವೃತ್ತಿಯಲ್ಲಿ ಒಳಾಂಗಣ ವಿನ್ಯಾಸದ ಜೊತೆಗೆ ಫೀಚರ್ಸ್ ಸಹ ಹೆಚ್ಚಿನ ಮಟ್ಟದಲ್ಲಿ ಬದಲಾವಣೆಗೊಂಡಿದ್ದು, ಈ ಹಿಂದಿನ ಮಾದರಿಯ ಪ್ರಮುಖ ಫೀಚರ್ಸ್ ಗಳೊಂದಿಗೆ ಹೊಸ ಡ್ಯುಯಲ್ ಟೋನ್ ಡ್ಯಾಶ್ ಬೋರ್ಡ್, 10.25 ಇಂಚಿನ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಬಾಷ್ ಸೌಂಡ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ವೈರ್ ಲೆಸ್ ಫೋನ್ ಚಾರ್ಜರ್, ಪನೊರಮಿಕ್ ಸನ್ ರೂಫ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಯುಎಸ್ ಬಿ ಟೈಪ್ ಸಿ ಚಾರ್ಜರ್ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಇದರೊಂದಿಗೆ ಹೊಸ ಕಾರಿನ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಕ್ರೆಟಾ ಮಾದರಿಯಲ್ಲಿ ಎಡಿಎಎಸ್ ಫೀಚರ್ಸ್ ನೀಡಲಾಗಿದೆ. ಹೊಸ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸುರಕ್ಷತೆ ಒದಗಿಸಲಿದ್ದು, ಇದು ಸಂಭಾವ್ಯ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಯಲಿದೆ. ಎಡಿಎಎಸ್ ಸೇಫ್ಟಿ ಫೀಚರ್ಸ್ ಪ್ಯಾಕೇಜ್ ನಲ್ಲಿ ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಎಮೆರ್ಜೆನ್ಸಿ ಬ್ರೇಕಿಂಗ್ ಸಿಸ್ಟಂ, ಹೈ ಭೀಮ್ ಅಸಿಸ್ಟ್, ಕೂಲಿಷನ್ ಅವಾಯ್ಡೆನ್ಸ್ ಮತ್ತು ಲೇನ್ ಕೀಪ್ ಅಸಿಸ್ಟ್ ಸೌಲಭ್ಯಗಳಿವೆ. ಇದರೊಂದಿಗೆ ಹೊಸ ಕಾರಿನಲ್ಲಿ ಆರು ಏರ್ ಬ್ಯಾಗ್ ಗಳು, ಪಾರ್ಕಿಂಗ್ ಸೆನ್ಸಾರ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

ಇದನ್ನೂ ಓದಿ: ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಸುರಕ್ಷಿತ ಕಾರುಗಳಿವು!

ಇನ್ನು ಹೊಸ ಕ್ರೆಟಾ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಆಯ್ಕೆಯೊಂದಿಗೆ ಮುಂದುವರಿಯುವ ಸಾಧ್ಯತೆಗಳಿದ್ದು, ವೆರ್ನಾದಲ್ಲಿರುವಂತೆ 1.5 ಲೀಟರ್ ಎನ್ಎ ಪೆಟ್ರೋಲ್, 1.5 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದರಲಿದೆ. ಇದರಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಹಲವಾರು ಟಾಪ್ ಎಂಡ್ ಫೀಚರ್ಸ್ ಹೊಂದಿರಲಿದ್ದು, ಬೆಲೆಯಲ್ಲೂ ಇದು ತುಸು ದುಬಾರಿಯಾಗಿರಲಿದೆ. ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ ಶೋರೂಂ ಪ್ರಕಾರ ರೂ. 10.87 ಲಕ್ಷದಿಂದ ರೂ. 19.20 ಲಕ್ಷ ಬೆಲೆ ಹೊಂದಿರುವ ಕ್ರೆಟಾ ಕಾರು ಹೊಸ ಮಾದರಿಯೊಂದಿಗೆ ಸುಮಾರು ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.